‘ಬೀಸ್ಟ್​ಗಿಂತ ನಾಲ್ಕುಪಟ್ಟು ಕೆಟ್ಟದಾಗಿದೆ’; ‘ಲಿಯೋ’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

‘ಕೈದಿ’, ‘ವಿಕ್ರಮ್’ ಸಿನಿಮಾದಲ್ಲಿ ಡ್ರಗ್ಸ್ ವಿಚಾರ ಹೈಲೈಟ್ ಆಗಿತ್ತು. ‘ಲಿಯೋ’ ಸಿನಿಮಾದಲ್ಲೂ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಇದೇ ವಿಚಾರದ ಮೇಲೆ ಫೋಕಸ್ ಮಾಡಿದ್ದಾರೆ. ತ್ರಿಷಾ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

‘ಬೀಸ್ಟ್​ಗಿಂತ ನಾಲ್ಕುಪಟ್ಟು ಕೆಟ್ಟದಾಗಿದೆ’; ‘ಲಿಯೋ’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್
ವಿಜಯ್
Follow us
ರಾಜೇಶ್ ದುಗ್ಗುಮನೆ
|

Updated on:Oct 19, 2023 | 12:31 PM

ದಳಪತಿ ವಿಜಯ್ (Thalapathy Vijay) ನಟನೆಯ ತಮಿಳು ಸಿನಿಮಾ ‘ಲಿಯೋ’​ ಇಂದು (ಅಕ್ಟೋಬರ್ 19) ರಿಲೀಸ್ ಆಗಿದೆ. ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್​’ (Ghost Movie ) ಕೂಡ ಇಂದೇ ರಿಲೀಸ್ ಆಗಿದ್ದು ಸಾಕಷ್ಟು ಸ್ಪರ್ಧೆ ಏರ್ಪಟ್ಟಿದೆ. ದಸರಾ ಪ್ರಯುಕ್ತ ಸಾಲು ಸಾಲು ರಜೆಗಳಿವೆ. ಇದು ಚಿತ್ರದ ಕಲೆಕ್ಷನ್​ ಹೆಚ್ಚಲು ಸಹಕಾರಿ ಆಗಲಿದೆ. ಸದ್ಯ ‘ಘೋಸ್ಟ್’ ಚಿತ್ರಕ್ಕೆ ಎಲ್ಲಾ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಆದರೆ, ‘ಲಿಯೋ’ ಸಿನಿಮಾಗೆ ಸೋಲಿನ ಮುನ್ಸೂಚನೆ ಸಿಕ್ಕಿದೆ. 2022ರಲ್ಲಿ ರಿಲೀಸ್ ಆಗಿ ಸೋತ ವಿಜಯ್ ನಟನೆಯ ‘ಬೀಸ್ಟ್​’ ಚಿತ್ರಕ್ಕಿಂತ ನಾಲ್ಕು ಪಟ್ಟು ಕೆಟ್ಟದಾಗಿ ‘ಲಿಯೋ’ ಇದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ದಳಪತಿ ವಿಜಯ್ ಅವರು ಒಪ್ಪಿಕೊಂಡ ಚಿತ್ರದ ಕೆಲಸವನ್ನು ಆದಷ್ಟು ಬೇಗ ಮುಗಿಸುತ್ತಾರೆ. ಜನವರಿಯಲ್ಲಿ ‘ವಾರಿಸು’ ರಿಲೀಸ್ ಆಗಿ ಹಿಟ್ ಆಯಿತು. ಈಗ ಹತ್ತೇ ತಿಂಗಳಲ್ಲಿ ಅವರ ಮತ್ತೊಂದು ಸಿನಿಮಾ ರಿಲೀಸ್ ಆಗಿದೆ. ‘ಲಿಯೋ’ ಚಿತ್ರವನ್ನು ನೋಡಿದವರು ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸುತ್ತಿದ್ದಾರೆ. ಸಿನಿಮಾ ಉತ್ತಮವಾಗಿಲ್ಲ ಎನ್ನುವ ಅಭಿಪ್ರಾಯಹೊರಹಾಕುತ್ತಿದ್ದಾರೆ.

‘ಬೀಸ್ಟ್​ಗಿಂತ ನಾಲ್ಕು ಪಟ್ಟು ಕೆಟ್ಟದಾಗಿದೆ’ ಎಂದು ಅಭಿಮಾನಿಯೋರ್ವ ಹೇಳಿಕೊಂಡಿದ್ದಾನೆ. ಕೆಲವರು ‘ಓವರ್ ಹೈಪ್ ಸಿನಿಮಾ’ ಎಂದಿದ್ದಾರೆ. ‘ಲಿಯೋ ಎಂದರೆ ಸಿಂಹ ಅಲ್ಲ, ಬೆಕ್ಕು’ ಎಂದು ಕೆಲವರು ಟೀಕೆ ಮಾಡಿದ್ದಾರೆ. ಈ ಮೂಲಕ ಸಿನಿಮಾಗೆ ಸೋಲಾಗುವ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ‘ಘೋಸ್ಟ್ ಮುಂದೆ ಯಾವ ಲಿಯೋನೂ ಇಲ್ಲ’; ಶಿವಣ್ಣನ ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರ

‘ಕೈದಿ’, ‘ವಿಕ್ರಮ್’ ಸಿನಿಮಾದಲ್ಲಿ ಡ್ರಗ್ಸ್ ವಿಚಾರ ಹೈಲೈಟ್ ಆಗಿತ್ತು. ‘ಲಿಯೋ’ ಸಿನಿಮಾದಲ್ಲೂ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಇದೇ ವಿಚಾರದ ಮೇಲೆ ಫೋಕಸ್ ಮಾಡಿದ್ದಾರೆ. ತ್ರಿಷಾ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:01 am, Thu, 19 October 23

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ