‘ಒಎಂಜಿ 2’ ಚಿತ್ರ ಹೇಗಿದೆ? ಸಿನಿಮಾ ನೋಡಿದ ಟ್ವಿಟರ್ ಮಂದಿ ಹೇಳಿದ್ದು ಹೀಗೆ

OMG 2 Movie Twitter Review: ಅಕ್ಷಯ್ ಕುಮಾರ್ ಅವರು ಸಾಲು ಸಾಲು ಸೋಲು ಕಂಡಿದ್ದಾರೆ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ಬಹುತೇಕ ಎಲ್ಲಾ ಸಿನಿಮಾಗಳು ಸೋಲು ಕಂಡಿವೆ. ಈಗ ‘ಒಎಂಜಿ 2’ ಚಿತ್ರದಿಂದ ಅವರು ಗೆಲ್ಲುವ ಭರವಸೆಯಲ್ಲಿ ಇದ್ದರು. ಈ ಭರವಸೆ ಈಡೇರುವ ಸಾಧ್ಯತೆ ದಟ್ಟವಾಗಿದೆ.

‘ಒಎಂಜಿ 2’ ಚಿತ್ರ ಹೇಗಿದೆ? ಸಿನಿಮಾ ನೋಡಿದ ಟ್ವಿಟರ್ ಮಂದಿ ಹೇಳಿದ್ದು ಹೀಗೆ
ಅಕ್ಷಯ್​ ಕುಮಾರ್​

Updated on: Aug 11, 2023 | 12:46 PM

ಅಕ್ಷಯ್ ಕುಮಾರ್, ಪಂಕಜ್ ತ್ರಿಪಾಠಿ (Pankaj Tripathi) ಹಾಗೂ ಯಾಮಿ ಗೌತಮ್ ನಟನೆಯ ‘ಒಎಂಜಿ 2’ ಸಿನಿಮಾ ಇಂದು (ಆಗಸ್ಟ್ 11) ರಿಲೀಸ್ ಆಗಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಈ ಸಿನಿಮಾ ಬಿಡುಗಡೆ ಆಗಿರುವುದರಿಂದ ಬಿಸ್ನೆಸ್ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ಸಿನಿಮಾ ನೋಡಿದ ಅನೇಕರು ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಅಕ್ಷಯ್ ಕುಮಾರ್ (Akshay Kumar) ಅವರಿಗೆ ದೊಡ್ಡ ಮಟ್ಟದ ಗೆಲುವು ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಅಕ್ಷಯ್ ಕುಮಾರ್ ಅವರು ಸಾಲು ಸಾಲು ಸೋಲು ಕಂಡಿದ್ದಾರೆ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ಬಹುತೇಕ ಎಲ್ಲಾ ಸಿನಿಮಾಗಳು ಸೋಲು ಕಂಡಿವೆ. ಈಗ ‘ಒಎಂಜಿ 2’ ಚಿತ್ರದಿಂದ ಅವರು ಗೆಲ್ಲುವ ಭರವಸೆಯಲ್ಲಿ ಇದ್ದರು. ಈ ಭರವಸೆ ಈಡೇರುವ ಸಾಧ್ಯತೆ ದಟ್ಟವಾಗಿದೆ. ಸಿನಿಮಾ ನೋಡಿದ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

‘ಒಎಂಜಿ 2’ ಸಿನಿಮಾ ಲೈಂಗಿಕ ಶಿಕ್ಷಣದ ಬಗ್ಗೆ ಇದೆ. ಈ ಕಾರಣಕ್ಕೆ ಸಿನಿಮಾಗೆ ಸೆನ್ಸಾರ್ ಮಾಡಲು ಸಾಕಷ್ಟು ಸಮಯ ಹಿಡಿದಿತ್ತು. ಅನೇಕ ಮಾರ್ಪಾಡುಗಳನ್ನು ಮಾಡಿದ್ದಲ್ಲದೆ, ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಲಾಗಿದೆ. ಈ ಕಾರಣದಿಂದ ಸಿನಿಮಾಗೆ ಹಿನ್ನಡೆ ಆಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ಆಗಿಲ್ಲ. ಸಿನಿಮಾ ನೋಡಿದ ಅನೇಕರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ಅಟಲ್​ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಪಂಕಜ್​​ ತ್ರಿಪಾಠಿ; ‘ಮೈ ಅಟಲ್​ ಹು’ ಫಸ್ಟ್​ ಲುಕ್​ ರಿಲೀಸ್​

‘ಇದೊಂದು ಪೈಸಾ ವಸೂಲ್ ಸಿನಿಮಾ. ಎಲ್ಲರೂ ನೋಡಲೇಬೇಕಾದ ಚಿತ್ರ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಅಕ್ಷಯ್ ಕುಮಾರ್ ಹಾಗೂ ಪಂಕಜ್ ತ್ರಿಪಾಠಿ ನಟನೆಯನ್ನು ಮೆಚ್ಚಿಕೊಂಡಿದ್ದಾರೆ. ಆದರೆ, ಕೆಲವರಿಗೆ ಈ ಸಿನಿಮಾ ಅಷ್ಟಾಗಿ ಇಷ್ಟವಾಗಿಲ್ಲ. ಈ ಬಗ್ಗೆಯೂ ಬರೆದುಕೊಳ್ಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us