ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ಹೇಗಿದೆ? ಇಲ್ಲಿದೆ ಟ್ವಿಟರ್ ವಿಮರ್ಶೆ

‘ಟೈಗರ್ 3’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಟ್ರೇಲರ್ ನೋಡಿದ ಅನೇಕರಿಗೆ ಗೊತ್ತಾಗಿತ್ತು. ಸಿನಿಮಾದಲ್ಲೂ ಅದು ಮುಂದುವರಿದಿದೆ. ಅನೇಕರಿಗೆ ಸಿನಿಮಾ ಇಷ್ಟವಾಗಿದೆ. ಇದನ್ನು ಬ್ಲಾಕ್​ಬಸ್ಟರ್ ಎಂದು ಕರೆದಿದ್ದಾರೆ. ಇನ್ನೂ ಕೆಲವರು ಸಿನಿಮಾ ಚೆನ್ನಾಗಿಲ್ಲ ಎಂದಿದ್ದಾರೆ.

ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ಹೇಗಿದೆ? ಇಲ್ಲಿದೆ ಟ್ವಿಟರ್ ವಿಮರ್ಶೆ
ಸಲ್ಮಾನ್​ ಖಾನ್​

Updated on: Nov 12, 2023 | 9:16 AM

ಸಲ್ಮಾನ್ ಖಾನ್ (Salman Khan) ನಟನೆಯ ‘ಟೈಗರ್ 3’ ಸಿನಿಮಾ ಇಂದು (ನವೆಂಬರ್ 12) ರಿಲೀಸ್ ಆಗಿದೆ. ಸಂಪ್ರದಾಯವನ್ನು ಬಿಟ್ಟು ಯಶ್ ರಾಜ್​ ಫಿಲ್ಮ್ಸ್ ಅವರು ಭಾನುವಾರ ಸಿನಿಮಾ ರಿಲೀಸ್ ಮಾಡಿದ್ದಾರೆ. ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಕತ್ರಿನಾ ಕೈಫ್ ನಾಯಕಿ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಹಾಗೂ ಹೃತಿಕ್ ರೋಷನ್ ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ಟೈಗರ್ 3’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಟ್ರೇಲರ್ ನೋಡಿದ ಅನೇಕರಿಗೆ ಗೊತ್ತಾಗಿತ್ತು. ಸಿನಿಮಾದಲ್ಲೂ ಅದು ಮುಂದುವರಿದಿದೆ. ಅನೇಕರಿಗೆ ಸಿನಿಮಾ ಇಷ್ಟವಾಗಿದೆ. ಇದನ್ನು ಬ್ಲಾಕ್​ಬಸ್ಟರ್ ಎಂದು ಕರೆದಿದ್ದಾರೆ. ಇನ್ನೂ ಕೆಲವರು ಸಿನಿಮಾ ಚೆನ್ನಾಗಿಲ್ಲ ಎಂದಿದ್ದಾರೆ.

‘ಒಂದೇ ಮಾತಲ್ಲಿ ಹೇಳಬೇಕೆಂದರೆ ಬ್ಲಾಕ್​ಬಸ್ಟರ್​. ‘ಟೈಗರ್ 3’ ದೀಪಾವಳಿ ವಿನ್ನರ್. ನಿರ್ದೇಶಕ ಮನೀಶ್ ಶರ್ಮ ಅವರು ನಮ್ಮನ್ನು ಇಂಪ್ರೆಸ್ ಮಾಡಿದ್ದಾರೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಇದೇ ಕೊನೆ ಅಲ್ಲ. ಈ ಯೂನಿವರ್ಸ್​​ನಲ್ಲಿ ಇನ್ನೂ ಕೆಲವು ಚಿತ್ರಗಳು ಬರೋದು ಇದೆ. ಆದರೆ, ಏನಿದು ಸಿನಿಮಾ? ಬೋರಿಂಗ್ ಆ್ಯಕ್ಷನ್ ದೃಶ್ಯ, ಕಥೆ ಅಂತೂ ಕೇಳೋದೇ ಬೇಡ’ ಎಂದು ಕೆಲವರು ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ‘ಬಿಗ್ ಬಾಸ್’ನಲ್ಲಿ ನಿರೂಪಕ ಸಲ್ಮಾನ್ ಖಾನ್ ಹಾಗೂ ಸ್ಪರ್ಧಿಗಳು ಪಡೆದ ಸಂಭಾವನೆ ಎಷ್ಟು ಕೋಟಿ ರೂಪಾಯಿ?

ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕೂಡ ‘ಟೈಗರ್ 3’ ಸಿನಿಮಾದಲ್ಲಿ ನಟಿಸಲಿದ್ದರೆ ಎಂದು ಹೇಳಲಾಗಿತ್ತು. ಆದರೆ, ಅವರು ಈ ಚಿತ್ರದಲ್ಲಿ ನಟಿಸಿಲ್ಲ ಎಂದು ಸಿನಿಮಾ ನೋಡಿದವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us