Shaakuntalam Twitter Review: ಸಮಂತಾನ ಶಾಕುಂತಲೆಯಾಗಿ ಇಷ್ಟಪಟ್ಟ ಅಭಿಮಾನಿಗಳು

ಸಮಂತಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಹಲವು ರೀತಿಯ ಪಾತ್ರಗಳನ್ನು ಅವರು ಮಾಡಿ ಗಮನ ಸೆಳೆದಿದ್ದಾರೆ. ಈಗ ಅವರು ಪೌರಾಣಿಕ ಪಾತ್ರದ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.

Shaakuntalam Twitter Review: ಸಮಂತಾನ ಶಾಕುಂತಲೆಯಾಗಿ ಇಷ್ಟಪಟ್ಟ ಅಭಿಮಾನಿಗಳು
ಸಮಂತಾ
Follow us
ರಾಜೇಶ್ ದುಗ್ಗುಮನೆ
|

Updated on: Apr 14, 2023 | 12:44 PM

ಇತ್ತೀಚಿನ ವರ್ಷಗಳಲ್ಲಿ ಆ್ಯಕ್ಷನ್ ಸಿನಿಮಾ ಮೂಲಕ ಗಮನ ಸೆಳೆದಿದ್ದ ನಟಿ ಸಮಂತಾ ರುತ್ ಪ್ರಭು ಅವರು ಈ ಬಾರಿ ಪೌರಾಣಿಕ ಕಥೆ ಆಯ್ದುಕೊಂಡಿದ್ದಾರೆ. ಸಂಸ್ಕೃತದ ನಾಟಕ ‘ಅಭಿಜ್ಞಾನ ಶಾಕುಂತಲಂ’ ಆಧರಿಸಿ ‘ಶಾಕುಂತಲಂ’ ಸಿನಿಮಾ ಸಿದ್ಧಗೊಂಡಿದೆ. ಈ ಸಿನಿಮಾದಲ್ಲಿ ಶಾಕುಂತಲೆಯಾಗಿ ಸಮಂತಾ (Samantha Ruth Prabhu) ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವರ ಪಾತ್ರ ಅಭಿಮಾನಿಗಳಿಗೆ ಇಷ್ಟ ಆಗಿದೆ. ಸಿನಿಮಾ ನೋಡಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ವಿಮರ್ಶೆ ತಿಳಿಸುತ್ತಿದ್ದಾರೆ. ಬಹುತೇಕರಿಗೆ ಈ ಸಿನಿಮಾ ಇಷ್ಟವಾಗಿದೆ.

ಶಾಕುಂತಲೆ ಹಾಗೂ ರಾಜ ದುಶ್ಯಂತ ಮಧ್ಯೆ ಪ್ರೀತಿ ಹುಟ್ಟುತ್ತದೆ. ಇದರ ಸುತ್ತ ಸಿನಿಮಾದ ಕಥೆ ಸಾಗುತ್ತದೆ. ಈ ಚಿತ್ರವನ್ನು ಗುಣಶೇಖರ್ ಅವರು ನಿರ್ದೇಶನ ಮಾಡಿದ್ದಾರೆ. ನೀಲಿಮಾ ಗುಣ ಮತ್ತು ದಿಲ್ ರಾಜು ಅವರು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಈಗ ಚಿತ್ರ ತೆರೆಗೆ ಬಂದಿದೆ. ಇಂದು (ಏಪ್ರಿಲ್ 14) ‘ಶಾಕುಂತಲಂ’ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಿದೆ. ಸಮಂತಾ ನಟನೆ ಜನರಿಗೆ ಇಷ್ಟವಾಗಿದೆ.

ಸಮಂತಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಹಲವು ರೀತಿಯ ಪಾತ್ರಗಳನ್ನು ಅವರು ಮಾಡಿ ಗಮನ ಸೆಳೆದಿದ್ದಾರೆ. ಈಗ ಅವರು ಪೌರಾಣಿಕ ಪಾತ್ರದ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.

ಇದನ್ನೂ ಓದಿ: Pushpa 2: ಪುಷ್ಪ2 ನಲ್ಲಿ ಸೊಂಟ ಬಳುಕಿಸಲಿದ್ದಾರೆಯೇ ಸಮಂತಾ? ಉತ್ತರಿಸಿದ ಚೆಲುವೆ

‘ಶಾಕುಂತಲಂ ಸಂಪೂರ್ಣ ಪಾತ್ರವರ್ಗ ಪೌರಾಣಿಕ ಜಗತ್ತನ್ನು ತೆರೆದಿಟ್ಟಿದೆ. ನಟಿ ಸಮಂತಾ ರುತ್ ಪ್ರಭು ಅವರದ್ದು ಅದ್ಭುತ ಅಭಿನಯ. ಅವರು ಮೊದಲ ಬಾರಿಗೆ ಹಿಂದಿಯಲ್ಲಿ ಡಬ್ ಮಾಡಿದ್ದಾರೆ. ಹಿಂದಿ ಮಾರುಕಟ್ಟೆಗಳಲ್ಲಿ ಅವರು ಹಿಡಿತ ಸಾಧಿಸುವುದು ಖಚಿತ’ ಎಂದು ಬಾಕ್ಸ್ ಆಫೀಸ್ ಪಂಡಿತ ರಮೇಶ್ ಬಾಲ ಟ್ವೀಟ್ ಮಾಡಿದ್ದಾರೆ.

ಮೋಹನ್ ಬಾಬು, ಜಿಶ್ಶು ಸೇನ್​ಗುಪ್ತಾ, ಗೌತಮಿ ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ದುಶ್ಯಂತ ರಾಜನಾಗಿ ದೇವ್ ಮೋಹನ್ ಗಮನ ಸೆಳೆದಿದ್ದಾರೆ. ಸಿನಿಮಾದ ಗ್ರಾಫಿಕ್ಸ್ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿದೆ. ‘ಇದು ಎಪಿಕ್. ಕಾಳಿದಾಸ ಕಾವ್ಯ ನನಗೆ ಸ್ಫೂರ್ತಿ ನೀಡಿದೆ. ಸಮಂತಾ ನಟನೆ ಎಕ್ಸಲೆಂಟ್. ದೇವ್ ಮೋಹನ್ ಹಾಗೂ ವಿಎಫ್​ಎಕ್ಸ್ ಉತ್ತಮವಾಗಿದೆ. ಆ್ಯಕ್ಷನ್ ತುಂಬಾ ಕಳಪೆ ಆಗಿದೆ. ಒಂದೊಳ್ಳೆಯ ಸಿನಿಮಾ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ. ಇನ್ನೂ ಕೆಲವರು ಸಿನಿಮಾ ಬಗ್ಗೆ ಮಿಶ್ರಪ್ರತಿಕ್ರಿಯೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು