‘ಈ ಚಿತ್ರ ಮಿಸ್ ಮಾಡಿಕೊಳ್ಳಬೇಡಿ’; ರಶ್ಮಿಕಾ ಮಂದಣ್ಣ ನಟನೆಯ ‘ಸೀತಾ ರಾಮಂ’ ಚಿತ್ರಕ್ಕೆ ಸಿಕ್ತು ಉತ್ತಮ ವಿಮರ್ಶೆ

Sita Ramam Movie Twitter Review‘ಸೀತಾ ರಾಮಂ’ ಚಿತ್ರ ಟ್ರೇಲರ್ ಮೂಲಕ ಗಮನ ಸೆಳೆದಿದೆ. ಎರಡು ಕಾಲಘಟ್ಟಗಳಲ್ಲಿ ಸಿನಿಮಾ ಸಾಗಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿತು. ಈ ಚಿತ್ರದಲ್ಲಿ ಮುಸ್ಲಿಂ ಹುಡುಗಿಯ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ.

‘ಈ ಚಿತ್ರ ಮಿಸ್ ಮಾಡಿಕೊಳ್ಳಬೇಡಿ’; ರಶ್ಮಿಕಾ ಮಂದಣ್ಣ ನಟನೆಯ ‘ಸೀತಾ ರಾಮಂ’ ಚಿತ್ರಕ್ಕೆ ಸಿಕ್ತು ಉತ್ತಮ ವಿಮರ್ಶೆ
‘ಸೀತಾ ರಾಮಂ’ ಚಿತ್ರಕ್ಕೆ ಉತ್ತಮ ವಿಮರ್ಶೆ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 05, 2022 | 5:01 PM

ರಶ್ಮಿಕಾ ಮಂದಣ್ಣ (Rashmika Mandanna), ದುಲ್ಕರ್ ಸಲ್ಮಾನ್, ಮೃಣಾಲ್ ಠಾಕೂರ್ ನಟನೆಯ ‘ಸೀತಾ ರಾಮಂ’ ಚಿತ್ರ (Sita Ramam) ಇಂದು (ಆಗಸ್ಟ್ 5) ರಿಲೀಸ್ ಆಗಿದೆ. ಮೊದಲ ದಿನ ಯಾವ ರೀತಿಯ ವಿಮರ್ಶೆ ಪಡೆದುಕೊಳ್ಳುತ್ತದೆ ಎಂಬುದರ ಆಧಾರದ ಮೇಲೆ ಸಿನಿಮಾದ ಭವಿಷ್ಯ ನಿರ್ಧಾರ ಆಗುತ್ತದೆ. ಅದೇ ರೀತಿ ‘ಸೀತಾ ರಾಮಂ’ ಚಿತ್ರ ಮೊದಲ ದಿನದ ಪರೀಕ್ಷೆಯಲ್ಲಿ ಪಾಸ್ ಆಗಿದೆ. ಚಿತ್ರಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ನೋಡಿದವರು ‘ಈ ಚಿತ್ರವನ್ನು ಮಿಸ್ ಮಾಡಿಕೊಳ್ಳಬೇಡಿ’ ಎಂದು ಬರೆದುಕೊಂಡಿದ್ದಾರೆ. ಈ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ.

‘ಸೀತಾ ರಾಮಂ’ ಚಿತ್ರ ಟ್ರೇಲರ್ ಮೂಲಕ ಗಮನ ಸೆಳೆದಿದೆ. ಎರಡು ಕಾಲಘಟ್ಟಗಳಲ್ಲಿ ಸಿನಿಮಾ ಸಾಗಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿತು. ಈ ಚಿತ್ರದಲ್ಲಿ ಮುಸ್ಲಿಂ ಹುಡುಗಿಯ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಅವರ ನಟನೆ ಪ್ರೇಕ್ಷಕರಿಗೆ ಇಷ್ಟವಾಗಿದೆ. ದುಲ್ಕರ್ ಸಲ್ಮಾನ್ ಅವರು ಸೇನಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿರುವುದು ಚಿತ್ರತಂಡದ ಖುಷಿ ಹೆಚ್ಚಿಸಿದೆ.

ಇದನ್ನೂ ಓದಿ
Image
Rashmika Mandanna: ಹಲವು ದೇಶಗಳಲ್ಲಿ ರಶ್ಮಿಕಾ ಮಂದಣ್ಣ ಸಿನಿಮಾ ಬ್ಯಾನ್​; ‘ಸೀತಾ ರಾಮಂ​’ ಚಿತ್ರತಂಡ ಮಾಡಿದ ತಪ್ಪೇನು?
Image
‘ರಶ್ಮಿಕಾ ಮಂದಣ್ಣ ಡಾರ್ಲಿಂಗ್’; ಕರಣ್ ಜೋಹರ್ ಶೋನಲ್ಲಿ ಮಾತನಾಡಿದ ವಿಜಯ್ ದೇವರಕೊಂಡ
Image
Rashmika Mandanna: ರಶ್ಮಿಕಾ ಮಂದಣ್ಣ ಹೊಸ ಫೋಟೋ ನೋಡಿ ಕಣ್ಣರಳಿಸಿದ ಪಡ್ಡೆಗಳು
Image
ಕಪ್ಪು-ಬಿಳುಪು ಫೋಟೋ ಮೂಲಕ ಟೆಂಪ್ರೇಚರ್ ಹೆಚ್ಚಿಸಿದ ರಶ್ಮಿಕಾ ಮಂದಣ್ಣ

‘ಸೀತಾ ರಾಮಂ ಅದ್ಭುತ ಸಿನಿಮಾ. ದುಲ್ಕರ್ ಹಾಗೂ ಮೃಣಾಲ್ ಇಡೀ ಸಿನಿಮಾ ಆವರಿಸಿಕೊಂಡಿದ್ದಾರೆ. ಕೊನೆಯಲ್ಲಿ ಸಾಕಷ್ಟು ಎಮೋಷನ್ ಇದೆ. ಸಿನಿಮಾ ಎರಡನೇ ಬಾರಿ ನೋಡಿದರೂ ತಪ್ಪಿಲ್ಲ’ ಎಂದು ಅಭಿಮಾನಿಯೊಬ್ಬರು ಬರೆದುಕೊಂಡಿದ್ದಾರೆ. ‘ಇತ್ತೀಚಿನ ವರ್ಷಗಳಲ್ಲಿ ನೋಡಿದ ಒಂದೊಳ್ಳೆಯ ಲವ್​​ಸ್ಟೋರಿ ಸಿನಿಮಾಗಳಲ್ಲಿ ಸೀತಾ ರಾಮಂ ಕೂಡ ಒಂದು. ಹನು ರಾಘವಪುಡಿ ಅವರೇ ಒಂದೊಳ್ಳೆಯ ಹಿಟ್​ ಕೊಟ್ಟಿದ್ದೀರಿ’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹಲವು ದೇಶಗಳಲ್ಲಿ ರಶ್ಮಿಕಾ ಮಂದಣ್ಣ ಸಿನಿಮಾ ಬ್ಯಾನ್​; ‘ಸೀತಾ ರಾಮಂ​’ ಚಿತ್ರತಂಡ ಮಾಡಿದ ತಪ್ಪೇನು?

ದುಲ್ಕರ್ ಸಲ್ಮಾನ್ ಅವರು ರೊಮ್ಯಾಂಟಿಕ್ ಚಿತ್ರಗಳ ಮೂಲಕ ಗಮನ ಸೆಳೆದವರು. ಈ ಸಿನಿಮಾ ತೆರೆಕಂಡ ಬಳಿಕ ರೊಮ್ಯಾಂಟಿಕ್ ಚಿತ್ರಗಳನ್ನು ಮಾಡುವುದಿಲ್ಲ ಎಂದು ಹೇಳಿದ್ದರು. ಈ ಸಿನಿಮಾ ನೋಡಿದ ಬಳಿಕ ಅನೇಕರು ಅವರು ರೊಮ್ಯಾಂಟಿಕ್ ಚಿತ್ರದಿಂದ ಬ್ರೇಕ್ ತೆಗೆದುಕೊಳ್ಳದಂತೆ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:54 pm, Fri, 5 August 22

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್