AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram Twitter Review: ಮುಂಜಾನೆಯೇ ‘ವಿಕ್ರಮ್​’ ಚಿತ್ರ ನೋಡಿ ‘ಮ್ಯಾಜಿಕ್​’ ಅಂತ ಹೊಗಳಿದ ಪ್ರೇಕ್ಷಕರು

Vikram | Kamal Haasan : ‘ವಿಕ್ರಮ್​’ ಚಿತ್ರದ ಮೇಕಿಂಗ್​ ಗುಣಮಟ್ಟ ಗಮನ ಸೆಳೆಯುತ್ತಿದೆ. ಕಮಲ್​ ಹಾಸನ್​ ಅಭಿಮಾನಿಗಳಿಗೆ ಈ ಸಿನಿಮಾ ತುಂಬ ಇಷ್ಟ ಆಗುತ್ತಿದೆ.

Vikram Twitter Review: ಮುಂಜಾನೆಯೇ ‘ವಿಕ್ರಮ್​’ ಚಿತ್ರ ನೋಡಿ ‘ಮ್ಯಾಜಿಕ್​’ ಅಂತ ಹೊಗಳಿದ ಪ್ರೇಕ್ಷಕರು
ಕಮಲ್ ಹಾಸನ್
TV9 Web
| Updated By: ಮದನ್​ ಕುಮಾರ್​|

Updated on:Jun 03, 2022 | 11:14 AM

Share

ಕಮಲ್​ ಹಾಸನ್ (Kamal Haasan)​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರ ನಟನೆಯ ಸಿನಿಮಾಗಳು ಬಿಡುಗಡೆಯಾದರೆ ಭರ್ಜರಿ ಓಪನಿಂಗ್ ಪಡೆದುಕೊಳ್ಳುತ್ತವೆ. ಇತ್ತೀಚಿನ ವರ್ಷಗಳಲ್ಲಿ ಅವರು ನಟನೆಯಿಂದ ಕೊಂಚ ದೂರ ಉಳಿದುಕೊಂಡಿದ್ದರು. ಆದರೆ ಈಗ ಸಖತ್​ ಮಾಸ್​ ಆಗಿ ಕಮ್​ಬ್ಯಾಕ್​ ಮಾಡಿದ್ದಾರೆ. ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಸಿನಿಮಾ (Vikram Movie) ಇಂದು (ಜೂನ್​ 3) ರಿಲೀಸ್​ ಆಗಿ ಅಬ್ಬರಿಸುತ್ತಿದೆ. ಹಲವು ಕಡೆಗಳಲ್ಲಿ ಮುಂಜಾನೆಯೇ ಶೋ ಆರಂಭ ಆಗಿದೆ. ಫಸ್ಟ್​ ಡೇ ಫಸ್ಟ್​ ಶೋ ನೋಡಿ ಬಂದ ಅಭಿಮಾನಿಗಳು ಈ ಚಿತ್ರದ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ವಿಮರ್ಶೆ (Vikram Twitter Review) ತಿಳಿಸಿದ್ದಾರೆ. ಈ ಚಿತ್ರಕ್ಕೆ ಲೋಕೇಶ್​ ಕನಗರಾಜ್​ ನಿರ್ದೇಶನ ಮಾಡಿದ್ದು, ‘ರಾಜ್​ ಕಮಲ್​ ಫಿಲ್ಮ್ಸ್​ ಇಂಟರ್​ನ್ಯಾಷನಲ್​’ ಬ್ಯಾನರ್​ ಮೂಲಕ ನಿರ್ಮಾಣ ಆಗಿದೆ.

‘ವಿಕ್ರಮ್​’ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಕಮಲ್​ ಹಾಸನ್​ ಜೊತೆಗೆ ವಿಜಯ್​ ಸೇತುಪತಿ, ಫಹಾದ್​ ಫಾಸಿಲ್​ ಕೂಡ ಮಿಂಚಿದ್ದಾರೆ. ಸೂರ್ಯ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಕಲಾವಿದರ ಕಾಂಬಿನೇಷನ್​ ಕಾರಣದಿಂದ ಚಿತ್ರಕ್ಕೆ ಹೈವೋಲ್ಟೇಜ್​ ಬಂದಂತೆ ಆಗಿದೆ. ಇದು ಪ್ರೇಕ್ಷಕರಿಗೆ ಇಷ್ಟ ಆಗಿದೆ.

ಇದನ್ನೂ ಓದಿ
Image
Vikram First Half Review: ಹೇಗಿದೆ ‘ವಿಕ್ರಮ್​’ ಸಿನಿಮಾ ಮೊದಲಾರ್ಧ? ಇಲ್ಲಿದೆ ಫಸ್ಟ್​ ಹಾಫ್ ರಿವ್ಯೂ
Image
ಬೆಂಗಳೂರಲ್ಲಿ ಹೇಗಿತ್ತು ನೋಡಿ ಕಮಲ್ ಹಾಸನ್ ‘ವಿಕ್ರಮ್​’ ಸಿನಿಮಾ ಪ್ರಮೋಷನ್
Image
Vikram Movie on Burj Khalifa: ಕಿಚ್ಚ ಸುದೀಪ್​ ಹಾದಿಯಲ್ಲಿ ಸಾಗ್ತಿದ್ದಾರೆ ಕಮಲ್​ ಹಾಸನ್​; ಕನ್ನಡದ ಟ್ರೆಂಡ್​ ಫಾಲೋ ಮಾಡ್ತಿದೆ ‘ವಿಕ್ರಮ್​’ ಚಿತ್ರ
Image
ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಚಿತ್ರಕ್ಕೆ 13 ಕಡೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; ಸಿಕ್ಕ ಪ್ರಮಾಣಪತ್ರ ಯಾವುದು?

ಇಂಟರ್​ವಲ್​ ದೃಶ್ಯ ನೋಡಿದ ಪ್ರೇಕ್ಷಕರು ಫಿದಾ ಆಗಿದ್ದಾರೆ. ಅನೇಕ ಮಂದಿ ಆ ಬಗ್ಗೆಯೇ ಟ್ವೀಟ್​ ಮಾಡುತ್ತಿದ್ದಾರೆ. ಒಟ್ಟಾರೆ ಸಿನಿಮಾದ ಮೇಕಿಂಗ್​ ಕಂಡು ಕಮಲ್​ ಹಾಸನ್​ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇದರಿಂದ ಚಿತ್ರಕ್ಕೆ ಉತ್ತಮವಾದ ಕಲೆಕ್ಷನ್​ ಆಗುವ ಸಾಧ್ಯತೆ ದಟ್ಟವಾಗಿದೆ.

ನಿರ್ದೇಶಕ ಲೋಕೇಶ್​ ಕನಗರಾಜ್​ ಅವರ ಮೇಲೆ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಯ ಮಟ್ಟವನ್ನು ತಲುಪುವಲ್ಲಿ ಅವರು ಯಶಸ್ವಿ ಆಗಿದ್ದಾರೆ ಎಂಬ ಅಭಿಪ್ರಾಯ ಪ್ರೇಕ್ಷಕರಿಂದ ಕೇಳಿಬಂದಿದೆ. ‘ಇದು ನಿಜವಾಗಿಯೂ ಲೋಕೇಶ್​ ಕನಗರಾಜ್ ಶೈಲಿಯ ಚಿತ್ರ. ಒಂದು ಮ್ಯಾಜಿಕ್​ ರೀತಿಯಲ್ಲಿ ಇದೆ’ ಎಂದು ಪ್ರೇಕ್ಷಕರು ಟ್ವೀಟ್​ ಮಾಡಿದ್ದಾರೆ.

‘ವಿಕ್ರಮ್​’ ಸಿನಿಮಾದಲ್ಲಿ ಸಾಹಸ ದೃಶ್ಯಗಳು ಮತ್ತು ಚೇಸಿಂಗ್​ ದೃಶ್ಯಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಒಟ್ಟಾರೆಯಾಗಿ ಚಿತ್ರದ ಮೇಕಿಂಗ್​ ಗುಣಮಟ್ಟ ಗಮನ ಸೆಳೆಯುತ್ತಿದೆ. ಕಲಾವಿದರ ನಟನೆಗೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಬಾಕ್ಸ್​​ ಆಫೀಸ್​ನಲ್ಲಿ ‘ವಿಕ್ರಮ್​’ ಸಿನಿಮಾ ಜಯಭೇರಿ ಬಾರಿಸುವ ಸೂಚನೆ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:21 am, Fri, 3 June 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ