AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಕೇಳಿಬಂದ ಮದುವೆ, ಡೇಟಿಂಗ್ ವದಂತಿಗೆ ಮೃಣಾಲ್ ಠಾಕೂರ್ ಬ್ರೇಕ್

ನಟಿ ಮೃಣಾಲ್ ಠಾಕೂರ್ ಅವರ ವೈಯಕ್ತಿಕ ಜೀವನದ ಬಗ್ಗೆ ಕೇಳಿಬಂದ ವದಂತಿಗಳು ಒಂದೆರಡಲ್ಲ. ಆದರೆ ಅವುಗಳನ್ನು ಮೃಣಾಲ್ ಅವರು ಗಂಭೀರವಾಗಿ ಪರಿಗಣಿಸಿಲ್ಲ. ಸದ್ಯಕ್ಕೆ ಅವರು ಕೆಲಸದ ಬಗ್ಗೆ ಗಮನ ಹರಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಬಗೆಗಿನ ಗಾಸಿಪ್​ಗಳ ಬಗ್ಗೆ ಮೃಣಾಲ್ ಠಾಕೂರ್ ಮಾತನಾಡಿದ್ದಾರೆ.

ಪದೇ ಪದೇ ಕೇಳಿಬಂದ ಮದುವೆ, ಡೇಟಿಂಗ್ ವದಂತಿಗೆ ಮೃಣಾಲ್ ಠಾಕೂರ್ ಬ್ರೇಕ್
Mrunal ThakurImage Credit source: Instagram/MrunalThakur
ಮದನ್​ ಕುಮಾರ್​
|

Updated on: Apr 16, 2026 | 4:53 PM

Share

ಚಿತ್ರರಂಗದ ತಾರೆಯರ ಬಗ್ಗೆ ವದಂತಿಗಳು ಹರಡುವುದು ಹೊಸದೇನಲ್ಲ. ಸದ್ಯ ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ನಟಿ ಮೃಣಾಲ್ ಠಾಕೂರ್ (Mrunal Thakur) ಈಗ ಇಂಥದ್ದೇ ಗಾಸಿಪ್‌ಗಳಿಗೆ ಖಡಕ್ ಆಗಿ ಉತ್ತರ ನೀಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಮೃಣಾಲ್ ಠಾಕೂರ್ ಮತ್ತು ದಕ್ಷಿಣ ಭಾರತದ ಖ್ಯಾತ ನಟ ಧನುಷ್ (Dhanush) ಪ್ರೀತಿಸುತ್ತಿದ್ದಾರೆ ಹಾಗೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಜೋರಾಗಿ ಕೇಳಿಬಂದಿತ್ತು. ಆದರೆ, ಇಬ್ಬರೂ ಈ ಸುದ್ದಿಯನ್ನು ನಗುನಗುತ್ತಲೇ ತಳ್ಳಿಹಾಕಿದ್ದರು.

ಇದಾದ ಬೆನ್ನಲ್ಲೇ, ಹಿಂದಿ ಚಿತ್ರವೊಂದರ ಸಹನಟನ ಜೊತೆ ಮೃಣಾಲ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು. ತಮ್ಮ ಮದುವೆ ಮತ್ತು ಸಂಬಂಧದ ಬಗ್ಗೆ ಕೇಳಲಾದ ಪ್ರಶ್ನೆಗೆ ಮೃಣಾಲ್ ಬಹಳ ತಮಾಷೆಯಾಗಿ ಉತ್ತರಿಸಿದ್ದಾರೆ. ಸದ್ಯಕ್ಕೆ ತಮಗೆ ಪ್ರೀತಿ ಅಥವಾ ಮದುವೆಗೆ ಸಮಯವೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಇತ್ತೀಚೆಗೆ ನನ್ನ ಕಾಲಿನ ಪೆಟ್ಟಾಗಿದೆ. ನನ್ನ ಕೆಲಸದ ಒತ್ತಡ ಎಷ್ಟಿದೆ ಎಂದರೆ, ಕಾಲಿಗೆ ಸರಿಯಾಗಿ ಚಿಕಿತ್ಸೆ ಕೊಡಿಸಿಕೊಳ್ಳಲು ಕೂಡ ನನಗೆ ಸಮಯ ಸಿಗುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ, ಸಂಬಂಧ ಬೆಳೆಸಲು ನನಗೆ ಸಮಯ ಎಲ್ಲಿಂದ ಸಿಗಬೇಕು? ನಾನು ಮಾಡುತ್ತಿರುವ ಕೆಲಸದಿಂದ ನನ್ನನ್ನು ಗುರುತಿಸಬೇಕೇ ಹೊರತು, ನಾನು ಯಾರ ಜೊತೆ ಡೇಟಿಂಗ್ ಮಾಡುತ್ತಿದ್ದೇನೆ ಎನ್ನುವುದರ ಮೇಲಲ್ಲ’ ಎಂದು ಮೃಣಾಲ್ ಹೇಳಿದ್ದಾರೆ.

ಮಾಧ್ಯಮಗಳಲ್ಲಿ ಸದಾ ತಮ್ಮ ಬಗ್ಗೆ ಏನಾದರೂ ಒಂದು ಸುದ್ದಿ ಇರುತ್ತದೆ ಎಂದು ಮೃಣಾಲ್ ಅಭಿಪ್ರಾಯಪಟ್ಟಿದ್ದಾರೆ. ‘ಕೆಲವೊಮ್ಮೆ ನಾನು ಸಿನಿಮಾದಲ್ಲಿ ನಟಿಸುತ್ತಿದ್ದೇನೆ ಎಂಬ ಸುದ್ದಿ ಬರುತ್ತದೆ. ಇನ್ನು ಕೆಲವು ಬಾರಿ ಸಿನಿಮಾದಿಂದ ಹೊರಬಂದಿದ್ದೇನೆ ಎನ್ನಲಾಗುತ್ತದೆ. ಮಗದೊಮ್ಮೆ ನನ್ನ ವೈಯಕ್ತಿಕ ಜೀವನದ ಬಗ್ಗೆ ಚರ್ಚೆ ನಡೆಯುತ್ತದೆ. ನಾನು ಇಂತಹ ಯಾವುದೇ ವದಂತಿಗಳನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:  ತೆಲುಗು ಕುಟುಂಬದ ಸೊಸೆ ಆಗುತ್ತಾರಾ ಮೃಣಾಲ್ ಠಾಕೂರ್?

ಸದ್ಯಕ್ಕೆ ಸಿನಿಮಾ ವೃತ್ತಿಜೀವನವೇ ತಮ್ಮ ಮೊದಲ ಆದ್ಯತೆ ಎಂದು ಮೃಣಾಲ್ ಠಾಕೂರ್ ಸ್ಪಷ್ಟವಾಗಿ ಹೇಳುವ ಮೂಲಕ ಎಲ್ಲಾ ಗಾಳಿ ಸುದ್ದಿಗಳಿಗೆ ತೆರೆ ಎಳೆದಿದ್ದಾರೆ. ಅವರು ನಟಿಸಿದ ತೆಲುಗಿನ ‘ಡಕಾಯಿತ್: ಎ ಲವ್ ಸ್ಟೋರಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿ ಸಾಧಾರಣ ಕಲೆಕ್ಷನ್ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?