ಅಟ್ಲಿ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ಜೋಡಿ ಆಗ್ತಾರಾ ಮೃಣಾಲ್ ಠಾಕೂರ್?

ನಟ ಅಲ್ಲು ಅರ್ಜುನ್ ಅವರು ಅಟ್ಲಿ ಜೊತೆ ಮಾಡುತ್ತಿರುವ ಸಿನಿಮಾ ಬಗ್ಗೆ ಹಲವು ಇಂಟರೆಸ್ಟಿಂಗ್ ವಿಷಯಗಳು ಕೇಳಿಬರುತ್ತಿವೆ. ಈ ಚಿತ್ರಕ್ಕೆ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಬಾಲಿವುಡ್ ನಟಿ ಮೃಣಾಲ್ ಠಾಕೂರ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಅಟ್ಲಿ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ಜೋಡಿ ಆಗ್ತಾರಾ ಮೃಣಾಲ್ ಠಾಕೂರ್?
Mrunal Thakur, Allu Arjun

Updated on: Apr 25, 2025 | 10:33 PM

ನಿರ್ದೇಶಕ ಅಟ್ಲಿ (Atlee) ಮತ್ತು ನಟ ಅಲ್ಲು ಅರ್ಜುನ್ ಅವರು ಜೊತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಮೂಡಿದೆ. ಯಾಕೆಂದರೆ, ಇದು ಪವರ್​ಫುಲ್ ಕಾಂಬಿನೇಷನ್​. ‘ಪುಷ್ಪ 2’ ಸಿನಿಮಾದ ಗ್ರ್ಯಾಂಡ್ ಸಕ್ಸಸ್ ಬಳಿಕ ಅಲ್ಲು ಅರ್ಜುನ್ (Allu Arjun) ಅವರು ಈ ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಈ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಈಗ ಪಾತ್ರವರ್ಗದ ಬಗ್ಗೆ ಕೆಲವು ಗಾಸಿಪ್ ಕೇಳಿಬರುತ್ತಿವೆ. ವರದಿಗಳ ಪ್ರಕಾರ, ಬಾಲಿವುಡ್ ನಟಿ ಮೃಣಾಲ್ ಠಾಕೂರ್ (Mrunal Thakur) ಅವರು ಈ ಸಿನಿಮಾಗೆ ಹೀರೋಯಿನ್ ಆಗಲಿದ್ದಾರೆ.

ಹಿಂದಿ ಚಿತ್ರರಂಗದಲ್ಲಿ ಮೃಣಾಲ್ ಠಾಕೂರ್ ಅವರು ಹೆಸರು ಮಾಡಿದ್ದಾರೆ. ಅಲ್ಲದೇ ತೆಲುಗು ಚಿತ್ರರಂಗದಲ್ಲಿ ಕೂಡ ಅವರು ಖ್ಯಾತಿ ಗಳಿಸಿದ್ದಾರೆ. ಟಾಲಿವುಡ್​ನಲ್ಲಿ ಅವರು ನಟಿಸಿದ ‘ಸೀತಾ ರಾಮಂ’, ‘ಹಾಯ್ ನಾನ್ನ’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಈಗ ಅವರನ್ನು ಅಲ್ಲು ಅರ್ಜುನ್ ನಟನೆಯ ಹೊಸ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಈ ಬೆಳವಣಿಗೆ ಬಗ್ಗೆ ಚಿತ್ರತಂಡದಿಂದ ಇನ್ನೂ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಮೃಣಾಲ್ ಠಾಕೂರ್ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಇರುವುದರಿಂದ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿಕೊಂಡಿದ್ದರೆ ಅಚ್ಚರಿ ಏನಿಲ್ಲ. ಸದ್ಯ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ
ಹೆಸರು ಬದಲಾವಣೆ ಮಾಡಿಕೊಳ್ಳಲಿರುವ ಅಲ್ಲು ಅರ್ಜುನ್, ಕಾರಣವೇನು?
ಚಿತ್ರರಂಗದಲ್ಲಿ 22 ವರ್ಷ ಪೂರೈಸಿದ ಅಲ್ಲು ಅರ್ಜುನ್; ಮುಂದಿದೆ ದೊಡ್ಡ ಸವಾಲು
‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಮಾಹಿತಿ ಕೊಟ್ಟ ನಿರ್ಮಾಪಕ
ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲುಗೆ ಶಿಫ್ಟ್

ಅಟ್ಲಿ-ಅಲ್ಲು ಅರ್ಜುನ್ ಕಾಂಬಿನೇಷನ್​ನ ಸಿನಿಮಾ ಬಗ್ಗೆ ಇನ್ನೊಂದು ಇಂಟರೆಸ್ಟಿಂಗ್ ಗಾಸಿಪ್ ಕೇಳಿಬಂದಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ತ್ರಿಬಲ್ ರೋಲ್ ಮಾಡಲಿದ್ದಾರೆ ಎನ್ನಲಾಗಿದೆ. ತಂದೆ ಹಾಗೂ ಇಬ್ಬರು ಮಕ್ಕಳ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಮನೆ ಎದುರು ಅಭಿಮಾನಿಗಳ ದಂಡು; ಎಚ್ಚರಿಕೆಯಿಂದ ನಡೆದುಕೊಂಡ ನಟ

ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಮುಂಬೈ ಮತ್ತು ಚೆನ್ನೈನಲ್ಲಿ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಕೆಲವೇ ದಿನಗಳ ಹಿಂದೆ ಮುಂಬೈನಲ್ಲಿ ಅಲ್ಲು ಅರ್ಜುನ್ ಅವರ ಲುಕ್ ಟೆಸ್ಟ್ ಕೂಡ ಮಾಡಲಾಗಿದೆ. ‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.