ಧನುಷ್ ಜತೆ ಡೇಟಿಂಗ್ ಗಾಸಿಪ್: ಪ್ರೀತಿ ಬಗ್ಗೆ ಮನಸಾರೆ ಮಾತನಾಡಿದ ಮೃಣಾಲ್ ಠಾಕೂರ್

ಸ್ಟಾರ್ ಕಲಾವಿದರಾದ ಮೃಣಾಲ್ ಠಾಕೂರ್ ಮತ್ತು ಧನುಷ್ ಅವರು ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದಾರೆ. ಅವರಿಬ್ಬರ ನಡುವೆ ಪ್ರೀತಿ ಮೂಡಿದೆ ಎಂಬ ಗಾಸಿಪ್ ಇದೆ. ಅದನ್ನು ಅವರು ಬಹಿರಂಗವಾಗಿ ಒಪ್ಪಿಕೊಂಡಿಲ್ಲವಾದರೂ ಗಾಸಿಪ್ ಜೋರಾಗಿ ಕೇಳಿಬರುತ್ತಿದೆ. ಈ ನಡುವೆ ಮಣಾಲ್ ಅವರು ಪ್ರೀತಿಯ ಬಗ್ಗೆ ಮಾತನಾಡಿದ್ದಾರೆ.

ಧನುಷ್ ಜತೆ ಡೇಟಿಂಗ್ ಗಾಸಿಪ್: ಪ್ರೀತಿ ಬಗ್ಗೆ ಮನಸಾರೆ ಮಾತನಾಡಿದ ಮೃಣಾಲ್ ಠಾಕೂರ್
Mrunal Thakur, Dhanush

Updated on: Feb 03, 2026 | 4:29 PM

ನಟಿ ಮೃಣಾಲ್ ಠಾಕೂರ್ ಅವರು ನಟ ಧನುಷ್ (Dhanush) ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್ ಇದೆ. ಸದ್ಯಕ್ಕಂತೂ ಈ ಬಗ್ಗೆ ಅವರಿಬ್ಬರು ಸಾವರ್ಜನಿಕವಾಗಿ ಮಾತನಾಡಿಲ್ಲ. ಆದರೂ ಹಲವು ಅಂತೆ-ಕಂತೆಗಳು ಕೇಳಿಬರುತ್ತಿವೆ. ಬಾಲಿವುಡ್​​ನಲ್ಲಿ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಡಿಮ್ಯಾಂಡ್ ಹೊಂದಿರುವ ಮೃಣಾಲ್ ಠಾಕೂರ್ (Mrunal Thakur) ಅವರು ಈಗ ಪ್ರೀತಿಯ ಬಗ್ಗೆ ಮಾತನಾಡಿದ್ದಾರೆ. ಎಲ್ಲರಿಗೂ ಪ್ರೀತಿ ಆಗಬೇಕು ಎಂದು ಅವರು ಹೇಳಿದ್ದಾರೆ. ಅಂದಹಾಗೆ, ಅವರು ಈ ವಿಷಯ ಮಾತನಾಡಿರುವುದು ಹೊಸ ಹಾಡಿನ ಪ್ರಚಾರದ ವೇಳೆ.

ಮೃಣಾಲ್ ಠಾಕೂರ್ ಮತ್ತು ದುಲ್ಕರ್ ಸಲ್ಮಾನ್ ಅವರು ‘ಸೀತಾ ರಾಮಂ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದರು. ಈಗ ಅವರಿಬ್ಬರು ಜೊತೆಯಾಗಿ ‘ಬೀಗಿ ಬೀಗಿ..’ ಹಾಡಿನಲ್ಲಿ ಅಭಿನಯಿಸಿದ್ದಾರೆ. ಎ.ಆರ್. ರೆಹಮಾನ್ ಅವರು ಈ ಮ್ಯೂಸಿಕ್ ವಿಡಿಯೋಗೆ ಸಂಗೀತ ನೀಡಿದ್ದಾರೆ. ಈ ಲವ್ ಸಾಂಗ್ ಬಗ್ಗೆ ಮಾತನಾಡುವಾಗ ಮೃಣಾಲ್ ಠಾಕೂರ್ ಅವರು ಪ್ರೀತಿ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

‘ಪ್ರೀತಿ ಎಂಬುದು ಒಂದು ಸುಂದರವಾದ ಭಾವನೆ. ಈ ಭೂಮಿಯ ಮೇಲಿರುವ ಎಲ್ಲರಿಗೂ ಪ್ರೀತಿ ಆಗಬೇಕು. ಅದು ನಿಮ್ಮನ್ನು ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತದೆ. ನಿಮ್ಮೊಳಗಿನ ಮಗುವಿನಂತಹ ವ್ಯಕ್ತಿತ್ವವನ್ನು ಅವರು ಪೋಷಿಸುತ್ತದೆ. ಜಗತ್ತಿನಲ್ಲಿನ ಸುಂದರವಾಗಿ ಸಂಗತಿಗಳಲ್ಲಿ ಪ್ರೀತಿ ಕೂಡ ಒಂದಾಗಿದೆ. ಎಲ್ಲರಿಗೂ ಜೀವನದಲ್ಲಿ ಪ್ರೀತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಮೃಣಾಲ್ ಠಾಕೂರ್ ಅವರು ಹೇಳಿದ್ದಾರೆ.

ಇಂದಲ್ಲ ನಾಳೆ ಮೃಣಾಲ್ ಠಾಕೂರ್ ಅವರು ಧನುಷ್ ಜೊತೆಗಿನ ಡೇಟಿಂಗ್ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದಾರೆ. ಈಗಾಗಲೇ ಅವರ ಬಗ್ಗೆ ಹಲವು ಬಗೆಯ ಗಾಸಿಪ್ ಹರಿದಾಡಿದೆ. ಶೀಘ್ರದಲ್ಲೇ ಅವರು ಮದುವೆ ಆಗುತ್ತಾರೆ ಎಂದು ಕೂಡ ಸುದ್ದಿ ಹಬ್ಬಿದೆ.

ಇದನ್ನೂ ಓದಿ: ಧನುಷ್ ಜೊತೆ ಮೃಣಾಲ್ ಠಾಕೂರ್ ಮದುವೆ? ಇಬ್ಬರ ನಡುವೆ ವಯಸ್ಸಿನ ಅಂತರ

2025ರ ಆಗಸ್ಟ್ ತಿಂಗಳಲ್ಲಿ ಮೃಣಾಲ್ ಠಾಕೂರ್ ಮತ್ತು ಧನುಷ್ ಅವರು ‘ಸನ್ ಆಫ್ ಸರ್ದಾರ್ 2’ ಸಿನಿಮಾದ ಪ್ರೀಮಿಯರ್ ಶೋನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆಗಿನಿಂದ ಅವರಿಬ್ಬರ ಬಗ್ಗೆ ಗುಸುಗುಸು ಹಬ್ಬಲು ಶುರು ಆಯಿತು. ಅವರಿಬ್ಬರು ಪರಸ್ಪರರ ಸಿನಿಮಾಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ. ಇದರಿಂದ ಕೂಡ ಅನುಮಾನ ಹೆಚ್ಚಲು ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us