MS Dhoni: ಸಖತ್ ಫನ್ನಿ ಆಗಿರಲಿದೆ ಧೋನಿ ನಿರ್ಮಾಣದ ಮೊದಲ ಸಿನಿಮಾ; ಇಲ್ಲಿದೆ ಟೀಸರ್

Lets Get married Movie: ‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಈ ಟೀಸರ್ ಫ್ಯಾಮಿಲಿ ಎಂಟರ್​ಟೇನರ್ ರೀತಿಯಲ್ಲಿ ಮೂಡಿಬರಲಿದೆ ಎಂಬುದಕ್ಕೆ ಟೀಸರ್​ ಸಾಕ್ಷ್ಯ ಒದಗಿಸಿದೆ.

MS Dhoni: ಸಖತ್ ಫನ್ನಿ ಆಗಿರಲಿದೆ ಧೋನಿ ನಿರ್ಮಾಣದ ಮೊದಲ ಸಿನಿಮಾ; ಇಲ್ಲಿದೆ ಟೀಸರ್
ಧೋನಿ
Follow us
ರಾಜೇಶ್ ದುಗ್ಗುಮನೆ
|

Updated on:Jun 09, 2023 | 1:00 PM

ಕ್ರಿಕೆಟರ್​ ಎಂ.ಎಸ್​. ಧೋನಿ MS Dhoni) ಅವರು ತಮ್ಮ  ‘ಧೋನಿ ಎಂಟರ್​ಟೇನ್​ಮೆಂಟ್’ ಮೂಲಕ ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ. ಅವರು ನಿರ್ಮಿಸುತ್ತಿರುವ ಮೊದಲ ಸಿನಿಮಾ ತಮಿಳು ಭಾಷೆಯದೇ ಅನ್ನೋದು ವಿಶೇಷ. ಈ ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್​’ (Lets  Get Married) ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಸಖತ್ ಫನ್ನಿ ಆಗಿದೆ. ಸದ್ಯ ಸಿನಿಮಾ ಯಾವ ರೀತಿಯಲ್ಲಿ ಮೂಡಿಬರಹುದು ಎಂಬ ಸೂಚನೆ ಪ್ರೇಕ್ಷಕರಿಗೆ ಸಿಕ್ಕಿದೆ.

ಧೋನಿಗೂ ತಮಿಳುನಾಡಿಗೂ ಉತ್ತಮ ನಂಟಿದೆ. ಇದಕ್ಕೆ ಕಾರಣ ಐಪಿಎಲ್. ಧೋನಿ ಅವರು ಈ ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಹೀಗಾಗಿ, ತಮಿಳುನಾಡಿನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಮೊದಲ ಚಿತ್ರವನ್ನು ತಮಿಳಿನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.

‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಈ ಟೀಸರ್ ಫ್ಯಾಮಿಲಿ ಎಂಟರ್​ಟೇನರ್ ರೀತಿಯಲ್ಲಿ ಮೂಡಿಬರಲಿದೆ ಎಂಬುದಕ್ಕೆ ಟೀಸರ್​ ಸಾಕ್ಷ್ಯ ಒದಗಿಸಿದೆ. ಸಿನಿಮಾ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ. ರಮೇಶ್ ತಮಿಳ್​ಮಣಿ ಅವರು ಚಿತ್ರವನ್ನು ನಿರ್ದೇಶನ ಮಾಡಿದರೆ, ಸಾಕ್ಷಿ ಸಿಂಗ್ ಧೋನಿ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ತಮಿಳು ಸಿನಿಮಾ ಮಾತ್ರವಲ್ಲದೆ ಇನ್ನೂ ಹಲವು ನಿರ್ದೇಶಕರ ಜತೆ ಧೋನಿ ಮಾತುಕತೆಯಲ್ಲಿ ಇದ್ದಾರೆ. ಧೋನಿಗೆ ಈ ಮೊದಲಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇದೆ. ಕ್ರಿಕೆಟ್​ನಿಂದ ನಿವೃತ್ತಿ ಪಡೆದ ಬಳಿಕ ಅವರು ಈ ಬಗ್ಗೆ ಗಮನಹರಿಸುತ್ತಿದ್ದಾರೆ. ಮೂಲಗಳ ಪ್ರಕಾರ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡುವತ್ತವೂ ಧೋನಿ ಗಮನ ಹರಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: 3 ಭಾಷೆಗಳಲ್ಲಿ ಚಿತ್ರ ನಿರ್ಮಿಸಲಿದೆ ಧೋನಿ ಎಂಟರ್‌ಟೈನ್‌ಮೆಂಟ್

ಸಿನಿಮಾ ಕಥೆ ಬಗ್ಗೆ ರಮೇಶ್ ಹೇಳಿದ್ದರು.  ‘ಧೋನಿ ಪತ್ನಿ ಸಾಕ್ಷಿ ಅವರು ಒಂದು ಕಥೆಯ ಪರಿಕಲ್ಪನೆಯನ್ನು ಹೇಳಿದ್ದರು. ಇದು ಧೋನಿಗೆ ಇಷ್ಟವಾಗಿತ್ತು. ಇದೇ ವಿಚಾರದ ಮೇಲೆ ಸಿನಿಮಾ ಮಾಡಿದ್ದೇವೆ. ಫ್ಯಾಮಿಲಿ ಎಂಟರ್​ಟೇನ್​ಮೆಂಟ್ ಮಾದರಿಯಲ್ಲಿ ಈ ಸಿನಿಮಾ ಮೂಡಿ ಬರಲಿದೆ’ ಎಂದು ರಮೇಶ್ ಅವರು ಈ ಮೊದಲು ಮಾಹಿತಿ ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:58 am, Fri, 9 June 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ