ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ಧೋನಿ; ಮೊದಲ ಸಿನಿಮಾ ಹೀಗಿರಲಿದೆ?

‘ಧೋನಿ ಪತ್ನಿ ಸಾಕ್ಷಿ ಅವರು ಒಂದು ಕಥೆಯ ಪರಿಕಲ್ಪನೆಯನ್ನು ಹೇಳಿದ್ದರು. ಇದು ಧೋನಿಗೆ ಇಷ್ಟವಾಗಿದೆ. ಇದೇ ವಿಚಾರದ ಮೇಲೆ ಸಿನಿಮಾ ಮಾಡಲು ಅವರು ನಿರ್ಧರಿಸಿದ್ದಾರೆ.

ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ಧೋನಿ; ಮೊದಲ ಸಿನಿಮಾ ಹೀಗಿರಲಿದೆ?
ಧೋನಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 25, 2022 | 3:57 PM

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಎಂ.ಎಸ್​. ಧೋನಿ (MS Dhoni) ಅವರು ಐಪಿಎಲ್ ಮಾತ್ರ ಆಡುತ್ತಿದ್ದಾರೆ. ಇದಲ್ಲದೆ, ಅವರು ಹಲವು ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಧೋನಿ ಸಿನಿಮಾ ಉದ್ಯಮಕ್ಕೆ ಬರುತ್ತಾರೆ ಎಂಬ ವಿಚಾರ ಈ ಮೊದಲಿನಿಂದಲೇ ಚರ್ಚೆಯಲ್ಲಿ ಇದ್ದ ವಿಚಾರ. ಆದರೆ, ಈ ವಿಷಯ ಇನ್ನೂ ಅಧಿಕೃತವಾಗಿಲ್ಲ. ‘ಧೋನಿ ಎಂಟರ್​ಟೇನ್​ಮೆಂಟ್’ ಮೂಲಕ ಧೋನಿ ಅವರು ಸಿನಿಮಾ ನಿರ್ಮಾಣದಲ್ಲಿ ಬ್ಯುಸಿ ಆಗಲಿದ್ದಾರೆ. ವಿಶೇಷ ಎಂದರೆ, ಪತ್ನಿ ಸಾಕ್ಷಿ ಅವರ ಪರಿಕಲ್ಪನೆಯಲ್ಲಿ ಮೊದಲ ಸಿನಿಮಾ ಮೂಡಿ ಬರುತ್ತಿದೆ ಅನ್ನೋದು ವಿಶೇಷ. ಈ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಧೋನಿಗೂ ತಮಿಳುನಾಡಿಗೂ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಐಪಿಎಲ್. ಧೋನಿ ಅವರು ಈ ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಹೀಗಾಗಿ, ತಮಿಳುನಾಡಿನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಮೊದಲ ಚಿತ್ರವನ್ನು ತಮಿಳಿನಲ್ಲೇ ರಿಲೀಸ್ ಮಾಡುವ ಆಲೋಚನೆಯಲ್ಲಿ ಅವರಿದ್ದಾರೆ.

ಧೋನಿ ನಿರ್ಮಾಣ ಮಾಡುವ ಮೊದಲ ಸಿನಿಮಾಗೆ ರಮೇಶ್ ತಮಿಳ್​ಮಣಿ ಅವರು ನಿರ್ದೇಶನ ಮಾಡಲಿದ್ದಾರೆ. ಅವರು ಈ ಮೊದಲು ‘ಅಥರ್ವ-ದಿ ಒರ್ಜಿನ್’ ಹೆಸರಿನ ಗ್ರಾಫಿಕ್ ನಾವೆಲ್ ಅನ್ನು ಬರೆದಿದ್ದಾರೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದರೆ ಎಂಬ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

‘ಧೋನಿ ಪತ್ನಿ ಸಾಕ್ಷಿ ಅವರು ಒಂದು ಕಥೆಯ ಪರಿಕಲ್ಪನೆಯನ್ನು ಹೇಳಿದ್ದರು. ಇದು ಧೋನಿಗೆ ಇಷ್ಟವಾಗಿದೆ. ಇದೇ ವಿಚಾರದ ಮೇಲೆ ಸಿನಿಮಾ ಮಾಡಲು ಅವರು ನಿರ್ಧರಿಸಿದ್ದಾರೆ. ಫ್ಯಾಮಿಲಿ ಎಂಟರ್​ಟೇನ್​ಮೆಂಟ್ ಮಾದರಿಯಲ್ಲಿ ಈ ಸಿನಿಮಾ ಮೂಡಿ ಬರಲಿದೆ’ ಎಂದು ರಮೇಶ್ ಹೇಳಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: MS Dhoni Entertainment: 3 ಭಾಷೆಗಳಲ್ಲಿ ಚಿತ್ರ ನಿರ್ಮಿಸಲಿದೆ ಧೋನಿ ಎಂಟರ್‌ಟೈನ್‌ಮೆಂಟ್

ಧೋನಿ ಎಂಟರ್​ಟೇನ್​ಮೆಂಟ್ ಎದುರು ನಿಂತು ಧೋನಿ ಪೋಸ್ ನೀಡಿದ್ದ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು. ತಮಿಳು ಸಿನಿಮಾ ಮಾತ್ರವಲ್ಲದೆ ಇನ್ನೂ ಹಲವು ನಿರ್ದೇಶಕರ ಜತೆ ಧೋನಿ ಮಾತುಕತೆಯಲ್ಲಿ ಇದ್ದಾರೆ. ಧೋನಿಗೆ ಈ ಮೊದಲಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇದೆ. ಕ್ರಿಕೆಟ್​ನಿಂದ ನಿವೃತ್ತಿ ಪಡೆದ ಬಳಿಕ ಅವರು ಈ ಬಗ್ಗೆ ಗಮನಹರಿಸುತ್ತಿದ್ದಾರೆ. ಮೂಲಗಳ ಪ್ರಕಾರ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡುವತ್ತವೂ ಧೋನಿ ಗಮನ ಹರಿಸುತ್ತಿದ್ದಾರೆ ಎನ್ನಲಾಗಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ