LGM Movie: ಕರುನಾಡಿನ ಸಿನಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ಧೋನಿ; ಕರ್ನಾಟಕದಲ್ಲಿ ತೆರೆ ಕಾಣಲಿದೆ ‘ಎಲ್​ಜಿಎಂ’ ಚಿತ್ರ

MS Dhoni: ನಿರ್ಮಾಪಕನಾಗಿ ಮೊದಲ ಪ್ರಯತ್ನದಲ್ಲೇ ಧೋನಿ ಅವರು ಫ್ಯಾಮಿಲಿ ಪ್ರೇಕ್ಷಕರನ್ನು ಟಾರ್ಗೆಟ್​ ಮಾಡಿದ್ದಾರೆ. ಕೌಟುಂಬಿಕ ಕಥಾಹಂದರ ಇರುವ ‘ಲೆಟ್ಸ್ ಗೆಟ್ ಮ್ಯಾರೀಡ್’ ಚಿತ್ರವನ್ನು ಅವರು ನಿರ್ಮಿಸುತ್ತಿದ್ದಾರೆ.

LGM Movie: ಕರುನಾಡಿನ ಸಿನಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ಧೋನಿ; ಕರ್ನಾಟಕದಲ್ಲಿ ತೆರೆ ಕಾಣಲಿದೆ ‘ಎಲ್​ಜಿಎಂ’ ಚಿತ್ರ
ಎಲ್​ಜಿಎಂ ಸಿನಿಮಾ ಪೋಸ್ಟರ್​, ಸಾಕ್ಷಿ ಧೋನಿ, ಎಂ.ಎಸ್​. ಧೋನಿ
Follow us
ಮದನ್​ ಕುಮಾರ್​
|

Updated on: Jun 16, 2023 | 1:56 PM

ಕ್ರಿಕೆಟ್​ನಲ್ಲಿ ಮಿಂಚಿದ ಎಂ.ಎಸ್​. ಧೋನಿ (MS Dhoni) ಅವರಿಗೆ ಈಗ ಚಿತ್ರರಂಗದ ಮೇಲೆ ಆಸಕ್ತಿ ಹೆಚ್ಚಾಗಿದೆ. ನಿರ್ಮಾಪಕನಾಗಿ ಅವರು ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ಬ್ಯಾನರ್​ ಮೂಲಕ ಅವರು ಅನೇಕರಿಗೆ ಅವಕಾಶ ನೀಡುತ್ತಿದ್ದಾರೆ. ಕ್ಯಾಪ್ಟನ್ ಕೂಲ್ ಅಂತಲೇ ಫೇಮಸ್​ ಆದವರು ಎಂ.ಎಸ್ ಧೋನಿ. ಅವರ ನಿರ್ಮಾಣದಲ್ಲಿ ಮೂಡಿಬರುವ ಸಿನಿಮಾಗಳ ಬಗ್ಗೆ ಪ್ರೇಕ್ಷಕರಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಪತ್ನಿ‌ ಸಾಕ್ಷಿ (Sakshi Dhoni) ಜೊತೆಗೂಡಿ ಮಹೇಂದ್ರ ಸಿಂಗ್​ ಧೋನಿ ಅವರು ‘ಧೋನಿ ಎಂಟರ್​ಟೇನ್ಮೆಂಟ್​ ಪ್ರೈವೆಟ್​ ಲಿಮಿಡೆಟ್​’ ಕಂಪನಿ ಶುರು ಮಾಡಿದ್ದರು. ಅವರ ಸಂಸ್ಥೆ ಮೂಲಕ ನಿರ್ಮಾಣ ಆಗುತ್ತಿರುವ ಚೊಚ್ಚಲ ಸಿನಿಮಾ ಹೆಸರು ‘ಲೆಟ್ಸ್ ಗೆಟ್ ಮ್ಯಾರೀಡ್’. ಇದನ್ನು ಶಾರ್ಟ್​ ಆಗಿ ‘ಎಲ್​ಜಿಎಂ’ (LGM Movie) ಎಂದು ಕರೆಯಲಾಗುತ್ತಿದೆ. ತಮಿಳಿನ ಈ ಸಿನಿಮಾ ಕರ್ನಾಟಕದಲ್ಲಿ ಕೂಡ ರಿಲೀಸ್​ ಆಗಲಿದೆ.

‘ಲೆಟ್ಸ್ ಗೆಟ್ ಮ್ಯಾರೀಡ್’ ಚಿತ್ರವು ಟೀಸರ್ ಮೂಲಕ ನಗುವಿನ ಕಚಗುಳಿ ಇಟ್ಟಿತ್ತು. ಕರ್ನಾಟಕದಲ್ಲಿನ ಜನರಿಂದಲೂ ಟೀಸರ್​ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ‘ಲೆಟ್ಸ್ ಗೆಟ್ ಮ್ಯಾರೀಡ್’ ಈ ಚಿತ್ರವನ್ನು ಕರುನಾಡಿನಲ್ಲಿಯೂ ರಿಲೀಸ್​ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಇತ್ತೀಚೆಗೆ ಡಿಫರೆಂಟ್​ ಕಾನ್ಸೆಪ್ಟ್​ ಇರುವ ಪರಭಾಷೆ ಚಿತ್ರಗಳಿಗೆ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ ಉದಾಹರಣೆ ಇದೆ. ಆದ್ದರಿಂದ ‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾವನ್ನು ಕೂಡ ಕರ್ನಾಟಕದಲ್ಲಿ ಬಿಡುಗಡೆ ಮಾಡಲಾಗುವುದು. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: ಧೋನಿಯನ್ನು ವಿಶ್ವಕಪ್​ ಹೀರೋ ಮಾಡಿದ್ದು ಆತನ PR ಟೀಮ್: ಗಂಭೀರ್ ಗಂಭೀರ ಆರೋಪ

ನಿರ್ಮಾಪಕನಾಗಿ ಮೊದಲ ಪ್ರಯತ್ನದಲ್ಲೇ ಧೋನಿ ಅವರು ಫ್ಯಾಮಿಲಿ ಪ್ರೇಕ್ಷಕರನ್ನು ಟಾರ್ಗೆಟ್​ ಮಾಡಿದ್ದಾರೆ. ಕೌಟುಂಬಿಕ ಮನರಂಜನಾ ಕಥಾಹಂದರ ಇರುವ ‘ಲೆಟ್ಸ್ ಗೆಟ್ ಮ್ಯಾರೀಡ್’ ಚಿತ್ರವನ್ನು ಅವರು ಪ್ರೇಕ್ಷಕರಿಗೆ ನೀಡುತ್ತಿದ್ದಾರೆ. ಈ ಸಿನಿಮಾಗೆ ರಮೇಶ್ ತಮಿಳ್​ಮಣಿ ನಿರ್ದೇಶನ ಮಾಡಿದ್ದಾರೆ. ನಾಯಕನಾಗಿ ಹರೀಶ್ ಕಲ್ಯಾಣ್ ನಟಿಸಿದ್ದಾರೆ. ನಾಯಕಿ ಪಾತ್ರವನ್ನು ಇವಾನಾ ನಿಭಾಯಿಸಿದ್ದಾರೆ. ಪೋಸ್ಟರ್​ಗಳು ಕೂಡ ಗಮನ ಸೆಳೆದಿವೆ. ‘ಲೆಟ್ಸ್ ಗೆಟ್ ಮ್ಯಾರೀಡ್’ ಚಿತ್ರಕ್ಕೆ ಈಗಾಗಲೇ ಶೂಟಿಂಗ್​ ಮುಗಿದಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಈ ಸಿನಿಮಾವನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂಬ ಗುರಿ ಇಟ್ಟುಕೊಂಡು ಚಿತ್ರತಂಡ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: MS Dhoni: ಸಖತ್ ಫನ್ನಿ ಆಗಿರಲಿದೆ ಧೋನಿ ನಿರ್ಮಾಣದ ಮೊದಲ ಸಿನಿಮಾ; ಇಲ್ಲಿದೆ ಟೀಸರ್

ರಮೇಶ್ ತಮಿಳ್​ಮಣಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುವುದರ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ ಎಂಬುದು ವಿಶೇಷ. ಸಿನಿಮಾದ ಟೀಸರ್ ನೋಡಿದವರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು ಚಿತ್ರತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಸದ್ಯದಲ್ಲೇ ಈ ಸಿನಿಮಾದ ಹಾಡುಗಳು ಮತ್ತು ಟ್ರೇಲರ್‌ ಬಿಡುಗಡೆ ಆಗಲಿದೆ. ಅದಕ್ಕಾಗಿ ಧೋನಿ ಫ್ಯಾನ್ಸ್​ ಕಾದಿದ್ದಾರೆ. ಹಿರಿಯ ಕಲಾವಿದೆ ನದಿಯಾ, ಖ್ಯಾತ ನಟ ಯೋಗಿ ಬಾಬು ಹಾಗೂ ಆರ್‌ಜೆ ವಿಜಯ್ ಅವರು ಕೂಡ ‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ