AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sakshi Dhoni: ‘ಅಲ್ಲು ಅರ್ಜುನ್​ ಅವರ ಎಲ್ಲ ಸಿನಿಮಾ ನೋಡಿದ್ದೇನೆ’: ಅಭಿಮಾನ ಮೆರೆದ ಧೋನಿ ಪತ್ನಿ ಸಾಕ್ಷಿ

‘ನೀವು ಯಾವುದಾದರೂ ತೆಲುಗು ಸಿನಿಮಾಗಳನ್ನು ನೋಡಿದ್ದೀರಾ’ ಎಂದು ಸಾಕ್ಷಿ ಅವರಿಗೆ ಪ್ರಶ್ನೆ ಕೇಳಲಾಯಿತು. ಆಗ ಅವರು ಅಲ್ಲು ಅರ್ಜುನ್​ ಬಗ್ಗೆ ಮಾತನಾಡಿದರು.

Sakshi Dhoni: ‘ಅಲ್ಲು ಅರ್ಜುನ್​ ಅವರ ಎಲ್ಲ ಸಿನಿಮಾ ನೋಡಿದ್ದೇನೆ’: ಅಭಿಮಾನ ಮೆರೆದ ಧೋನಿ ಪತ್ನಿ ಸಾಕ್ಷಿ
ಸಾಕ್ಷಿ ಧೋನಿ, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Jul 25, 2023 | 11:07 AM

Share

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳಿಗೂ ಅಲ್ಲು ಅರ್ಜುನ್​ ಎಂದರೆ ಸಖತ್​ ಇಷ್ಟ. ಕ್ರಿಕೆಟರ್​ ಎಂ.ಎಸ್​. ಧೋನಿ (MS Dhoni) ಅವರ ಪತ್ನಿ ಸಾಕ್ಷಿ ಕೂಡ ಅಲ್ಲು ಅರ್ಜುನ್​ಗೆ ಫ್ಯಾನ್​ ಆಗಿದ್ದಾರೆ. ಹಾಗಂತ ಅದು ಕೇವಲ ‘ಪುಷ್ಪ’ ಸಿನಿಮಾದಿಂದ ಮಾತ್ರವಲ್ಲ. ‘ಪುಷ್ಪ’ ಬರುವುದಕ್ಕೂ ಮುನ್ನವೇ ಅಲ್ಲು ಅರ್ಜುನ್​ ಅವರ ಸಿನಿಮಾಗಳನ್ನು ನೋಡಿ ಸಾಕ್ಷಿ (Sakshi Dhoni) ಅವರು ಎಂಜಾಯ್​ ಮಾಡಿದ್ದರು. ಈ ವಿಚಾರವನ್ನು ಅವರು ಈಗ ಹೇಳಿಕೊಂಡಿದ್ದಾರೆ. ಹೈದರಾಬಾದ್​​ನಲ್ಲಿ ‘ಎಲ್​ಜಿಎಂ’ ಸಿನಿಮಾದ ಪ್ರಮೋಷನ್​ ವೇಳೆ ಅವರು ಈ ವಿಷಯ ಹೇಳಿದ್ದು ಕೇಳಿ ಅಲ್ಲು ಅರ್ಜುನ್​ ಫ್ಯಾನ್ಸ್​ಗೆ ಖುಷಿ ಆಗಿದೆ.

ಈಗಾಗಲೇ ತಿಳಿದಿರುವಂತೆ ಎಂ.ಎಸ್​. ಧೋನಿ ಅವರು ಈಗ ಸಿನಿಮಾ ನಿರ್ಮಾಣದಲ್ಲಿ ಸಕ್ರಿಯರಾಗಿದ್ದಾರೆ. ‘ಧೋನಿ ಎಂಟರ್​ಟೇನ್ಮೆಂಟ್​’ ಸಂಸ್ಥೆ ಮೂಲಕ ಅವರು ತಮಿಳು ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಅವರ ಪತ್ನಿ ಸಾಕ್ಷಿ ಅವರು ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಅವರು ಹಣ ಹೂಡಿರುವ ‘ಎಲ್​ಜಿಎಂ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇದರ ಪ್ರಚಾರದ ಸಲುವಾಗಿ ಹೈದರಾಬಾದ್​ನಲ್ಲಿ ಇವೆಂಟ್​ ಮಾಡಲಾಗಿದೆ.

‘ನೀವು ಯಾವುದಾದರೂ ತೆಲುಗು ಸಿನಿಮಾಗಳನ್ನು ನೋಡಿದ್ದೀರಾ’ ಎಂದು ಸಾಕ್ಷಿ ಅವರಿಗೆ ಪ್ರಶ್ನೆ ಕೇಳಲಾಯಿತು. ಆಗ ಅವರು ಅಲ್ಲು ಅರ್ಜುನ್​ ಬಗ್ಗೆ ಮಾತನಾಡಿದರು. ‘ಅಲ್ಲು ಅರ್ಜುನ್​ ಅವರ ಎಲ್ಲ ಸಿನಿಮಾಗಳನ್ನು ನೋಡಿದ್ದೇನೆ. ಆ ಸಮಯದಲ್ಲಿ ನೆಟ್​ಫ್ಲಿಕ್ಸ್​, ಹಾಟ್​ಸ್ಟಾರ್​ ಇತ್ಯಾದಿ ಒಟಿಟಿ ಇರಲಿಲ್ಲ. ಅಲ್ಲು ಅರ್ಜುನ್​ ನಟನೆಯ ತೆಲುಗು ಸಿನಿಮಾಗಳನ್ನು ಹಿಂದಿಗೆ ಡಬ್​ ಮಾಡಿ ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡಲಾಗುತ್ತಿತ್ತು. ನಾನು ಅಲ್ಲು ಅರ್ಜುನ್​ ಅವರ ದೊಡ್ಡ ಅಭಿಮಾನಿ’ ಎಂದು ಸಾಕ್ಷಿ ಧೋನಿ ಹೇಳಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: Allu Arjun: ‘ಪುಷ್ಪ 2’ ಪೋಸ್ಟರ್​ ರೀತಿ ವೇಷ ಧರಿಸಿ ಬಂದ ಸಂಸದ; ಅಲ್ಲು ಅರ್ಜುನ್​ ಅಭಿಮಾನಿಗಳಲ್ಲಿ ಹೆಚ್ಚಿತು ಕ್ರೇಜ್​

ಧೋನಿ ಅವರಿಗೆ ತಮಿಳುನಾಡಿನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಾಗಿ ಅವರು ತಮ್ಮ ಸಂಸ್ಥೆಯ ಮೊದಲ ಸಿನಿಮಾವನ್ನು ತಮಿಳಿನಲ್ಲಿ ನಿರ್ಮಿಸುತ್ತಿದ್ದಾರೆ. ‘ಎಲ್​ಜಿಎಂ’ ಸಿನಿಮಾಗೆ ರಮೇಶ್ ತಮಿಳ್ಮಣಿ ನಿರ್ದೇಶನ ಮಾಡಿದ್ದಾರೆ. ಹರೀಶ್ ಕಲ್ಯಾಣ್, ಇವಾನಾ, ಯೋಗಿ ಬಾಬು, ಮಿರ್ಚಿ ವಿಜಯ್, ನದಿಯಾ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ಜುಲೈ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?