AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾವಣನ ಪಾತ್ರಕ್ಕೆ ರಾಮನಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡುವುದು ಸರಿಯಲ್ಲ; ಮುಕೇಶ್ ಖನ್ನಾ

ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಸಿನಿಮಾದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಂಡಿದ್ದಾರೆ. ಆದರೆ ರಣಬೀರ್ ಅವರ 'ಅನಿಮಲ್' ಚಿತ್ರದ ಹಿಂಸಾತ್ಮಕ ಇಮೇಜ್ ಈ ಪೌರಾಣಿಕ ಪಾತ್ರದ ಮೇಲೆ ನಕಾರಾತ್ಮಕ ಪ್ರಭಾವ ಬೀರಬಹುದು ಹಾಗೂ ಮಕ್ಕಳಿಗೆ ತಪ್ಪು ಸಂದೇಶ ನೀಡಬಹುದು ಎಂದು ಹಿರಿಯ ನಟ ಮುಕೇಶ್ ಖನ್ನಾ ಕಳವಳ ವ್ಯಕ್ತಪಡಿಸಿದ್ದಾರೆ.

ರಾವಣನ ಪಾತ್ರಕ್ಕೆ ರಾಮನಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡುವುದು ಸರಿಯಲ್ಲ; ಮುಕೇಶ್ ಖನ್ನಾ
ರಣಬೀರ್-ಯಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 05, 2026 | 8:05 AM

Share

ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ರಣಬೀರ್ ಕಪೂರ್ ಶ್ರೀರಾಮನ ಪಾತ್ರದಲ್ಲಿ ಮತ್ತು ರಾಕಿ ಭಾಯ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ಅವರ ನಟನೆಯ ಕುರಿತು ಹಿರಿಯ ನಟ ಮುಕೇಶ್ ಖನ್ನಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಣಬೀರ್ ಅವರ ‘ಅನಿಮಲ್’ ಸಿನಿಮಾದ ಶೇಡ್ಸ್ ಈ ಪಾತ್ರದ ಮೇಲೆ ಪ್ರಭಾವ ಬೀರಬಹುದು ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಖಾಸಗಿ ಮಾಧ್ಯಮವೊಂದರ ಜೊತೆ ಮಾತನಾಡಿದ ಮುಕೇಶ್ ಖನ್ನಾ ‘ಅನಿಮಲ್’ ಸಿನಿಮಾದ ನಂತರ ರಣಬೀರ್ ಕಪೂರ್ ಅವರಿಗೆ ಹೊಸ ಇಮೇಜ್ ಬಂದಿದೆ ಎಂದಿದ್ದಾರೆ. ಪ್ರೇಕ್ಷಕರು ರಣಬೀರ್ ಅವರನ್ನು ಅದೇ ಹಳೆಯ ಇಮೇಜ್ ಮೂಲಕ ನೋಡಬಾರದು ಎಂದು ಅವರು ಆಶಿಸಿದ್ದಾರೆ. ‘ಅನಿಮಲ್’ ಚಿತ್ರದಲ್ಲಿದ್ದ ರಣಬೀರ್ ಪಾತ್ರವು ಮಕ್ಕಳಿಗೆ ತಪ್ಪು ಸಂದೇಶ ನೀಡಿತ್ತು. ಆ ಚಿತ್ರದ ಶೈಲಿ ತಮಗೂ ವೈಯಕ್ತಿಕವಾಗಿ ಇಷ್ಟವಾಗಿರಲಿಲ್ಲ ಎಂದು ಮುಕೇಶ್ ಖನ್ನಾ ಬಹಿರಂಗವಾಗಿ ಹೇಳಿದ್ದಾರೆ.

ಇದೇ ವೇಳೆ ‘ರಾಮಾಯಣ’ ಚಿತ್ರದಲ್ಲಿ ನಟ ಯಶ್ ಅವರ ರಾವಣನ ಪಾತ್ರದ ಬಗ್ಗೆಯೂ ಅವರು ಮಾತನಾಡಿದ್ದಾರೆ. ಟ್ರೇಲರ್‌ನಲ್ಲಿ ರಾವಣನ ಪಾತ್ರಕ್ಕೆ ಶ್ರೀರಾಮನಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡುವುದು ಸರಿಯಲ್ಲ ಎಂದಿದ್ದಾರೆ. ಶ್ರೀರಾಮನಿಗಿಂತ ರಾವಣನೇ ಹೆಚ್ಚಾಗಿ ಕಾಣಿಸಿಕೊಂಡರೆ ಭಕ್ತರ ನಂಬಿಕೆಗೆ ಧಕ್ಕೆಯಾಗಲಿದೆ. ಮಹಾಭಾರತದಲ್ಲಿ ತಾವು ಭೀಷ್ಮ ಪಾತ್ರ ಮಾಡಲು ಉತ್ತಮ ಸಂಭಾಷಣೆಗಳೇ ಕಾರಣವಾಗಿದ್ದವು ಎಂದು ಅವರು ನೆನಪಿಸಿಕೊಂಡಿದ್ದಾರೆ.

ನಟರಿಗೆ ಸಿಗುವ ಪಾತ್ರ ಮತ್ತು ಸಂಭಾಷಣೆಗಳು ಸಿನಿಮಾ ಯಶಸ್ಸಿಗೆ ಮುಖ್ಯ ಕಾರಣವಾಗುತ್ತವೆ. ‘ಧುರಂಧರ್’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಉತ್ತಮ ಅಭಿನಯ ನೀಡಲು ನಿರ್ದೇಶಕರ ಶ್ರಮವೇ ಕಾರಣ. ಅವರಿಗೆ ನೀಡಲಾದ ಸನ್ನಿವೇಶಗಳು ಮತ್ತು ಸಂಭಾಷಣೆಗಳು ಪಾತ್ರವನ್ನು ಎತ್ತಿಹಿಡಿದಿದ್ದವು. ಹಾಗೆಯೇ ‘ರಾಮಾಯಣ’ ಚಿತ್ರದಲ್ಲೂ ಯಶ್ ಅವರಿಗೆ ಸೂಕ್ತ ಸಂಭಾಷಣೆಗಳನ್ನು ನೀಡಿರುವುದರಿಂದ ರಾವಣನ ಪಾತ್ರಕ್ಕೆ ಹೆಚ್ಚು ಮೆರುಗು ಬಂದಿರಬಹುದು ಎಂದು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’ ಹಂಚಿಕೆಗೆ ಮುಂದಾದ ದಿಲ್ ರಾಜು: ಎಷ್ಟು ಕೋಟಿ ಆಫರ್?

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ: ಪಾರ್ಟ್ 1’ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ಸಾಯಿ ಪಲ್ಲವಿ, ಸನ್ನಿ ಡಿಯೋಲ್, ರವಿ ದುಬೆ, ಕಾಜಲ್ ಅಗರ್ವಾಲ್ ಸೇರಿದಂತೆ ಹಲವು ನಟರು ಮುಖ್ಯ ಪಾತ್ರಗಳಲ್ಲಿದ್ದಾರೆ. ಈ ಬೃಹತ್ ವೆಚ್ಚದ ಸಿನಿಮಾ ನವೆಂಬರ್ 6 ರಂದು ಪ್ರಪಂಚದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ರಾಮಾಯಣದಲ್ಲಿ ರಣಬೀರ್ ಮತ್ತು ಯಶ್ ಅವರ ಪಾತ್ರಗಳ ಮೇಲಿನ ಚರ್ಚೆಗಳು ಈಗ ಬಾಲಿವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್