AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿರುದ್ಧ್​-ಕಾವ್ಯಾ ಮದುವೆಗೆ ಧನುಷ್​​ಗೆ ಇಲ್ಲ ಆಹ್ವಾನ?

ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮದುವೆ ತಯಾರಿ ನಡೆಸುತ್ತಿದ್ದಾರೆ. ಕಾಲಿವುಡ್‌ನ ಎಲ್ಲರಿಗೂ ಆಹ್ವಾನ ಹೋಗಿದ್ದರೂ ನಟ ಧನುಷ್‌ಗೆ ಇನ್ವಿಟೇಶನ್ ಸಿಕ್ಕಿಲ್ಲ ಎಂಬ ಸುದ್ದಿ ಹರಿದಾಡುತ್ತಿದೆ. ಧನುಷ್ ಹಾಗೂ ರಜನಿಕಾಂತ್ ಕುಟುಂಬದ ಹಳೆಯ ಸಂಬಂಧದ ಹಿನ್ನೆಲೆಯಲ್ಲಿ ಈ ವದಂತಿ ಹುಟ್ಟಿಕೊಂಡಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಅನಿರುದ್ಧ್​-ಕಾವ್ಯಾ ಮದುವೆಗೆ ಧನುಷ್​​ಗೆ ಇಲ್ಲ ಆಹ್ವಾನ?
ಧನುಷ್-ರವಿಚಂದರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 05, 2026 | 11:05 AM

Share

ಮುಖ್ಯಾಂಶಗಳು

  • ಅನಿರುದ್ಧ್ ರವಿಚಂದರ್ ಮದುವೆ ಸಂಭ್ರಮ
  • ಧನುಷ್‌ಗೆ ಸಿಗಲಿಲ್ವಾ ಇನ್ವಿಟೇಶನ್
  • ಕಾಲಿವುಡ್‌ನಲ್ಲಿ ಕಾಡ್ಗಿಚ್ಚಿನಂತೆ ಹರಿದಾಡುತ್ತಿದೆ ವದಂತಿ

ತಮಿಳು ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಕಾಲಿವುಡ್ ಅಂಗಳದಲ್ಲಿ ಭಾರಿ ಸೌಂಡು ಮಾಡುತ್ತಿದೆ. ಚೆನ್ನೈ ಮಾಧ್ಯಮಗಳಲ್ಲಿ ಅವರ ಮದುವೆಯ ತಯಾರಿಯ ಬಗ್ಗೆ ಸರಣಿ ವರದಿಗಳು ಬಿತ್ತರವಾಗುತ್ತಿವೆ. ಈ ಬೆನ್ನಲ್ಲೇ ತಮಿಳು ಚಿತ್ರರಂಗದಲ್ಲಿ ಮತ್ತೊಂದು ಕುತೂಹಲಕಾರಿ ಚರ್ಚೆ ಹುಟ್ಟಿಕೊಂಡಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.

ಕಾಲಿವುಡ್‌ನ ಪ್ರತಿಯೊಬ್ಬ ನಟ-ನಟಿಯರಿಗೂ ಮದುವೆಯ ಆಹ್ವಾನ ಪತ್ರಿಕೆ ತಲುಪಿದೆ ಎನ್ನಲಾಗಿದೆ. ಆದರೆ ನಟ ಧನುಷ್ ಅವರಿಗೆ ಮಾತ್ರ ಆಹ್ವಾನ ನೀಡಿಲ್ಲ ಎಂಬ ವರದಿಗಳು ಹರಿದಾಡುತ್ತಿವೆ. ಈ ವಿಷಯದ ಕುರಿತು ಯಾವುದೇ ಅಧಿಕೃತ ಸ್ಪಷ್ಟನೆ ಹೊರಬಿದ್ದಿಲ್ಲ. ಮಾಧ್ಯಮಗಳ ವರದಿಯಿಂದಾಗಿ ತಮಿಳು ಸಿನಿಮಾ ಅಭಿಮಾನಿಗಳಲ್ಲಿ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಅನಿರುದ್ಧ್ ರವಿಚಂದರ್ ಅವರಿಗೆ ಸೂಪರ್‌ಸ್ಟಾರ್ ರಜನಿಕಾಂತ್ ಕುಟುಂಬದ ಜೊತೆ ಅತ್ಯಂತ ನಿಕಟ ಸಂಬಂಧವಿದೆ. ಅವರು ಸಂಬಂಧಿಗಳೂ ಹೌದು. ರಜನಿಕಾಂತ್ ಕುಟುಂಬದ ಅನುಕೂಲಕ್ಕೆ ತಕ್ಕಂತೆ ಮದುವೆ ಸಮಾರಂಭ ನಡೆಯಲಿದೆ ಎಂಬ ವದಂತಿಗಳಿವೆ. ಮದುವೆಯ ನಿಜವಾದ ವಿವರಗಳು ಮತ್ತು ಅತಿಥಿಗಳ ಪಟ್ಟಿ ಇನ್ನು ಅಧಿಕೃತವಾಗಿ ಹೊರಬಿದ್ದಿಲ್ಲ. ಎಲ್ಲವೂ ರಹಸ್ಯವಾಗಿಯೇ ಉಳಿದಿದೆ.

ರಜನಿಕಾಂತ್ ಪುತ್ರಿ ಐಶ್ವರ್ಯಾ ಅವರನ್ನು ಧನುಷ್ ಹಿಂದೆ ಮದುವೆಯಾಗಿದ್ದರು. 2022ರಲ್ಲಿ ಈ ಜೋಡಿ ಬೇರ್ಪಡುವುದಾಗಿ ಘೋಷಿಸಿ, ಬಳಿಕ ವಿಚ್ಛೇದನ ಪಡೆದುಕೊಂಡಿತ್ತು. ಈ ಹಳೆಯ ಸಂಬಂಧದಿಂದಾಗಿ ಧನುಷ್ ಮದುವೆಗೆ ಬರುತ್ತಾರೋ ಇಲ್ಲವೋ ಎಂಬ ಪ್ರಶ್ನೆ ಮೂಡಿದೆ. ಆದರೆ ಅನೇಕ ಅಭಿಮಾನಿಗಳು ಈ ವದಂತಿಗಳನ್ನು ನಂಬಲು ತಯಾರಿಲ್ಲ.

ಇದನ್ನೂ ಓದಿ: ‘ನೀನು ನನ್ನ ಪಾಲಿಗೆ ಸತ್ತು ಹೋಗಿದ್ದೀಯಾ’; ಧನುಷ್​​ಗೆ ನೇರವಾಗಿ ಹೇಳಿದ ಸೌಂದರ್ಯಾ

ಧನುಷ್ ಖಂಡಿತವಾಗಿಯೂ ಮದುವೆಗೆ ಬಂದೇ ಬರುತ್ತಾರೆ ಎಂದು ಅಭಿಮಾನಿಯೊಬ್ಬರು ಕಾಮೆಂಟ್ ಮಾಡಿದ್ದಾರೆ. ಒಂದು ವೇಳೆ ಧನುಷ್ ಮದುವೆಗೆ ಬಂದರೆ ಸೋಶಿಯಲ್ ಮೀಡಿಯಾ ಖಾತೆ ಡಿಲೀಟ್ ಮಾಡುವುದಾಗಿಯೂ ಸವಾಲು ಹಾಕಿದ್ದಾರೆ. ಅನಿರುದ್ಧ್ ಮತ್ತು ಧನುಷ್ ಸಿನಿಮಾರಂಗದಲ್ಲಿ ಸೂಪರ್ ಹಿಟ್ ಜೋಡಿಯಾಗಿದ್ದು, ಸತ್ಯಾಸತ್ಯತೆ ತಿಳಿಯಲು ಅಧಿಕೃತ ಮಾಹಿತಿ ಬರುವವರೆಗೆ ಕಾಯಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು
ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ
ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ
ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ