AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘800’ ಸಿನಿಮಾ ರಿಲೀಸ್ ದಿನಾಂಕ ಘೋಷಣೆ; ಅಕ್ಟೋಬರ್ 6ಕ್ಕೆ ಮುತ್ತಯ್ಯ ಬಯೋಪಿಕ್

ಮುತ್ತಯ್ಯ ಮುರಳೀಧರನ್​ ಅವರು ವೃತ್ತಿ ಜೀವನದಲ್ಲಿ 800 ವಿಕೆಟ್ ಪಡೆದಿದ್ದಾರೆ. ಈ ಸಾಧನೆ ಮಾಡಿರುವ ಏಕೈಕ ಬೌಲರ್ ಎನ್ನುವ ಖ್ಯಾತಿ ಮುತ್ತಯ್ಯ ಮುರಳೀಧರನ್​ಗೆ ಇದೆ. ಈ ಕಾರಣದಿಂದ ಅವರ ಬಯೋಪಿಕ್​ಗೆ ‘800’ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ರಿಲೀಸ್ ದಿನಾಂಕ ತಿಳಿದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

‘800’ ಸಿನಿಮಾ ರಿಲೀಸ್ ದಿನಾಂಕ ಘೋಷಣೆ; ಅಕ್ಟೋಬರ್ 6ಕ್ಕೆ ಮುತ್ತಯ್ಯ ಬಯೋಪಿಕ್
ಮುತ್ತಯ್ಯ ಮುರಳೀಧರನ್ ಬಯೋಪಿಕ್
ರಾಜೇಶ್ ದುಗ್ಗುಮನೆ
|

Updated on: Sep 14, 2023 | 2:27 PM

Share

ವಿಶ್ವ ಕಂಡ ಅಪ್ರತಿಮ ಸ್ಪಿನ್ನರ್​ಗಳಲ್ಲಿ ​ಮುತ್ತಯ್ಯ ಮುರಳೀಧರನ್ (Muttiah Muralitharan)​ ಕೂಡ ಒಬ್ಬರು. ಶ್ರೀಲಂಕಾ ಪರ ಆಡಿದ್ದ ಅವರು, ಹಲವು ಸಾಧನೆ ಮಾಡಿದ್ದಾರೆ. ಅವರು ಬೌಲಿಂಗ್​ಗೆ ಇಳಿದರೆ ಎದುರಾಳಿಗಳು ನಡುಗುತ್ತಿದ್ದರು. ಅವರ ಕುರಿತು ಈಗ ಬಯೋಪಿಕ್ ಸಿದ್ಧಗೊಳ್ಳುತ್ತಿದೆ. ಈ ಚಿತ್ರಕ್ಕೆ ‘800’ ಎಂದು ಶೀರ್ಷಿಕೆ ಇಡಲಾಗಿದೆ. ಬಹುಭಾಷೆಯಲ್ಲಿ ನಿರ್ಮಾಣ ಆಗಿರುವ ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಈ ಸಿನಿಮಾ ಅಕ್ಟೋಬರ್ 6ರಂದು ರಿಲೀಸ್ ಆಗಲಿದೆ. ಈ ಕುರಿತು ತಂಡ ಮಾಹಿತಿ ನೀಡಿದೆ.

ಮುತ್ತಯ್ಯ ಮುರಳೀಧರನ್​ ಅವರು ಬಡ ಕುಟುಂಬದ ಹಿನ್ನೆಲೆಯಿಂದ ಬಂದವರು. ಕ್ರಿಕೆಟರ್ ಆಗಬೇಕು ಎನ್ನುವ ಕನಸು ಕಂಡರು. ಒಳ್ಳೆಯ ಸ್ಪಿನ್ ಬೌಲರ್ ಆದರು. ಅವರು ವೃತ್ತಿ ಜೀವನದಲ್ಲಿ 800 ವಿಕೆಟ್ ಪಡೆದಿದ್ದಾರೆ. ಈ ಸಾಧನೆ ಮಾಡಿರುವ ಏಕೈಕ ಬೌಲರ್ ಎನ್ನುವ ಖ್ಯಾತಿ ಮುತ್ತಯ್ಯ ಮುರಳೀಧರನ್​ಗೆ ಇದೆ. ಈ ಕಾರಣದಿಂದ ಅವರ ಬಯೋಪಿಕ್​ಗೆ ‘800’ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ರಿಲೀಸ್ ದಿನಾಂಕ ತಿಳಿದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಮುತ್ತಯ್ಯ ಮುರಳೀಧರನ್ ಅವರ ಕ್ರಿಕೆಟ್ ಬದುಕು ಹಲವು ರೋಚಕ ಅಂಶಗಳಿಂದ ಕೂಡಿದೆ. ಸಾಕಷ್ಟು ವಿವಾದಗಳನ್ನು ಅವರು ಮಾಡಿಕೊಂಡಿದ್ದಾರೆ. ಅವುಗಳನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಶ್ರೀಲಂಕಾ ತಂಡ ಕ್ರಿಕೆಟ್ ಆಡಲು ಪಾಕಿಸ್ತಾನಕ್ಕೆ ತೆರಳಿತ್ತು. ಈ ವೇಳೆ ಗುಂಡಿನ ದಾಳಿ ಆಗಿತ್ತು. ಈ ದಾಳಿಯ ಸಂದರ್ಭದಲ್ಲಿ ಮುತ್ತಯ್ಯ ಕೂಡ ದಾಳಿಗೆ ಒಳಗಾದ ಬಸ್​ನಲ್ಲಿ ಇದ್ದರು. ಇದನ್ನೂ ಬಯೋಪಿಕ್​ನಲ್ಲಿ ಸೇರಿಸಲಾಗಿದೆ. ಅವರ ವೈಯಕ್ತಿಕ ವಿಚಾರಗಳು ಈ ಚಿತ್ರದಲ್ಲಿವೆ.

ಇದನ್ನೂ ಓದಿ: ಮುತ್ತಯ್ಯ ಮುರಳೀಧರನ್​ ಬಯೋಪಿಕ್​ ‘800’ ಟ್ರೇಲರ್​ ಬಿಡುಗಡೆಗೆ ಸಚಿನ್​ ತೆಂಡೂಲ್ಕರ್​ ಅತಿಥಿ

‘800’ ಚಿತ್ರಕ್ಕೆ ಎಂ.ಎಸ್​. ಶ್ರೀಪತಿ ನಿರ್ದೇಶನದಲ್ಲಿ ಮಾಡಿದ್ದಾರೆ. ಗಿಬ್ರಾನ್​ ಅವರ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಸ್ಲಂ ಡಾಗ್​​ ಮಿಲಿಯನೇರ್​’ ಸಿನಿಮಾದಲ್ಲಿ ನಟಿಸಿದ್ದ ಮಧುರ್​ ಮಿತ್ತಲ್​ ‘800’ ಚಿತ್ರದಲ್ಲಿ ಮುಖ್ಯಭೂಮಿಕೆ ಮಾಡಿದ್ದಾರೆ. ಮುತ್ತಯ್ಯ ಅವರ ಪತ್ನಿಯ ಪಾತ್ರಕ್ಕೆ ಮಹಿಮಾ ನಂಬಿಯಾರ್​ ನಟಿಸಿದ್ದಾರೆ. ತಮಿಳು, ತೆಲುಗು, ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ಸಿನಿಮಾ ಮೂಡಿಬರುತ್ತಿದೆ. ಅಕ್ಟೋಬರ್​ 6ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಸಚಿನ್​ ತೆಂಡೂಲ್ಕರ್​ ಈ ಸಿನಿಮಾದ ಟ್ರೇಲರ್​ ರಿಲೀಸ್ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ