AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saina Nehwal: ‘ನನ್ನ ಮಗಳು ದೇಶಕ್ಕಾಗಿ ಪದಕ ಗೆದ್ದಿದ್ದಾಳೆ; ನೀವೇನು ಮಾಡಿದ್ದೀರಿ?’ ನಟ ಸಿದ್ಧಾರ್ಥ್​ಗೆ ಸೈನಾ ತಂದೆಯ ನೇರ ಪ್ರಶ್ನೆ

Siddharth: ಭಾರತೀಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರ ಟ್ವೀಟ್ ಒಂದಕ್ಕೆ ಪ್ರತಿಕ್ರಿಯಿಸುವ ಭರದಲ್ಲಿ ಕೀಳುಮಟ್ಟದ ಪದಗಳನ್ನು ಬಳಸಿದ ನಟ ಸಿದ್ಧಾರ್ಥ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸೈನಾ ತಂದೆ ಹರ್ವೀರ್ ಸಿಂಗ್ ನೆಹ್ವಾಲ್ ನಟ ಸಿದ್ಧಾರ್ಥ್ ಸಾಧನೆ ಏನು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Saina Nehwal: ‘ನನ್ನ ಮಗಳು ದೇಶಕ್ಕಾಗಿ ಪದಕ ಗೆದ್ದಿದ್ದಾಳೆ; ನೀವೇನು ಮಾಡಿದ್ದೀರಿ?’ ನಟ ಸಿದ್ಧಾರ್ಥ್​ಗೆ ಸೈನಾ ತಂದೆಯ ನೇರ ಪ್ರಶ್ನೆ
ಸಿದ್ಧಾರ್ಥ್, ಸೈನಾ ನೆಹ್ವಾಲ್
TV9 Web
| Updated By: shivaprasad.hs|

Updated on: Jan 11, 2022 | 3:48 PM

Share

ದಕ್ಷಿಣ ಭಾರತದ ನಟ ಸಿದ್ಧಾರ್ಥ್ (Siddharth) ‘ರಂಗ್ ದೇ ಬಸಂತಿ’ ಚಿತ್ರದ ಮೂಲಕ ಎಲ್ಲೆಡೆ ಗುರುತಿಸಿಕೊಂಡವರು. ಆದರೆ ಇತ್ತೀಚೆಗೆ ಅವರು ನಟನೆಯ ಹೊರತಾದ ಕಾರಣಗಳಿಂದ ದೇಶಾದ್ಯಂತ ಸುದ್ದಿಯಾಗಿದ್ದಾರೆ. ಭಾರತೀಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರ ಟ್ವೀಟ್ ಒಂದಕ್ಕೆ ಪ್ರತಿಕ್ರಿಯಿಸುವ ಭರದಲ್ಲಿ ಸಿದ್ಧಾರ್ಥ್ ಕೀಳು ಮಟ್ಟದ ಪದಗಳನ್ನು ಬಳಸಿದ್ದು ವಿವಾದ ಸೃಷ್ಟಿಸಿತ್ತು. ಇದೀಗ ಈ ಟ್ವೀಟ್ ಕುರಿತಂತೆ ಸೈನಾ ನೆಹ್ವಾಲ್ ತಂದೆ ಹರ್ವೀರ್ ಸಿಂಗ್ ನೆಹ್ವಾಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ‘ಸೈನಾ ದೇಶಕ್ಕೆ ಪದಕಗಳನ್ನು ಗೆದ್ದುಕೊಟ್ಟಿದ್ದಾಳೆ. ಆ ನಟ ದೇಶಕ್ಕೆ ಏನು ಮಾಡಿದ್ದಾರೆ? ಎಂದು ಹರ್ವೀರ್ ಪ್ರಶ್ನಿಸಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಹರ್ವೀರ್, ‘‘ನನ್ನ ಮಗಳ ಕುರಿತಾಗಿ ಅಂತಹ ಮಾತುಗಳನ್ನು ಕೇಳಿದಾಗ ಬಹಳ ಖೇದವಾಯಿತು. ಆಕೆ ದೇಶದ ಪರ ಆಟವಾಡಿ ಪದಕಗಳನ್ನು ಗೆದ್ದಿದ್ದಾಳೆ. ದೇಶದ ಹೆಮ್ಮೆ ಹೆಚ್ಚಿಸಿದ್ದಾಳೆ. ಅವರು ದೇಶಕ್ಕಾಗಿ ಏನು ಮಾಡಿದ್ದಾರೆ?’’ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗ ಸಿದ್ಧಾರ್ಥ್ ಹೇಳಿಕೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮಹಾರಾಷ್ಟ್ರ ಡಿಜಿಪಿಗೆ ನಟನ ವಿರುದ್ಧ ಪ್ರಕರಣ ದಾಖಲಿಸುವಂತೆ ಪತ್ರ ಬರೆದಿದೆ. ಈ ಕುರಿತು ಪ್ರತಿಕ್ರಿಯಿಸಿದ ಹರ್ವೀರ್, ‘‘ಆಯೋಗದ ನಿರ್ಧಾರ ಸ್ವಾಗತಾರ್ಹ. ಸಿದ್ಧಾರ್ಥ್ ಕ್ಷಮೆ ಕೋರಬೇಕು. ನಿನ್ನೆಯ ಪ್ರಕರಣಕ್ಕೂ ಮೊದಲು ಅವರು ಯಾರೆಂದೇ ಗೊತ್ತಿರಲಿಲ್ಲ’’ ಎಂದಿದ್ಧಾರೆ.

ಪ್ರಕರಣವೇನು? ಪಂಜಾಬ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭದ್ರತಾ ಲೋಪ ಪ್ರಕರಣದ ಕುರಿತಂತೆ ಸೈನಾ ಪ್ರತಿಕ್ರಿಯಿಸುತ್ತಾ, ಕಳವಳ ವ್ಯಕ್ತಪಡಿಸಿದ್ದರು. ಇದಕ್ಕೆ ಸಿದ್ಧಾರ್ಥ್ ಪ್ರತಿಕ್ರಿಯೆ ನೀಡಿ, ‘‘ಸೂಕ್ಷ್ಮ ಕಾಕ್ ವಿಶ್ವ ಚಾಂಪಿಯನ್, ಭಾರತವು ರಕ್ಷಕರನ್ನು ಹೊಂದಿರುವುದಕ್ಕೆ ದೇವರಿಗೆ ಧನ್ಯವಾದಗಳು. ಶೇಮ್ ಆನ್ ಯೂ ರಿಹಾನ್ನಾ’’ ಎಂದಿದ್ದರು. ಅವರು ಬಳಸಿದ ಆಕ್ಷೇಪಾರ್ಹ ಪದಗಳಿಗೆ ವಿರೋಧ ವ್ಯಕ್ತವಾಗಿತ್ತು. ನಂತರದಲ್ಲಿ ಸಿದ್ಧಾರ್ಥ್ ಸಮರ್ಥನೆ ನೀಡುತ್ತಾ, ತಾವು ‘ಕಾಕ್ ಮತ್ತು ಬುಲ್’ ಈ ಅರ್ಥದಲ್ಲಿ ಪದ ಬಳಿಸಿದ್ದೆ. ಅದನ್ನು ಬೇರೆ ರೀತಿ ಓದುವುದು ಸರಿಯಲ್ಲ ಎಂದಿದ್ದರು. ಸಿದ್ಧಾರ್ಥ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸೈನಾ, ‘‘ನಾನು ನಟನೆಯಲ್ಲಿ ಸಿದ್ಧಾರ್ಥ್​ರಂತೆ ಆಗಬೇಕು ಎಂದು ಕನಸು ಕಂಡಿದ್ದೆ. ಆದರೆ ಈ ಹೇಳಿಕೆ ಸರಿಯಲ್ಲ. ಅವರು ಉತ್ತಮ ಪದಗಳ ಮೂಲಕ ಪ್ರತಿಕ್ರಿಯಿಸಬಹುದಿತ್ತು’’ ಎಂದಿದ್ದರು.

ಸಿದ್ಧಾರ್ಥ್ ಟ್ವೀಟ್ ಇಲ್ಲಿದೆ:

ಸೈನಾ ಬೆಂಬಲಕ್ಕೆ ನಿಂತ ಕ್ರೀಡಾ ಸಚಿವ ಕಿರಣ್ ರಿಜಿಜು: ದೇಶಾದ್ಯಂತ ಸಿದ್ಧಾರ್ಥ್ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದ್ದು, ಹಲವರು ಸೈನಾ ಬೆಂಬಲಕ್ಕೆ ನಿಂತಿದ್ದಾರೆ. ಕೇಂದ್ರ ಕ್ರೀಡಾಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ, ‘‘ಸೈನಾ ದೇಶದ ಹೆಮ್ಮೆಯ ಪ್ರತಿಭೆ. ಅವರ ವಿರುದ್ಧ ಕೀಳು ರೀತಿಯ ಹೇಳಿಕೆ ನೀಡುವುದು ಕೆಟ್ಟ ಮನಸ್ಥತಿ ತೋರಿಸುತ್ತದೆ’’ ಎಂದಿದ್ದಾರೆ.

ಇದನ್ನೂ ಓದಿ:

ಸೈನಾ ನೆಹ್ವಾಲ್ ಟ್ವೀಟ್​​ಗೆ ಕೆಟ್ಟದಾಗಿ ಪ್ರತಿಕ್ರಿಯಿಸಿದ ನಟ ಸಿದ್ಧಾರ್ಥ್ ಟ್ವಿಟರ್ ಖಾತೆ ಬ್ಲಾಕ್ ಮಾಡಿ: ಟ್ವಿಟರ್​​ಗೆ ಮಹಿಳಾ ಆಯೋಗ ಮನವಿ

Pushpa The Rise: ರಶ್ಮಿಕಾರಂತೆ ಹೆಜ್ಜೆಹಾಕಿ ಎಲ್ಲರನ್ನೂ ದಂಗಾಗಿಸಿದ ಸ್ಪೈಡರ್​ಮ್ಯಾನ್! ಇಲ್ಲಿದೆ ವಿಡಿಯೋ ಸಾಕ್ಷಿ 

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ