ಜೂ. ಎನ್‌ಟಿಆರ್, ಪ್ರಶಾಂತ್ ನೀಲ್ ಸಿನಿಮಾ ಸ್ಥಗಿತ? ಗಾಳಿ ಸುದ್ದಿಗೆ ಬ್ರೇಕ್ ಹಾಕಿದ ನಿರ್ಮಾಪಕರು

ಜೂನಿಯರ್ ಎನ್​ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್​ನ ಸಿನಿಮಾ ಶೂಟಿಂಗ್ ನಿಂತಿದೆ ಎಂಬ ಸುದ್ದಿ ಇತ್ತೀಚೆಗೆ ಹಬ್ಬಿತ್ತು. ಆ ಬಗ್ಗೆ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್’ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ.

ಜೂ. ಎನ್‌ಟಿಆರ್, ಪ್ರಶಾಂತ್ ನೀಲ್ ಸಿನಿಮಾ ಸ್ಥಗಿತ? ಗಾಳಿ ಸುದ್ದಿಗೆ ಬ್ರೇಕ್ ಹಾಕಿದ ನಿರ್ಮಾಪಕರು
Prashanth Neel, Jr Ntr

Updated on: Apr 08, 2026 | 4:06 PM

ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಮತ್ತು ಟಾಲಿವುಡ್​ನ ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರದ ಬಗ್ಗೆ ಹಬ್ಬಿದ್ದ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಈ ಚಿತ್ರವು ಸ್ಥಗಿತಗೊಂಡಿದೆ ಎಂಬ ಸುದ್ದಿಯನ್ನು ನಿರ್ಮಾಣ ಸಂಸ್ಥೆಯು ಅಧಿಕೃತವಾಗಿ ನಿರಾಕರಿಸಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಡ್ರ್ಯಾಗನ್’ (Dragon) ಅಥವಾ #NTRNeel ಎಂದು ಕರೆಯಲಾಗುತ್ತಿದೆ. ಈ ಸಿನಿಮಾದ ಚಿತ್ರೀಕರಣವು ನಿಂತಿದೆ ಎಂಬ ಮಾತುಗಳು ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದವು.

ಈ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಅವರು ವಿವಿಧ ಲುಕ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದ್ದು, ಇತ್ತೀಚಿನ ಫೋಟೋಶೂಟ್‌ನಲ್ಲಿ ಅವರ ಲುಕ್ ಬಗ್ಗೆ ಪ್ರಶಾಂತ್ ನೀಲ್ ಮತ್ತು ಎನ್‌ಟಿಆರ್ ಅತೃಪ್ತಿ ಹೊಂದಿದ್ದಾರೆ. ಈ ಕಾರಣದಿಂದ ಸರಿಯಾದ ಲುಕ್ ಸಿಗುವವರೆಗೆ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್’ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಈ ಕುರಿತು ಎಕ್ಸ್ (ಟ್ವಿಟ್ಟರ್) ಮೂಲಕ ಸ್ಪಷ್ಟನೆ ನೀಡಿರುವ ನಿರ್ಮಾಣ ಸಂಸ್ಥೆಯು, ಸಿನಿಮಾದ ಕೆಲಸಗಳು ಯೋಜಿತವಾಗಿಯೇ ಸಾಗುತ್ತಿವೆ ಎಂದು ಸ್ಪಷ್ಟಪಡಿಸಿದೆ. ಈ ವಿಷಯ ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

‘ನಟನ ಲುಕ್ ಅಥವಾ ಚಿತ್ರೀಕರಣ ಸ್ಥಗಿತದ ಬಗ್ಗೆ ಹರಡುತ್ತಿರುವ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಸಿನಿಮಾವು ಈ ಮೊದಲಿನ ಪ್ಲಾನ್ ಪ್ರಕಾರವೇ ಸಾಗುತ್ತಿದೆ. ಇದು ಕೇವಲ ಮುಂದಿನ ಹಂತದ ಚಿತ್ರೀಕರಣಕ್ಕೆ ತಯಾರಿ ಮಾಡುವ ಸಲುವಾಗಿ ನೀಡಿದ ವಿರಾಮ ಅಷ್ಟೇ. ದಯವಿಟ್ಟು ಯಾರೂ ಅಧಿಕೃತವಲ್ಲದ ಮಾಹಿತಿಯನ್ನು ನಂಬಬೇಡಿ’ ಎಂದು ‘ಮೈತ್ರಿ ಮೂವೀ ಮೇಕರ್ಸ್’ ತಿಳಿಸಿದೆ.

ಇದನ್ನೂ ಓದಿ: ‘ಧುರಂಧರ್ 2’ ಚಿತ್ರದ ಖ್ಯಾತ ನಟನಿಗೆ ಸಿನಿಮಾ ಅವಕಾಶ ಕೊಟ್ಟ ಪ್ರಶಾಂತ್ ನೀಲ್

‘ಕೆಜಿಎಫ್: ಚಾಪ್ಟರ್ 1’, ‘ಕೆಜಿಎಫ್: ಚಾಪ್ಟರ್ 2’ ಮತ್ತು ‘ಸಲಾರ್’ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿರುವ ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್‌ಟಿಆರ್ ಜೊತೆ ಕೈಜೋಡಿಸಿರುವುದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಚಿತ್ರವನ್ನು ಅತ್ಯಂತ ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us