AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​, ಜೂ. ಎನ್​ಟಿಆರ್​ ಚಿತ್ರದ ಬಗ್ಗೆ ನಿರ್ಮಾಪಕರಿಂದ ಬ್ರೇಕಿಂಗ್​ ನ್ಯೂಸ್​

Prashanth Neel: ‘ಭಾರತೀಯ ಚಿತ್ರರಂಗ ಇತಿಹಾಸದಲ್ಲಿ ಈ ಸಿನಿಮಾ ಹೊಸ ಮೈಲಿಗಲ್ಲು ಸೃಷ್ಟಿ ಮಾಡಲಿದೆ’ ಎಂಬ ಕ್ಯಾಪ್ಷನ್​ನೊಂದಿಗೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ಈ ಸುದ್ದಿಯನ್ನು ಹಂಚಿಕೊಂಡಿದೆ. ಪ್ರಶಾಂತ್​ ನೀಲ್​ ಮತ್ತು ಜೂನಿಯರ್​ ಎನ್​ಟಿಆರ್​ ಅಭಿಮಾನಿಗಳು ಈ ಚಿತ್ರದ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಪ್ರಶಾಂತ್​ ನೀಲ್​, ಜೂ. ಎನ್​ಟಿಆರ್​ ಚಿತ್ರದ ಬಗ್ಗೆ ನಿರ್ಮಾಪಕರಿಂದ ಬ್ರೇಕಿಂಗ್​ ನ್ಯೂಸ್​
ಪ್ರಶಾಂತ್​ ನೀಲ್​, ಜೂನಿಯರ್​ ಎನ್​ಟಿಆರ್​
ಮದನ್​ ಕುಮಾರ್​
|

Updated on: Oct 05, 2023 | 4:27 PM

Share

ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಮತ್ತು ನಟ  ಜೂನಿಯರ್​ ಎನ್​ಟಿಆರ್​ ಅವರು ಒಟ್ಟಾಗಿ ಸಿನಿಮಾ ಮಾಡುತ್ತಾರೆ ಎಂಬ ಬಗ್ಗೆ ಬಹಳ ಹಿಂದೆಯೇ ಮಾಹಿತಿ ಸಿಕ್ಕಿತ್ತು. ಆದರೆ ಈ ಸಿನಿಮಾ ಸೆಟ್ಟೇರುವುದು ತಡವಾಗುತ್ತಲೇ ಇತ್ತು. ಈ ಬಹುನಿರೀಕ್ಷಿತ ಸಿನಿಮಾದ ಕೆಲಸಗಳು ಯಾವಾಗ ಆರಂಭ ಆಗುತ್ತವೆ ಎಂಬ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಪ್ರಶ್ನೆ ಕೇಳಿಬರುತ್ತಲೇ ಇತ್ತು. ಅದಕ್ಕೆ ಈಗ ನಿರ್ಮಾಪಕರಿಂದಲೇ ಅಧಿಕೃತ ಮಾಹಿತಿ ಹೊರಬಿದ್ದಿದೆ. ಈ ಸಿನಿಮಾಗೆ ‘ಮೈತ್ರಿ ಮೂವೀ ಮೇಕರ್ಸ್​’ (Mythri Movie Makers) ಸಂಸ್ಥೆ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಶೂಟಿಂಗ್​ 2024ರ ಏಪ್ರಿಲ್​ನಲ್ಲಿ ಶುರುವಾಗಲಿದೆ ಎಂದು ಈ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆ ಮೂಲಕ ಪೋಸ್ಟ್​ ಮಾಡಲಾಗಿದೆ. ಈ ಸುದ್ದಿ ಕೇಳಿ ಜೂನಿಯರ್​ ಎನ್​ಟಿಆರ್​ (Jr NTR) ಮತ್ತು ಪ್ರಶಾಂತ್​ ನೀಲ್​ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.

ಪ್ರಶಾಂತ್​ ನೀಲ್​ ಅವರು ಈಗ ‘ಸಲಾರ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಡಿಸೆಂಬರ್​ 22ರಂದು ಆ ಚಿತ್ರ ಬಿಡುಗಡೆ ಆಗಲಿದೆ. ಅದು ಎರಡು ಪಾರ್ಟ್​ಗಳಲ್ಲಿ ಮೂಡಿಬರುತ್ತಿದೆ ಎಂಬುದು ವಿಶೇಷ. ಅತ್ತ ಜೂನಿಯರ್​ ಎನ್​ಟಿಆರ್​ ಅವರು ‘ದೇವರ’ ಸಿನಿಮಾದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಅದರ ಜೊತೆಗೆ ‘ವಾರ್​ 2’ ಸಿನಿಮಾದಲ್ಲೂ ಅವರು ನಟಿಸಬೇಕಿದೆ. ಈ ಎಲ್ಲ ಪ್ರಾಜೆಕ್ಟ್​ಗಳ ನಡುವೆ ಪ್ರಶಾಂತ್​ ನೀಲ್​ ಮತ್ತು ಜೂನಿಯರ್​ ಎನ್​ಟಿಆರ್​ ಕಾಂಬಿನೇಷನ್​ನ ಸಿನಿಮಾ ಸೆಟ್ಟೇರುವುದು ತಡ ಆಗಬಹುದು ಎಂದುಕೊಂಡಿದ್ದವರಿಗೆ ಈಗ ನಿರ್ಮಾಣ ಸಂಸ್ಥೆಯ ಕಡೆಯಿಂದ ಅಪ್​ಡೇಟ್​ ಸಿಕ್ಕಿದೆ.

ಜೂನಿಯರ್​ ಎನ್​ಟಿಆರ್​ ನಟನೆಯ ‘ಆರ್​ಆರ್​ಆರ್​’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿದ್ದೂ ಅಲ್ಲದೇ, ಆಸ್ಕರ್​ ಅಂಗಳದಲ್ಲಿ ಸ್ಪರ್ಧಿಸಿ ‘ನಾಟು ನಾಟು..’ ಹಾಡಿಗೆ ಪ್ರಶಸ್ತಿ ಪಡೆಯಿತು. ಆ ಬಳಿಕ ಅವರ ಖ್ಯಾತಿ ಇನ್ನಷ್ಟು ಹೆಚ್ಚಾಗಿದೆ. ಬಾಲಿವುಡ್​ನಲ್ಲೂ ಅವರಿಗೆ ಹೊಸ ಅವಕಾಶಗಳು ಸಿಗುತ್ತಿವೆ. ಪ್ರಶಾಂತ್​ ನೀಲ್​ ಜೊತೆಗಿನ ಸಿನಿಮಾಗಾಗಿ ಅವರೀಗ ಡೇಟ್ಸ್ ಹೊಂದಿಸಿಕೊಳ್ಳಬೇಕಿದೆ. 2024ರ ಏಪ್ರಿಲ್​ನಲ್ಲಿ ಈ ಸಿನಿಮಾದ ಕೆಲಸಗಳಿಗೆ ಚಾಲನೆ ಸಿಗಲಿದೆ. ಹಾಗಾದರೆ ಪ್ರಶಾಂತ್​ ನೀಲ್​ ಅವರು ‘ಸಲಾರ್​ 2’ ಸಿನಿಮಾದ ಕೆಲಸಗಳನ್ನು ಅಷ್ಟರೊಳಗೆ ಮುಗಿಸುತ್ತಾರಾ ಅಥವಾ ಜೂ. ಎನ್​ಟಿಆರ್​ ಜೊತೆಗಿನ ಸಿನಿಮಾದ ಶೂಟಿಂಗ್ ಮುಕ್ತಾಯ ಆದ ಬಳಿಕ ‘ಸಲಾರ್​ 2’ ಚಿತ್ರವನ್ನು ಕೈಗೆತ್ತಿಕೊಳ್ಳುತ್ತಾರಾ ಅಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಶೂಟಿಂಗ್​ ಸೆಟ್​ನಲ್ಲಿ ಹೇಗಿರ್ತಾರೆ ಗೊತ್ತಾ ಪ್ರಶಾಂತ್​ ನೀಲ್​? ವಿಶೇಷ ವಿಡಿಯೋ ಹಂಚಿಕೊಂಡ ‘ಸಲಾರ್​’ ಚಿತ್ರತಂಡ

‘ಇದು ಭಾರತೀಯ ಸಿನಿಮಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಲಿದೆ’ ಎಂಬ ಕ್ಯಾಪ್ಷನ್​ನೊಂದಿಗೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ಈ ಸುದ್ದಿಯನ್ನು ಹಂಚಿಕೊಂಡಿದೆ. ಆ ಮೂಲಕ ನಿರೀಕ್ಷೆ ಹೆಚ್ಚಿಸುವ ಕೆಲಸ ಮಾಡಲಾಗಿದೆ. ಇದೇ ಸಂಸ್ಥೆಯಿಂದ ‘ಪುಷ್ಪ 2’ ಸಿನಿಮಾ ಮೂಡಿಬರುತ್ತಿದೆ. ಆ ಸಿನಿಮಾ 2024ರ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್