ಬಹುನಿರೀಕ್ಷಿತ ‘ಆರ್ಆರ್ಆರ್’ ಸಿನಿಮಾದ (RRR Movie) ಕ್ರೇಜ್ ದಿನದಿನವೂ ಹೆಚ್ಚುತ್ತಿದೆ. ರಾಜಮೌಳಿ (Rajamouli) ನಿರ್ದೇಶನದ ಈ ಚಿತ್ರದಲ್ಲಿ ರಾಮ್ ಚರಣ್ (Ram Charan) ಮತ್ತು ಜ್ಯೂ. ಎನ್ಟಿಆರ್ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ನಾಯಕಿಯಾಗಿ ಆಲಿಯಾ ಭಟ್ ಅಭಿನಯಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಮತ್ತು ಪೋಸ್ಟರ್ಗಳು ಭಾರಿ ಹೈಪ್ ಸೃಷ್ಟಿ ಮಾಡಿವೆ. ಈಗ ಈ ಸಿನಿಮಾದಿಂದ ಹೊಸದೊಂದು ಲಿರಿಕಲ್ ಸಾಂಗ್ ರಿಲೀಸ್ ಆಗಿದೆ. ‘ನಾಟು ನಾಟು..’ ಗೀತೆಯು (Naatu Naatu Song) 5 ಭಾಷೆಗಳಲ್ಲಿ ಮೂಡಿಬಂದಿದೆ. ಕನ್ನಡ ವರ್ಷನ್ ‘ಹಳ್ಳಿ ನಾಟು..’ (Halli Naatu) ಹಾಡು ಕೂಡ ಭರ್ಜರಿ ಸೌಂಡು ಮಾಡುತ್ತಿದೆ. ಡ್ಯಾನ್ಸ್ ವಿಚಾರದಲ್ಲಿ ರಾಮ್ ಚರಣ್ ಮತ್ತು ಜ್ಯೂ. ಎನ್ಟಿಆರ್ (Jr NTR) ಒಬ್ಬರಿಗೊಬ್ಬರು ಪೈಪೋಟಿ ನೀಡಿದ್ದಾರೆ. ಅಭಿಮಾನಿಗಳಿಂದ ಈ ಗೀತೆಗೆ ಸಖತ್ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಡುಗಡೆಯಾಗ ಕೆಲವೇ ನಿಮಿಷಗಳಲ್ಲಿ ಲಕ್ಷಗಟ್ಟಲೆ ವೀವ್ಸ್ ಪಡೆದುಕೊಂಡಿದೆ.
ನೈಜ ಘಟನೆ ಆಧರಿಸಿ ‘ಆರ್ಆರ್ಆರ್’ ಸಿನಿಮಾ ತಯಾರಾಗುತ್ತಿದೆ. ಖ್ಯಾತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಿಂದೆ ‘ದೋಸ್ತಿ..’ ಹಾಡು ಬಿಡುಗಡೆ ಆಗಿತ್ತು. ಈಗ ಎರಡನೇ ಗೀತೆ ‘ಹಳ್ಳಿ ನಾಟು..’ ಎಲ್ಲೆಲ್ಲೂ ರಾರಾಜಿಸುತ್ತಿದೆ. ಈ ಹಾಡಿನಿಂದಾಗಿ ಚಿತ್ರದ ಮೇಲಿನ ಕ್ರೇಜ್ ಹೆಚ್ಚುವಂತಾಗಿದೆ. 2022ರ ಜ.7ರಂದು ಈ ಸಿನಿಮಾ ಅದ್ದೂರಿಯಾಗಿ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಆ ದಿನಕ್ಕಾಗಿ ಸಿನಿಪ್ರಿಯರು ಕಾದು ಕುಳಿತಿದ್ದಾರೆ.
The Dancing Dynamites @tarak9999 & @alwaysramcharan are here to rock the floor and shake the screen with our #RRRMassAnthem ???
Tel – https://t.co/7CvdjgvW7p
Hin- https://t.co/zJmIph6siK
Tam- https://t.co/5oGwM911gU
Kan- https://t.co/vdFXvokKFx
Mal – https://t.co/vrfwk3CTcI pic.twitter.com/0U6wYdCu2H— RRR Movie (@RRRMovie) November 10, 2021
ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಟೀಸರ್ ಈಗ ಬಿಡುಗಡೆ ಆಗಿತ್ತು. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಟೀಸರ್ 37 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿತ್ತು. ಭಾರತೀಯ ಸಿನಿಮಾ ಜಗತ್ತಿನಲ್ಲಿ ಮಾಂತ್ರಿಕ ಎಂದೇ ಕರೆಸಿಕೊಳ್ಳುವ ನಿರ್ದೇಶಕ ರಾಜಮೌಳಿ ಅವರು ‘ಆರ್ಆರ್ಆರ್’ ಸಿನಿಮಾ ಮೂಲಕ ಮತ್ತೆ ಮೋಡಿ ಮಾಡುವುದು ಖಚಿತ ಎಂಬುದಕ್ಕೆ ಈ ಟೀಸರ್ ಸಾಕ್ಷಿ ಒದಗಿಸಿದೆ. ಅದ್ದೂರಿ ಸೆಟ್ಗಳು, ಭರ್ಜರಿ ಆ್ಯಕ್ಷನ್ ದೃಶ್ಯಗಳು, ಅತ್ಯಾಧುನಿಕ ವಿಎಫ್ಎಕ್ಸ್ ಸೇರಿದಂತೆ ಹಲವು ಅಂಶಗಳು ‘ಆರ್ಆರ್ಆರ್’ ಸಿನಿಮಾದಲ್ಲಿ ಹೈಲೈಟ್ ಆಗಲಿವೆ.
ದೇಶಭಕ್ತಿಯ ಕಥಾಹಂದರವನ್ನು ಹೊಂದಿರುವ ಈ ಚಿತ್ರದಲ್ಲಿ ಜೂ.ಎನ್ಟಿಆರ್ ಕೋಮರಂ ಭೀಮ್ ಪಾತ್ರದಲ್ಲಿ ಕಾಣಿಸಿಕೊಂಡರೆ, ರಾಮ್ ಚರಣ್ ತೇಜ ಅಲ್ಲುರಿ ಸೀತಾರಾಮ ರಾಜು ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಬಾಲಿವುಡ್ ನಟ ಅಜಯ್ ದೇವಗನ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ:
ಮೋಹನ್ಲಾಲ್ ‘ಮರಕ್ಕರ್’ ಚಿತ್ರದ ಕ್ರಾಂತಿಕಾರಕ ನಿರ್ಧಾರ; ‘ಆರ್ಆರ್ಆರ್’, ‘ಕೆಜಿಎಫ್ 2’ ಭವಿಷ್ಯವೇನು?