Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ
Naatu Naatu Song: ‘ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.
‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು (Naatu Naatu Song) ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.
‘ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.
‘Naatu Naatu’ from ‘RRR’ wins the Oscar for Best Original Song! #Oscars #Oscars95 pic.twitter.com/tLDCh6zwmn
— The Academy (@TheAcademy) March 13, 2023
ಹೆಚ್ಚಿದ ರಾಜಮೌಳಿ ಖ್ಯಾತಿ
‘ಆರ್ಆರ್ಆರ್’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್ ರೇಸ್ನಲ್ಲಿ ಗೆದ್ದಿದೆ. ‘ಆರ್ಆರ್ಆರ್’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವಾರ್ಡ್ ಫಂಕ್ಷನ್ನಲ್ಲಿ ಅವಾರ್ಡ್ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಧೂಳೆಬ್ಬಿಸಿದ ನಾಟು ನಾಟು..
‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್ಟಿಆರ್ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ.
‘ದಿ ಎಲಿಫಂಟ್ ವಿಸ್ಪರ್ಸ್’ ಗೆ ಪ್ರಶಸ್ತಿ
‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್ ವಿಭಾಗದಲ್ಲಿ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ. ಮನುಷ್ಯ ಹಾಗೂ ಪ್ರಾಣಿಗಳ ಮಧ್ಯೆ ಬಂಧ ಬೆಳೆದರೆ ಅದು ಹಾಗೆಯೇ ಉಳಿಯುತ್ತದೆ. ‘ದಿ ಎಲಿಫೆಂಟ್ ವಿಸ್ಪರರ್ಸ್’ ಇದನ್ನೇ ಹೇಳುತ್ತಿದೆ. ರ್ತಿಕಿ ಗೊನ್ಸಾಲ್ವೆಸ್ ಈ ಸಾಕ್ಷ್ಯಚಿತ್ರ ನಿರ್ದೇಶನ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:27 am, Mon, 13 March 23