Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ

| Updated By: Digi Tech Desk

Updated on: Mar 13, 2023 | 9:28 AM

Naatu Naatu Song: ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು  ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ
ನಾಟು ನಾಟು ಹಾಡಿಗೆ ಆಸ್ಕರ್
Follow us on

‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು (Naatu Naatu Song) ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.

‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು  ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

ಹೆಚ್ಚಿದ ರಾಜಮೌಳಿ ಖ್ಯಾತಿ

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನಿರ್ದೇಶಕ ಎಸ್.ಎಸ್​. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್​ ರೇಸ್​ನಲ್ಲಿ ಗೆದ್ದಿದೆ. ‘ಆರ್​ಆರ್​ಆರ್​’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್​’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವಾರ್ಡ್​ ಫಂಕ್ಷನ್​ನಲ್ಲಿ ಅವಾರ್ಡ್​ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಧೂಳೆಬ್ಬಿಸಿದ ನಾಟು ನಾಟು..

‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್​ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ.

‘ದಿ ಎಲಿಫಂಟ್ ವಿಸ್ಪರ್ಸ್​​’ ಗೆ ಪ್ರಶಸ್ತಿ

‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರಕ್ಕೆ ಬೆಸ್ಟ್​ ಡಾಕ್ಯುಮೆಂಟರಿ ಶಾರ್ಟ್​ ವಿಭಾಗದಲ್ಲಿ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ.  ಮನುಷ್ಯ ಹಾಗೂ ಪ್ರಾಣಿಗಳ ಮಧ್ಯೆ ಬಂಧ ಬೆಳೆದರೆ ಅದು ಹಾಗೆಯೇ ಉಳಿಯುತ್ತದೆ. ‘ದಿ ಎಲಿಫೆಂಟ್​ ವಿಸ್ಪರರ್ಸ್​’  ಇದನ್ನೇ ಹೇಳುತ್ತಿದೆ. ರ್ತಿಕಿ ಗೊನ್ಸಾಲ್ವೆಸ್ ಈ ಸಾಕ್ಷ್ಯಚಿತ್ರ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:27 am, Mon, 13 March 23