‘ಕಲ್ಕಿ 2898 ಎಡಿ’ ಸಿನಿಮಾ ಭಾರತ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ ಎಂದ ರಜನಿಕಾಂತ್

ಮೊದಲ ದಿನ ‘ಕಲ್ಕಿ 2898 ಎಡಿ’ ಚಿತ್ರ ವಿಶ್ವಾದ್ಯಂತ 191 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ ಈ ಚಿತ್ರ ಭಾರತದಲ್ಲಿ 54 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ವಿಶ್ವ ಬಾಕ್ಸ್ ಆಫೀಸ್ ಲೆಕ್ಕಾಚಾರವೂ ಸೇರಿದರೆ ಸಿನಿಮಾದ ಒಟ್ಟಾರೆ ಗಳಿಕೆ 300 ಕೋಟಿ ರೂಪಾಯಿ ಸಮೀಪಿಸಿದೆ. ಸಿನಿಮಾ ಬಗ್ಗೆ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾ ಭಾರತ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ ಎಂದ ರಜನಿಕಾಂತ್
ರಜನಿಕಾಂತ್-ಪ್ರಭಾಸ್
Follow us
|

Updated on: Jun 29, 2024 | 1:29 PM

‘ಕಲ್ಕಿ 2898 ಎಡಿ’ ಸಿನಿಮಾ ಎಲ್ಲ ಕಡೆಗಳಲ್ಲಿ ಹವಾ ಮಾಡುತ್ತಿದೆ. ಈ ಚಿತ್ರ ನೋಡಿದವರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸಿನಿಮಾ ನೋಡಿ ಅನೇಕರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಈಗ ನಟ ರಜನಿಕಾಂತ್ ಅವರ ಸರದಿ. ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ವೀಕ್ಷಿಸಿದ್ದಾರೆ. ಜೊತೆಗೆ ನಿರ್ದೇಶಕನ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾ ಸೈನ್ಸ್ ಫಿಕ್ಷನ್ ಶೈಲಿಯಲ್ಲಿ ಮೂಡಿ ಬಂದಿದೆ. ಸಂಪೂರ್ಣ ಕಲ್ಪನಾತ್ಮಕವಾಗಿ ಚಿತ್ರ ಮೂಡಿ ಬಂದಿದೆ. ಈ ಸಿನಿಮಾದಲ್ಲಿ ಇರೋ ಗ್ರಾಫಿಕ್ಸ್ ಹಾಗೂ ವಿಶ್ಯುವಲ್ಸ್ ಗಮನ ಸೆಳೆದಿದೆ. ಈ ಕಾರಣಕ್ಕೆ ಜನರಿಗೆ ಈ ಚಿತ್ರ ಸಖತ್ ಇಷ್ಟ ಆಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಅನೇಕರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ರಜನಿಕಾಂತ್ ಅವರಿಗೂ ಚಿತ್ರ ಇಷ್ಟ ಆಗಿದೆ.

‘ಕಲ್ಕಿ ಸಿನಿಮಾ ನೋಡಿದೆ. ಎಂತಹ ಅದ್ಭುತ ಸಿನಿಮಾ. ನಾಗ್ ಅಶ್ವಿನ್ ಅವರು ಭಾರತೀಯ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಶ್ವಿನಿ ದತ್, ಅಮಿತಾಭ್ ಬಚ್ಚನ್, ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಹಾಗೂ ತಂಡಕ್ಕೆ ಅಭಿನಂದನೆ. ಎರಡನೇ ಪಾರ್ಟ್​ಗಾಗಿ ಕಾಯುತ್ತಿದ್ದೇನೆ. ದೇವರು ಒಳ್ಳೆಯದು ಮಾಡಲಿ’ ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: ಎರಡನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ‘ಕಲ್ಕಿ 2898 ಎಡಿ’ ಕಮಾಲ್; ಚಿತ್ರ ಗಳಿಸಿದ್ದೆಷ್ಟು?

‘ಕಲ್ಕಿ 2898 ಎಡಿ’ ಸಿನಿಮಾಗೆ ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ. ಈಗಾಗಲೇ ಸಿನಿಮಾದ ಗಳಿಕೆ ಭರ್ಜರಿಯಾಗಿ ಸಾಗುತ್ತಿದೆ. ಇದು ತಂಡದ ಖುಷಿ ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ