‘ಕಲ್ಕಿ 2898 ಎಡಿ’ ಸಿನಿಮಾದ ಎರಡನೇ ಭಾಗದ ಬಗ್ಗೆ ನಿರ್ದೇಶಕ ನಾಗ್ ಅಶ್ವಿನ್ ಮಾತು

ನಾಗ್ ಅಶ್ವಿನ್ ನಿರ್ದೇಶನ ಮಾಡಿರುವ ‘ಕಲ್ಕಿ 2898 ಎಡಿ’ ಸಿನಿಮಾದ ಎರಡನೇ ಭಾಗದ 60% ಚಿತ್ರೀಕರಣ ಮುಗಿದಿದೆ ಎನ್ನಲಾಗುತ್ತಿದೆ. ಆದರೆ ನಿರ್ದೇಶಕ ನಾಗ್ ಅಶ್ವಿನ್ ಬೇರೆಯದೇ ಮಾಹಿತಿ ಹೊರಹಾಕಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾದ ಎರಡನೇ ಭಾಗದ ಬಗ್ಗೆ ನಿರ್ದೇಶಕ ನಾಗ್ ಅಶ್ವಿನ್ ಮಾತು
Follow us
|

Updated on: Jul 05, 2024 | 11:48 AM

‘ಕಲ್ಕಿ 2898 ಎಡಿ’ ಸಿನಿಮಾ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಭರ್ಜರಿ ಹಿಟ್ ಆಗಿದ್ದ 1000 ಕೋಟಿ ಗಳಿಸುವ ನಿರೀಕ್ಷೆ ಹುಟ್ಟಿಸಿದೆ. ಈಗ ಬಿಡುಗಡೆ ಆಗಿರುವುದು ಸಿನಿಮಾದ ಮೊದಲ ಭಾಗವಷ್ಟೆ ಆಗಿದೆ. ಸಿನಿಮಾದ ಎರಡನೇ ಭಾಗ ಇನ್ನೂ ಚಿತ್ರೀಕರಣ ಆಗಬೇಕಿದೆ. ನಿರ್ಮಾಪಕರು ಹೇಳಿರುವಂತೆ ಎರಡನೇ ಭಾಗದ 60% ಚಿತ್ರೀಕರಣ ಆಗಿದೆ. ಆದರೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ನಾಗ್ ಅಶ್ವಿನ್, ಈ ವಿಷಯವನ್ನು ತಳ್ಳಿ ಹಾಕಿದ್ದು, ಇನ್ನೂ ಸಾಕಷ್ಟು ಕೆಲಸ ಬಾಕಿ ಇದೆ ಎಂದಿದ್ದಾರೆ.

ಎರಡನೇ ಭಾಗದ 60% ಚಿತ್ರೀಕರಣ ಆಗಿದೆ ಎಂದು ಸುದ್ದಿ ಹರಿದಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾಗ್ ಅಶ್ವಿನ್, ‘ಕೆಲವು ಭಾಗದ ಚಿತ್ರೀಕರಣ ಆಗಿದೆ ಆದರೆ ಅದು 60% ಚಿತ್ರೀಕರಣ ಎಂದು ಹೇಳಲಾಗದು. ಏಕೆಂದರೆ ಈಗ ಆಗಿರುವುದು ಕೇವಲ 25-30 ದಿನಗಳ ಚಿತ್ರೀಕರಣ ಮಾತ್ರವೇ. ಎರಡನೇ ಭಾಗದ ಹಲವು ದೃಶ್ಯಗಳ ಚಿತ್ರೀಕರಣ ಇನ್ನೂ ಬಾಕಿ ಇದೆ. ಚಿತ್ರೀಕರಣಕ್ಕೆ ಮಾಡಿಕೊಳ್ಳಬೇಕಾದ ತಯಾರಿಯೇ ಇನ್ನೂ ಸಾಕಷ್ಟಿದೆ’ ಎಂದಿದ್ದಾರೆ.

ಎರಡನೇ ಭಾಗಕ್ಕಾಗಿ ನಾವು ಡಿಸೈನ್​ನಿಂದ ಪ್ರಾರಂಭಿಸಬೇಕಿದೆ. ಲೊಕೇಶನ್, ಸೆಟ್, ಕಾಸ್ಟ್ಯೂಮ್, ಪಾತ್ರಗಳು ಎಲ್ಲದರ ಡಿಸೈನ್ ಮಾಡಿ ಆ ನಂತರವಷ್ಟೆ ನಾವು ಚಿತ್ರೀಕರಣ ಆರಂಭ ಮಾಡಬೇಕಾಗುತ್ತದೆ. ಹಾಗಾಗಿ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವ ಮುಂಚಿನ ಕೆಲಸವೇ ಸಾಕಷ್ಟಿದೆ. ನಟರನ್ನು ಸೆಟ್​ಗೆ ಕರೆತರುವಷ್ಟರಲ್ಲಿ ಇನ್ನೂ ಹೆಚ್ಚು ಸಮಯ ಹಿಡಿಯಲಿದೆ’ ಎಂದಿದ್ದಾರೆ ನಾಗ್ ಅಶ್ವಿನ್.

ಇದನ್ನೂ ಓದಿ:‘ಕಲ್ಕಿ 2898 ಎಡಿ’ ಸಿನಿಮಾ ನೋಡಲು ಜಪಾನ್​ನಿಂದ ಭಾರತಕ್ಕೆ ಬಂದ ಪ್ರಭಾಸ್ ಫ್ಯಾನ್ಸ್

‘ಕಲ್ಕಿ 2898 ಎಡಿ’ ಸಿನಿಮಾವನ್ನು ವೈಜಯಂತಿ ಮೂವೀಸ್ ನಿರ್ಮಾಣ ಮಾಡಿದ್ದು, ಸಿನಿಮಾಕ್ಕೆ ಸುಮಾರು 600 ಕೋಟಿ ಬಜೆಟ್ ಹೂಡಿಕೆ ಮಾಡಿದ್ದಾರೆ. ಇದು ಈವರೆಗಿನ ಅತಿ ಹೆಚ್ಚು ಬಜೆಟ್​ನ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ಪ್ರಭಾಸ್, ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ದಿಶಾ ಪಟಾಣಿ ಸೇರಿದಂತೆ ಇನ್ನೂ ಹಲವು ಸ್ಟಾರ್ ನಟ-ನಟಿಯರಿದ್ದಾರೆ. ಸಿನಿಮಾದ ಮೊದಲ ಭಾಗವಷ್ಟೆ ಈಗ ಮುಗಿದಿದ್ದು, ಸಿನಿಮಾದ ಕತೆ ಅಪೂರ್ಣವಾಗಿದೆ. ಎರಡನೇ ಭಾಗ ಯಾವಾಗ ಬಿಡುಗಡೆ ಆಗಲಿದೆಯೋ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ