AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ-ಶೋಭಿತಾ ಫೋಟೋ ವೈರಲ್ ಮಾಡಿದ ವ್ಯಕ್ತಿಗೆ ಸೆಲೆಬ್ರಿಟಿ ಜೋಡಿಯಿಂದ ಕ್ಲಾಸ್?

ನಾಗ ಚೈತನ್ಯ ಹಾಗೂ ಶೋಭಿತಾ ಅವರು ಸುರೇಂದರ್ ಮೋಹನ್ ಅವರು ಕೆಲಸ ಮಾಡುವ ಹೋಟೆಲ್​ಗೆ ಆಗಮಿಸಿದ್ದರು. ಈ ವೇಳೆ ನಾಗ ಚೈತನ್ಯ ಜೊತೆ ಸುಂದರ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ನಾಗ ಚೈತನ್ಯ-ಶೋಭಿತಾ ಫೋಟೋ ವೈರಲ್ ಮಾಡಿದ ವ್ಯಕ್ತಿಗೆ ಸೆಲೆಬ್ರಿಟಿ ಜೋಡಿಯಿಂದ ಕ್ಲಾಸ್?
ಸುರೇಂದರ್​-ನಾಗ ಚೈತನ್ಯ
ರಾಜೇಶ್ ದುಗ್ಗುಮನೆ
|

Updated on: Mar 31, 2023 | 11:06 AM

Share

ಮುಖ್ಯಾಂಶಗಳು

  • ಲಂಡನ್​ನ್ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿರುವ ಸುರೇಂದರ್
  • ರಾಜ್​ಕುಮಾರ್ ರಾವ್​, ಅನುಷ್ಕಾ ಶರ್ಮಾ ಮೊದಲಾದವರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿರೋ ಸುರೇಂದರ್
  • ನಾಗ ಚೈತನ್ಯ ಜೊತೆ ಕ್ಲಿಕ್ಕಿಸಿಕೊಂಡಿದ್ದ ಸುರೇಂದರ್

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ (Sobhita Dhulipala) ಅವರು ಇತ್ತೀಚೆಗೆ ಲಂಡನ್​ನಲ್ಲಿ ಡೇಟಿಂಗ್ ಮಾಡಿದ್ದರು. ನಟಿಯ ಜೊತೆ ನಾಗ ಚೈತನ್ಯ (Naga Chaitanya) ಹೋಟೆಲ್​ನಲ್ಲಿ ಇರೋ ಫೋಟೋ ವೈರಲ್ ಆಗಿತ್ತು. ಈ ಫೋಟೋದಿಂದ ಇವರಿಬ್ಬರ ಮಧ್ಯೆ ಏನೋ ನಡೆಯುತ್ತಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಸ್ಪಷ್ಟವಾಗಿತ್ತು. ಈ ಫೋಟೋ ವೈರಲ್ ಮಾಡಿದ ವ್ಯಕ್ತಿಗೆ ಜೋಡಿ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ವರದಿ ಆಗಿದೆ. ಸದ್ಯ ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಲಂಡನ್​ ಐಷಾರಾಮಿ ಹೋಟೆಲ್ ಒಂದರಲ್ಲಿ ಭಾರತ ಮೂಲದ ಸುರೇಂದರ್ ಮೋಹನ್ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದಾರೆ. ಈ ಹೋಟೆಲ್​ಗೆ ಅನೇಕ ಸೆಲೆಬ್ರಿಟಿಗಳು ಭೇಟಿ ನೀಡಿದ್ದರು. ಅನುಷ್ಕಾ ಶರ್ಮಾ, ಭೂಮಿ ಪಡ್ನೇಕರ್, ರಾಜ್​ಕುಮಾರ್ ರಾವ್​, ಅನುಷ್ಕಾ ಶರ್ಮಾ ಮೊದಲಾದವರು ಇದೇ ಹೋಟೆಲ್​ನಲ್ಲಿ ಊಟ ಸವಿದಿದ್ದರು. ಅವರ ಜೊತೆಗಿನ ಫೋಟೋಗಳನ್ನು ಸುರೇಂದರ್ ಸೋಶಿಯಲ್ ಮೀಡಿಯಾದಲ್ಲಿ  ಹಂಚಿಕೊಂಡಿದ್ದಾರೆ.

ನಾಗ ಚೈತನ್ಯ ಹಾಗೂ ಶೋಭಿತಾ ಅವರು ಸುರೇಂದರ್ ಮೋಹನ್ ಅವರು ಕೆಲಸ ಮಾಡುವ ಹೋಟೆಲ್​ಗೆ ಆಗಮಿಸಿದ್ದರು. ಈ ವೇಳೆ ನಾಗ ಚೈತನ್ಯ ಜೊತೆ ಸುಂದರ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಹಿಂಭಾಗದಲ್ಲಿ ಶೋಭಿತಾ ಕೂಡ ಕಾಣಿಸಿದ್ದರು. ‘ಇಷ್ಟು ದಿನ ಡೇಟಿಂಗ್ ವಿಚಾರವನ್ನು ಅಲ್ಲಗಳೆಯುತ್ತಲೇ ಬರುತ್ತಿದ್ದ ನಾಗ ಚೈತನ್ಯ ಅವರು ಈಗ ರೆಡ್​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದಿದ್ದಾರೆ’ ಎಂದು ಅಭಿಮಾನಿಗಳು ಮಾತನಾಡಿಕೊಂಡಿದ್ದರು.

ಇದನ್ನೂ ಓದಿ:  ಸಮಂತಾ ಮಾಜಿ ಪತಿ ನಾಗ ಚೈತನ್ಯ ಹೆಸರು ಎತ್ತಿದ್ದಕ್ಕೆ ಮಧ್ಯ ಬೆರಳು ತೋರಿಸಿ ಗರಂ ಆದ ಶೋಭಿತಾ?

ಫೋಟೋ ಹಾಕಿದ ಸ್ವಲ್ಪ ಸಮಯದ ನಂತರದಲ್ಲಿ ಅದನ್ನು ಸುರೇಂದರ್ ಡಿಲೀಟ್ ಮಾಡಿದ್ದರು. ನಾಗ ಚೈತನ್ಯ ಹಾಗೂ ಶೋಭಿತಾ ಖಡಕ್ ಆಗಿ ಹೇಳಿದ ನಂತರದಲ್ಲಿ ಅವರು ಫೋಟೋ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ನಟಿ ಜೊತೆ ಲಂಡನ್​ನಲ್ಲಿ ನಾಗ ಚೈತನ್ಯ ಕದ್ದುಮುಚ್ಚಿ ಡೇಟಿಂಗ್​; ಫೋಟೋ ಲೀಕ್ ಮಾಡಿದವರು ಯಾರು?

ಸಮಂತಾ ಹಾಗೂ ನಾಗ ಚೈತನ್ಯ 2021ರ ಅಕ್ಟೋಬರ್​​ನಲ್ಲಿ ವಿಚ್ಛೇದನ ಪಡೆದರು. ಇವರು ಬೇರೆ ಆಗಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿತು. ಇದಾದ ಕೆಲವೇ ತಿಂಗಳಲ್ಲಿ ನಾಗ ಚೈತನ್ಯ ಅವರು ಶೋಭಿತಾ ಜೊತೆ ಡೇಟಿಂಗ್ ಆರಂಭಿಸಿದ್ದಾರೆ ಎನ್ನಲಾಗಿದೆ. ಈ ಮೊದಲೇ ಈ ಬಗ್ಗೆ ವರದಿ ಆಗಿತ್ತಾದರೂ ಯಾವುದೇ ಫೋಟೋ ಸಾಕ್ಷಿ ಸಿಕ್ಕಿರಲಿಲ್ಲ. ಆದರೆ, ಈಗ ನಾಗ ಚೈತನ್ಯ ಸಿಕ್ಕಿ ಬಿದ್ದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ