Naga Chaitanya: ಸಾಲು ಸಾಲು ಸೋಲು; ಮುಂದಿನ ಸಿನಿಮಾ ಬಗ್ಗೆ ನಾಗ ಚೈತನ್ಯಗೆ ಕಾಡಿದೆ ಗೊಂದಲ

ನಾಗ ಚೈತನ್ಯ ಅವರು ‘ಥ್ಯಾಂಕ್​ ಯೂ’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಿನಿಮಾ ಫ್ಲಾಪ್ ಎನಿಸಿಕೊಂಡಿತು. ಇತ್ತೀಚೆಗೆ ರಿಲೀಸ್ ಆದ ‘ಕಸ್ಟಡಿ’ ಸಿನಿಮಾ ಕಥೆಯೂ ಅಷ್ಟೇ.

Naga Chaitanya: ಸಾಲು ಸಾಲು ಸೋಲು; ಮುಂದಿನ ಸಿನಿಮಾ ಬಗ್ಗೆ ನಾಗ ಚೈತನ್ಯಗೆ ಕಾಡಿದೆ ಗೊಂದಲ
ನಾಗ ಚೈತನ್ಯ
Follow us
ರಾಜೇಶ್ ದುಗ್ಗುಮನೆ
|

Updated on: Jun 14, 2023 | 7:41 AM

ನಾಗ ಚೈತನ್ಯ (Naga Chaitanya) ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರಿಗೆ ಇತ್ತೀಚೆಗೆ ಅದೃಷ್ಟ ಕೈ ಕೊಟ್ಟಿದೆ. ಹೀಗಾಗಿ, ಹೊಸ ಸಿನಿಮಾ ಒಪ್ಪಿಕೊಳ್ಳುವಲ್ಲಿ ಅವರು ಯೋಚಿಸಬೇಕಾದ ಅನಿವಾರ್ಯತೆ ಮೂಡಿದೆ. ಈಗ ನಾಗ ಚೈತನ್ಯ ಅವರು ಗೊಂದಲದಲ್ಲಿದ್ದಾರೆ ಎಂದು ವರದಿ ಆಗಿದೆ. ಮುಂದೆ ಗೆಲ್ಲಲೇ ಬೇಕಾದ ಅನಿವಾರ್ಯತೆ ಇರುವುದರಿಂದ ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರಂತೆ. ಈ ಬಗ್ಗೆ ವರದಿಗಳು ಹರಿದಾಡಿವೆ. ಈ ಬೆಳವಣಿಗೆ ನಾಗ ಚೈತನ್ಯ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ನಾಗ ಚೈತನ್ಯ ಅವರು ‘ಥ್ಯಾಂಕ್​ ಯೂ’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಿನಿಮಾ ಫ್ಲಾಪ್ ಎನಿಸಿಕೊಂಡಿತು. ಈ ಚಿತ್ರದಿಂದ ಅವರಿಗೆ ಹೀನಾಯ ಸೋಲಾಯಿತು. ಇತ್ತೀಚೆಗೆ ರಿಲೀಸ್ ಆದ ‘ಕಸ್ಟಡಿ’ ಸಿನಿಮಾ ಕಥೆಯೂ ಅಷ್ಟೇ. ಈ ಚಿತ್ರ ಕೂಡ ಸೋಲು ಕಂಡಿತು. ಈಗ ನಾಗ ಚೈತನ್ಯ ಅವರು ಮುಂದಿನ ಸಿನಿಮಾ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ಅವರು ಮತ್ತೊಮ್ಮೆ ಎಲ್ಲವನ್ನೂ ಪರಾಮರ್ಶಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಚಂದು ಮೊಂಡೇತಿ ಹಾಗೂ ರಾಹುಲ್ ಸಂಕ್ರಿತ್ಯಾನ್ ಜೊತೆ ನಾಗ ಚೈತನ್ಯ ಒಂದೊಂದು ಸಿನಿಮಾ ಮಾಡಬೇಕಿದೆ. ಚಂದು ಅವರು ಗುಜರಾತ್​​ನಲ್ಲಿ ನಡೆದ ನೈಜ ಘಟನೆ ಆಧರಿಸಿ ಸಿನಿಮಾ ಮಾಡುತ್ತಿದ್ದಾರೆ. ಗೀತಾ ಆರ್ಟ್ಸ್​ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರಕ್ಕೆ ನಾಗ ಚೈತನ್ಯ ಹಸಿರು ನಿಶಾನೆ ತೋರಿಸಿದ್ದಾರೆ. ಆದರೆ, ಸ್ಕ್ರಿಪ್ಟ್ ಸಿದ್ಧವಾಗಿಲ್ಲ.

ರಾಹುಲ್ ಈಗಾಗಲೇ ಸ್ಕ್ರಿಪ್ಟ್ ಸಿದ್ಧಪಡಿಸಿ ಇಟ್ಟಿದ್ದಾರೆ. ಆದರೆ, ನಾಗ ಚೈತನ್ಯ ಅವರು ಯಾಕೋ ಈ ಚಿತ್ರದ ಬಗ್ಗೆ ಅಷ್ಟಾಗಿ ಒಲವು ತೋರಿಸುತ್ತಿಲ್ಲ. ಈಗ ಎರಡು ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಸೋಲು ಕಂಡಿರುವುದರಿಂದ ನಾಗ ಚೈತನ್ಯ ಸಾಕಷ್ಟು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Naga Chaitanya: ಸೋತು ಸುಣ್ಣವಾಗಿದ್ದ ನಾಗ ಚೈತನ್ಯಗೂ ಬಂತು ಒಳ್ಳೆಯ ಟೈಮ್​; ಹುಡುಕಿಕೊಂಡು ಬಂದ್ರು ನಿರ್ಮಾಪಕರು

ಸಮಂತಾ ಜೊತೆ ವಿಚ್ಛೇದನ ಪಡೆದ ನಂತರದಲ್ಲಿ ನಾಗ ಚೈತನ್ಯ ಅವರನ್ನು ಸ್ಯಾಮ್ ಫ್ಯಾನ್ಸ್ ಟ್ರೋಲ್ ಮಾಡುತ್ತಿದ್ದಾರೆ. ಹೀಗಿರುವಾಗ ಬ್ಯಾಕ್ ಟು ಬ್ಯಾಕ್ ಸೋಲು ಕಂಡರೆ ಮತ್ತಷ್ಟು ಟ್ರೋಲ್ ಆಗಬೇಕಾಗುತ್ತದೆ ಎನ್ನುವ ಭಯವೂ ಅವರಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು