AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗ ಚೈತನ್ಯ, ಸಾಯಿ ಪಲ್ಲವಿ ಜೋಡಿಯ ‘ತಂಡೇಲ್’ ಸಿನಿಮಾ ಟ್ರೇಲರ್​ ರಿಲೀಸ್

ಲವ್ ಸ್ಟೋರಿ ಮತ್ತು ದೇಶಪ್ರೇಮದ ಕಥೆ ‘ತಂಡೇಲ್’ ಸಿನಿಮಾದಲ್ಲಿದೆ. ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಫೆ.7ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಈಗ ಟ್ರೇಲರ್​ ರಿಲೀಸ್ ಮಾಡಲಾಗಿದೆ. ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರ ಅಭಿಮಾನಿಗಳು ಈ ಸಿನಿಮಾಗಾಗಿ ಕಾದಿದ್ದಾರೆ.

ನಾಗ ಚೈತನ್ಯ, ಸಾಯಿ ಪಲ್ಲವಿ ಜೋಡಿಯ ‘ತಂಡೇಲ್’ ಸಿನಿಮಾ ಟ್ರೇಲರ್​ ರಿಲೀಸ್
Naga Chaitanya, Sai Pallavi
ಮದನ್​ ಕುಮಾರ್​
|

Updated on: Jan 28, 2025 | 10:03 PM

Share

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ‘ತಂಡೇಲ್’ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಈ ಚಿತ್ರದ ರಿಲೀಸ್ ದಿನಾಂಕ ಮುಂದೂಡಿಕೆ ಆಗಿತ್ತು. ಈಗ ಈ ಸಿನಿಮಾಗೆ ಬಿಡುಗಡೆ ಭಾಗ್ಯ ಕೂಡಿಬಂದಿದೆ. ಫೆಬ್ರವರಿ 7ರಂದು ಅದ್ದೂರಿಯಾಗಿ ‘ತಂಡೇಲ್’ ಸಿನಿಮಾ ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಜೋಡಿಯಾಗಿ ನಟಿಸಿದ್ದಾರೆ. ನಾಗ ಚೈತನ್ಯ ಅವರ ಗೆಟಪ್ ಡಿಫರೆಂಟ್ ಆಗಿದೆ. ಇಂದು (ಜನವರಿ 28) ‘ತಂಡೇಲ್’ ಟ್ರೇಲರ್​ ಬಿಡುಗಡೆ ಮಾಡಲಾಗಿದೆ.

ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಈ ಮೊದಲು ‘ಲವ್ ಸ್ಟೋರಿ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರಿಬ್ಬರು ‘ತಂಡೇಲ್’ ಸಿನಿಮಾದಲ್ಲಿ ಮತ್ತೊಮ್ಮೆ ಜೋಡಿಯಾಗಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಮೀನುಗಾರನ ಪಾತ್ರದಲ್ಲಿ ನಾಗ ಚೈತನ್ಯ ಅವರು ಕಾಣಿಸಿಕೊಂಡಿದ್ದಾರೆ. ಹಳ್ಳಿ ಹುಡುಗಿಯಾಗಿ ಡಿಗ್ಲಾಮ್ ಲುಕ್​ನಲ್ಲಿ ಸಾಯಿ ಪಲ್ಲವಿ ಅವರು ನಟಿಸಿದ್ದಾರೆ.

‘ತಂಡೇಲ್’ ಸಿನಿಮಾ ಟ್ರೇಲರ್​:

‘ತಂಡೇಲ್’ ಸಿನಿಮಾದಲ್ಲಿ ಪ್ರೇಮಕಥೆ ಮತ್ತು ದೇಶಪ್ರೇಮದ ಕಹಾನಿ ಇರಲಿದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗಿದೆ. ನಾಗ ಚೈತನ್ಯ ಅವರು ಭರ್ಜರಿ ಆ್ಯಕ್ಷನ್​ ಕೂಡ ಮಾಡಿದ್ದಾರೆ. ಮೀನು ಹಿಡಿಯಲು ಸಮುದ್ರಕ್ಕೆ ಇಳಿಯುವ ಕಥಾನಾಯಕ ಪ್ರಕೃತಿ ವಿಕೋಪದ ಕಾರಣದಿಂದ ಪಾಕಿಸ್ತಾನದ ಗಡಿ ತಲುಪುತ್ತಾನೆ. ಆತ ಯಾವಾಗ ಬರುತ್ತಾನೆ ಎಂಬುದನ್ನೇ ಕಾಯುತ್ತಾಳೆ ಪ್ರೇಯಸಿ. ಇಂಥ ಒಂದು ಎಮೋಷನಲ್ ಕಹಾನಿಯನ್ನು ಇಟ್ಟುಕೊಂಡು ‘ತಂಡೇಲ್’ ಸಿನಿಮಾ ಮಾಡಲಾಗಿದೆ.

ಇದನ್ನೂ ಓದಿ: ನಾಗ ಚೈತನ್ಯ, ಶೋಭಿತಾ ಬಗ್ಗೆ ಭವಿಷ್ಯ: ಕ್ಷಮೆ ಕೇಳಿದ ಸೆಲೆಬ್ರಿಟಿ ಜ್ಯೋತಿಷಿ

2023ರಲ್ಲಿ ನಾಗ ಚೈತನ್ಯ ನಟನೆಯ ‘ಕಸ್ಟಡಿ’ ಸಿನಿಮಾ ಬಿಡುಗಡೆ ಆಗಿತ್ತು. ನಿರೀಕ್ಷಿತ ಪ್ರಮಾಣದಲ್ಲಿ ಆ ಚಿತ್ರಕ್ಕೆ ಕಲೆಕ್ಷನ್​ ಆಗಲಿಲ್ಲ. ಹಾಗಾಗಿ ಅವರು ಈಗ ಒಂದು ಗೆಲುವಿಗಾಗಿ ಕಾಯುತ್ತಿದ್ದಾರೆ. ‘ತಂಡೇಲ್’ ಸಿನಿಮಾದ ಮೇಲೆ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರ ಉತ್ತಮ ಬಿಸ್ನೆಸ್ ಮಾಡಿದೆ. ಫೆಬ್ರವರಿ 7ರಂದು ಬಿಡುಗಡೆ ಆಗಲಿದ್ದು, ಟ್ರೇಲರ್​ ಅನಾವರಣ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ಚಂದು ಮೊಂಡೆಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ದೇವಿ ಶ್ರೀ ಪ್ರಸಾದ್ ಅವರು ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು