AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ನ ಬೆಂಬಲಿಸಿ ಪೋಸ್ಟ್ ಹಾಕಿದ್ದ ನಾಗಶೌರ್ಯಗೆ ಟ್ರೋಲ್ ಕಾಟ

ದರ್ಶನ್ ಮಾಡಿರೋ ಆರೋಪ ಸಾಬೀತಾದರೆ ಅವರಿಗೆ ಗರಿಷ್ಠ ಜೈಲು ಶಿಕ್ಷೆ ಇರಲಿ ಎಂದು ಕೆಲವರು ಆಗ್ರಹಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದರ್ಶನ್ ವಿರುದ್ಧ ಧ್ವನಿ ಎತ್ತಿದ್ದಾರೆ. ನಾಗ ಶೌರ್ಯ ಅವರು ದರ್ಶನ್ ಪರ ನಿಂತಿದ್ದಾರೆ. ಅವರನ್ನು ಅನೇಕರು ಟೀಕಿಸಿದ್ದಾರೆ. 

ದರ್ಶನ್​ನ ಬೆಂಬಲಿಸಿ ಪೋಸ್ಟ್ ಹಾಕಿದ್ದ ನಾಗಶೌರ್ಯಗೆ ಟ್ರೋಲ್ ಕಾಟ
ದರ್ಶನ್-ನಾಗ ಶೌರ್ಯ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 29, 2024 | 8:56 AM

Share

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಈ ಕಾರಣದಿಂದಲೇ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈ ಪ್ರಕರಣದಿಂದ ಹೊರಗೆ ಬರೋದು ಅವರಿಗೆ ಅಷ್ಟು ಸುಲಭವಿಲ್ಲ. ಅವರ ವಿರುದ್ಧ ಕೇಳಿ ಬಂದಿರೋದು ಗಂಭೀರ ಕೊಲೆ ಆರೋಪ. ಹೀಗಾಗಿ, ಆಪ್ತರು ಎನಿಸಿಕೊಂಡವರು ಸೈಲೆಂಟ್ ಆಗಿದ್ದಾರೆ. ದರ್ಶನ್ ಪರ ಪೋಸ್ಟ್ ಹಾಕಲು ಹಿಂದೇಟು ಹಾಕುತ್ತಿದ್ದಾರೆ. ಹೀಗಿರುವಾಗಲೇ ದರ್ಶನ್ ಅವರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದಾರೆ. ಇದರಿಂದ ಅವರು ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ. ತೆಲುಗು ಮಂದಿ ಕೂಡ ನಾಗ ಶೌರ್ಯ ಅವರನ್ನು ಟೀಕಿಸುತ್ತಿದ್ದಾರೆ.

ನಾಗ ಶೌರ್ಯ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಅನೇಕ ಬಾರಿ ಇವರು ಭೇಟಿ ಆಗಿದ್ದು ಇದೆ. ನಾಗ ಶೌರ್ಯ ಅವರು ಬೆಂಗಳೂರಿಗೆ ಬಂದಾಗ ದರ್ಶನ್​ನ ಅವರು ಭೇಟಿ ಮಾಡಿದ್ದು ಇದೆ. ಈ ಬಾಡಿಂಗ್ ಕಾರಣದಿಂದಲೇ ನಾಗ ಶೌರ್ಯ ಅವರು ಪೋಸ್ಟ್ ಒಂದನ್ನು ಮಾಡಿದ್ದರು. ಇದರಲ್ಲಿ ಅವರು ದರ್ಶನ್​ನ ಬೆಂಬಲಿಸಿದ್ದರು. ‘ದರ್ಶನ್ ಕನಸಿನಲ್ಲೂ ಯಾರಿಗೂ ಕೆಟ್ಟದನ್ನು ಬಯಸುವವರಲ್ಲ’ ಎಂದು ಪೋಸ್ಟ್ ಮಾಡಿದ್ದರು. ಜೊತೆಗೆ ದರ್ಶನ್ ಮಾಡಿದ ಒಳ್ಳೆಯ ಕೆಲಸಗಳನ್ನು ಬೆಂಬಲಿಸಿದ್ದರು. ಈಗಲೇ ನಿರ್ಧಾರಕ್ಕೆ ಬರೋದು ಸರಿ ಅಲ್ಲ ಎಂದು ಕೂಡ ಹೇಳಿದ್ದರು.

ದರ್ಶನ್ ಪ್ರಕರಣ ಇನ್ನೂ ತನಿಖೆಯಲ್ಲಿದೆ. ಅವರು ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಹೊತ್ತಿದ್ದಾರೆ. ಈ ಕಾರಣದಿಂದಲೇ ದರ್ಶನ್ ಆಪ್ತಾರದ ಸುಮಲತಾ ಅಂಬರೀಷ್, ರಾಕ್​ಲೈನ್ ವೆಂಕಟೇಶ್ ಸೇರಿ ಅನೇಕರು ಮೌನ ತಾಳಿದ್ದಾರೆ. ಆದರೆ, ನಾಗಶೌರ್ಯ ಅವರು ದರ್ಶನ್​ನ ಬೆಂಬಲಿಸಿ ಸುಖಾಸುಮ್ಮನೆ ಟೀಕೆಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

‘ನಾಗಶೌರ್ಯ ಅವರು ಈ ರೀತಿ ಹೇಳಿಕೆ ನೀಡಬಾರದು. ದರ್ಶನ್ ಗಂಭೀರ ಆರೋಪಗಳನ್ನು ಹೊತ್ತಿದ್ದಾರೆ. ಅವರ ವಿರುದ್ಧವೇ ಎಲ್ಲಾ ಸಾಕ್ಷ್ಯಗಳು ಇವೆ. ಹೀಗಾಗಿ, ನಾಗ ಶೌರ್ಯ ಈ ರೀತಿ ಹೇಳಿಕೆ ನೀಡಬಾರದಿತ್ತು’ ಎಂದು ಅವರ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ದರ್ಶನಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ’; ನಾಗ ಶೌರ್ಯ 

ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಇದರಿಂದ ಸಿಟ್ಟಾದ ದರ್ಶನ್ ಅವರು ತಾವೇ ಕಾನೂನು ಕ್ರಮ ಕೈಗೊಂಡಿದ್ದರು. ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದರು. ಈಗ ಈ ಪ್ರಕರಣದಲ್ಲಿ ಅವರು ಅರೆಸ್ಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!