AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಅಂತಿಮ ದರ್ಶನ ಪಡೆದು ತೆರಳಿದ್ದ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು; ಅಂಥದ್ದೇನಾಯ್ತು?

ಬೋಯಪತಿ ಶ್ರೀನು ಅವರ ಅಖಂಡ ಸಿನಿಮಾದ ಕೆಲಸಗಳಲ್ಲಿ ಬಾಲಕೃಷ್ಣ ಬ್ಯುಸಿ ಆಗಿದ್ದಾರೆ. ಇದರ ಜತೆಗೆ ಒಟಿಟಿ ಪ್ಲಾಟ್​ಫಾರ್ಮ್​ ‘ಆಹಾ’ದಲ್ಲಿ ಒಂದು ಶೋ ಕೂಡ ನಡೆಸಿಕೊಡುತ್ತಿದ್ದಾರೆ.

ಪುನೀತ್​ ಅಂತಿಮ ದರ್ಶನ ಪಡೆದು ತೆರಳಿದ್ದ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು; ಅಂಥದ್ದೇನಾಯ್ತು?
ನಂದಮುರಿ ಬಾಲಕೃಷ್ಣ
TV9 Web
| Edited By: |

Updated on:Nov 03, 2021 | 9:15 AM

Share

ನಟ ನಂದಮೂರಿ ಬಾಲಕೃಷ್ಣ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಖ್ಯಾತಿ ಪಡೆದುಕೊಂಡಿದ್ದಾರೆ. ಅವರ ಅಭಿಮಾನಿ ಬಳಗವೂ ತುಂಬಾನೇ ದೊಡ್ಡದಿದೆ. ಆದರೆ, ಈಗ ಅವರ ಅಭಿಮಾನಿಗಳು ಆತಂಕಗೊಳ್ಳುವ ಸುದ್ದಿ ಒಂದು ಹೊರ ಬಿದ್ದಿದೆ. ಬಾಲಯ್ಯ ಅವರು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಹಾಗಾದರೆ ಬಾಲಕೃಷ್ಣ ಅವರಿಗೆ ಆಗಿದ್ದೇನು? ಭುಜದ ನೋವು. ಕಳೆದ ಆರು ತಿಂಗಳಿಂದ ಬಾಲಯ್ಯ ಅವರಿಗೆ ಭುಜದ ನೋವು ಅತಿಯಾಗಿ ಕಾಡುತ್ತಿತ್ತು. ಈ ಕಾರಣಕ್ಕೆ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿತ್ತು. ಆದರೆ, ಆಪರೇಷನ್​ ಮಾಡಿಸಿಕೊಂಡರೆ ಅವರು ವಿಶ್ರಾಂತಿ ಪಡೆಯಬೇಕು. ಹೀಗೆ ಮಾಡಿದರೆ, ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಬೇಕಾಗುತ್ತದೆ. ಈ ಕಾರಣಕ್ಕೆ ಅವರು ಇದನ್ನು ಮುಂದೂಡುತ್ತಲೇ ಬರುತ್ತಿದ್ದರು.

ಇಂದು (ನವೆಂಬರ್​ 2) ಬಾಲಕೃಷ್ಣ ಅವರಿಗೆ ತೀವ್ರವಾಗಿ ಭುಜದ ನೋವು ಬಂದಿತ್ತು. ಇದರಿಂದ ಅವರು ಕೈ ಎತ್ತಲೂ ಆಗದ ಪರಿಸ್ಥಿತಿ ಬಂದೊದಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಾಲ್ಕು ಗಂಟೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಡಾ. ಬಿಎನ್​ ಪ್ರಸಾದ್​ ಅವರು ಇದರ ನೇತೃತ್ವ ವಹಿಸಿಕೊಂಡಿದ್ದರು. ಈ ಆಪರೇಷನ್​ ಯಶಸ್ವಿ ಆಗಿದೆ. ಬಾಲಕೃಷ್ಣ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಅವರು ಆರೋಗ್ಯಯುತವಾಗಿದ್ದಾರೆ. ಶೀಘ್ರದಲ್ಲೇ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ. ಅವರು ಕೆಲ ಕಾಲ ವಿಶ್ರಾಂತಿ ಪಡೆಯಬೇಕಿದೆ.

ಬೋಯಪತಿ ಶ್ರೀನು ಅವರ ಅಖಂಡ ಸಿನಿಮಾದ ಕೆಲಸಗಳಲ್ಲಿ ಬಾಲಕೃಷ್ಣ ಬ್ಯುಸಿ ಆಗಿದ್ದಾರೆ. ಇದರ ಜತೆಗೆ ಒಟಿಟಿ ಪ್ಲಾಟ್​ಫಾರ್ಮ್​ ‘ಆಹಾ’ದಲ್ಲಿ ಒಂದು ಶೋ ಕೂಡ ನಡೆಸಿಕೊಡುತ್ತಿದ್ದಾರೆ. ಇತ್ತೀಚೆಗೆ ಈ ಶೋನ ಮೊದಲ ಎಪಿಸೋಡ್​ ಪ್ರಸಾರವಾಗಿತ್ತು.

ಅಕ್ಟೋಬರ್​ 29ರಂದು ಪುನೀತ್​ ರಾಜ್​ಕುಮಾರ್​ ಅವರು ಏಕಾಏಕಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಪುನೀತ್​ ಅವರಿಗೆ ಕೊನೆಯ ನಮನ ಸಲ್ಲಿಸೋಕೆ ಬಾಲಕೃಷ್ಣ​ ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅವರು ತುಂಬಾನೇ ಭಾವುಕರಾಗಿದ್ದರು. ಶಿವರಾಜ್​ಕುಮಾರ್​ಗೆ ಸಮಾಧಾನ ಮಾಡಿದ್ದರು.

ಇದನ್ನೂ ಓದಿ: Puneeth Rajkumar: ಪುನೀತ್​​ ಸಮಾಧಿ ಬಳಿ ಕುಸಿದು ಬಿದ್ದ ಗನ್​ ಮ್ಯಾನ್​ ಪುತ್ರಿ; ಮರೆಯಲಾಗುತ್ತಿಲ್ಲ ಅಪ್ಪು ಅಗಲಿಕೆಯ ನೋವು

Published On - 7:27 pm, Tue, 2 November 21

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​