ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಂದಮೂರಿ ಬಾಲಕೃಷ್ಣ ಪುತ್ರಿ

ನಂದಮೂರಿ ಬಾಲಕೃಷ್ಣ ಅವರ ಪುತ್ರಿ ತೇಜಸ್ವಿನಿ ಅವರು ಇದೀಗ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಆದರೆ ನಾಯಕಿಯಾಗಿ ಅಲ್ಲ ಬದಲಿಗೆ ನಿರ್ಮಾಪಕಿ ಆಗಿ. ತೇಜಸ್ವಿನಿ ಅವರು ಇನ್​​ಸ್ಟಾಗ್ರಾಂನಲ್ಲಿ ಸಕ್ರಿಯರಾಗಿದ್ದು, ಡ್ಯಾನ್ಸ್ ವಿಡಿಯೋಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾರೆ. ಈ ಹಿಂದೆಯೇ ತೇಜಸ್ವಿನಿ ಅವರು ಸಿನಿಮಾ ರಂಗಕ್ಕೆ ಬರುತ್ತಾರೆ ಎಂಬ ಸುದ್ದಿ ಹಬ್ಬಿತ್ತು.

ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಂದಮೂರಿ ಬಾಲಕೃಷ್ಣ ಪುತ್ರಿ
Balayya

Updated on: Nov 13, 2026 | 5:27 PM

ತೆಲುಗು ರಾಜ್ಯಗಳ ಸಿನಿಮಾ ಮತ್ತು ರಾಜಕೀಯದಲ್ಲಿ ನಂದಮೂರಿ ಕುಟುಂಬದ ಪ್ರಭಾವ ಬಲು ದೊಡ್ಡದು. ದಶಕಗಳಿಂದಲೂ ತೆಲುಗು ಸಿನಿಮಾ ಮತ್ತು ರಾಜಕೀಯದಲ್ಲಿ ಈ ಕುಟುಂಬದ ಸದಸ್ಯರು ಸಕ್ರಿಯರಾಗಿದ್ದಾರೆ. ಈ ಕುಟುಂಬದ ಮೂರನೇ ಜನರೇಷನ್ ಇದೀಗ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ನಾಲ್ಕನೇ ಜನರೇಷನ್ ಸಹ ಕೆಲವೇ ವರ್ಷಗಳಲ್ಲಿ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ. ಪ್ರಸ್ತುತ ಈ ಕುಟುಂಬ ಮತ್ತೊಬ್ಬ ಸದಸ್ಯರು ಚಿತ್ರರಂಗಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಮತ್ತು ಶಾಸಕರೂ ಆಗಿರುವ ನಂದಮೂರಿ ಬಾಲಕೃಷ್ಣ ಅವರ ಪುತ್ರಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ನಂದಮೂರಿ ಬಾಲಕೃಷ್ಣ ಅವರ ಪುತ್ರಿ ತೇಜಸ್ವಿನಿ ಅವರು ಇದೀಗ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಆದರೆ ನಾಯಕಿಯಾಗಿ ಅಲ್ಲ ಬದಲಿಗೆ ನಿರ್ಮಾಪಕಿ ಆಗಿ. ತೇಜಸ್ವಿನಿ ಅವರು ಇನ್​​ಸ್ಟಾಗ್ರಾಂನಲ್ಲಿ ಸಕ್ರಿಯರಾಗಿದ್ದು, ಡ್ಯಾನ್ಸ್ ವಿಡಿಯೋಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾರೆ. ಈ ಹಿಂದೆಯೇ ತೇಜಸ್ವಿನಿ ಅವರು ಸಿನಿಮಾ ರಂಗಕ್ಕೆ ಬರುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಅದು ಆಗಿರಲಿಲ್ಲ. ಇದೀಗ ತೇಜಸ್ವಿನಿ ನಿರ್ಮಾಪಕಿಯಾಗಿ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

Loading...

ಇದನ್ನೂ ಓದಿ:‘ರಾಮಾಯಣ’ ಸಿನಿಮಾ ಶೂಟಿಂಗ್ ಸಮಯದಲ್ಲಿ ಕಣ್ಣೀರು ಹಾಕಿದ್ದ ಸಾಯಿ ಪಲ್ಲವಿ

ಸಿನಿಮಾಗಳ ಬಗ್ಗೆ ಆಸಕ್ತಿ ಹೊಂದಿರುವ ತೇಜಸ್ವಿನಿ, ವಿಭಿನ್ನ ಕಥೆಯೊಂದಿಗೆ ಸಿನಿಮಾ ನಿರ್ಮಿಸಲು ಯೋಜನೆ ರೂಪಿಸುತ್ತಿದ್ದಾರೆ. ತಮ್ಮ ಸಹಪಾಠಿ ಭುವನ್ ನಿರ್ದೇಶನ ಮಾಡಲಿರುವ ಸಿನಿಮಾ ಒಂದನ್ನು ತೇಜಸ್ವಿನಿ ಅವರು ನಿರ್ಮಾಣ ಮಾಡಲಿದ್ದಾರೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಈಗಾಗಲೇ ಆರಂಭ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ತೇಜಸ್ವಿನಿ ನಿರ್ಮಾಣ ಮಾಡಲಿರುವ ಸಿನಿಮಾನಲ್ಲಿ ಅನ್ವೇಷ್ ನಾಯಕರಾಗಿ ನಟನೆ ಮಾಡಲಿದ್ದಾರೆ. ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ಸಿಂಧೂರಪುವು ಕೃಷ್ಣಾರೆಡ್ಡಿ ಅವರ ಪುತ್ರ ಅನ್ವೇಷ್ ಈ ಸಿನಿಮಾ ಮೂಲಕ ನಾಯಕ ನಟನಾಗಿ ಎಂಟ್ರಿ ಕೊಡಲಿದ್ದಾರೆ. ಇದೇ ಸಿನಿಮಾನಲ್ಲಿ ಪ್ರತಿಭಾವಂತ ನಟ ಬಾಬಿ ಸಿಂಹ ಸಹ ನಟಿಸಲಿದ್ದಾರೆ. ನವೆಂಬರ್ 23 ರಂದು ವಿಶಾಖಪಟ್ಟಣದ ಗೀತಮ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ನಂದಮೂರಿ ಬಾಲಕೃಷ್ಣ ಅವರ ಪುತ್ರ ಮೋಕ್ಷಾಜ್ಞ ಅವರ ಹೊಸ ಸಿನಿಮಾ ಘೋಷಣೆಯಾಗಿ ವರ್ಷಕ್ಕೂ ಹೆಚ್ಚು ಸಮಯ ಆಗಿದೆ. ಆದರೆ ಆ ಸಿನಿಮಾ ಸೆಟ್ಟೇರಿಲ್ಲ. ಇದೀಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ, ಬಾಲಕೃಷ್ಣ ಅವರೇ ಕತೆ ಬರೆದು ಮಗನಿಗಾಗಿ ಸಿನಿಮಾ ನಿರ್ದೇಶನವನ್ನೂ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us