AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಮೂರಿ ಬಾಲಕೃಷ್ಣಗೆ ಇಲ್ಲ ಸಚಿವ ಸ್ಥಾನ, ಅಭಿಮಾನಿಗಳ ಬೇಸರ

ಟಿಡಿಪಿ ಪಕ್ಷದ ಹಿರಿಯ ಮುಖಂಡ, ದಶಕಗಳಿಂದಲೂ ಟಿಡಿಪಿ ಪರವಾಗಿ ಚುನಾವಣೆ ಪ್ರಚಾರ ಮಾಡುತ್ತಿರುವ, ಮೂರು ಬಾರಿ ಶಾಸಕರಾಗಿ ಗೆದ್ದಿರುವ ನಂದಮೂರಿ ಬಾಲಕೃಷ್ಣಗೆ ಸಚಿವ ಸ್ಥಾನ ನೀಡದೇ ಇರುವ ಬಗ್ಗೆ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. ಚಂದ್ರಬಾಬು ನಾಯ್ಡು ಪುತ್ರನಿಗೆ ಸಚಿವ ಸ್ಥಾನ ನೀಡಲಾಗಿದೆ.

ನಂದಮೂರಿ ಬಾಲಕೃಷ್ಣಗೆ ಇಲ್ಲ ಸಚಿವ ಸ್ಥಾನ, ಅಭಿಮಾನಿಗಳ ಬೇಸರ
ಬಾಲಕೃಷ್ಣ
ಮಂಜುನಾಥ ಸಿ.
|

Updated on:Jun 13, 2024 | 5:35 PM

Share

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ (Andhra Pradesh Assembly Election) ಟಿಡಿಪಿ, ಜನಸೇನಾ ಹಾಗೂ ಬಿಜೆಪಿಯ ಮೈತ್ರಿ ಭಾರಿ ವಿಜಯ ಸಾಧಿಸಿದ್ದು, ಚಂದ್ರಬಾಬು ನಾಯ್ಡು ನಿನ್ನೆಯಷ್ಟೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೊತೆಗೆ ಇನ್ನೂ 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಆಶ್ಚರ್ಯವೆಂಬಂತೆ ಟಿಡಿಪಿ ಪಕ್ಷದ ಪ್ರಮುಖ ನಾಯಕ ಬಾಲಕೃಷ್ಣಗೆ ಸಚಿವ ಸ್ಥಾನ ನೀಡಲಾಗಿಲ್ಲ. ಈಗಾಗಲೇ ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಬಾಲಕೃಷ್ಣಗೆ ಮತ್ತೊಮ್ಮೆ ಸಚಿವ ಸ್ಥಾನ ಕೈತಪ್ಪಿದೆ. ಇದು ಬಾಲಕೃಷ್ಣ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಚಂದ್ರಬಾಬು ನಾಯ್ಡು ಸೇರಿದಂತೆ ಒಟ್ಟು 25 ಮಂದಿ ನಿನ್ನೆಯ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಅದರಲ್ಲಿ 14 ಮಂದಿ ಹೊಸಬರಿದ್ದಾರೆ. ಈ ಬಾರಿ ನಂದಮೂರಿ ಬಾಲಕೃಷ್ಣಗೆ ಸಚಿವ ಸ್ಥಾನ ಸಿಗಲಿದೆ ಎನ್ನಲಾಗಿತ್ತು. ಆದರೆ ನಿರೀಕ್ಷೆ ಸುಳ್ಳಾಗಿದ್ದು, ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್​ಗೆ ಸಚಿವ ಸ್ಥಾನ ನೀಡಲಾಗಿದೆ. ಆದರೆ ದಶಕಗಳಿಂದಲೂ ಪಕ್ಷದಲ್ಲಿರುವ ಪಕ್ಷದ ಏಳಿಗೆಗೆ ಕೊಡುಗೆ ನೀಡಿರುವ, ಮೂರು ಬಾರಿ ಶಾಸಕನಾಗಿ ಆಯ್ಕೆ ಆಗಿರುವ ಬಾಲಕೃಷ್ಣಗೆ ಸಚಿವ ಸ್ಥಾನ ನಿರಾಕರಿಸಲಾಗಿದೆ.

ಇದನ್ನೂ ಓದಿ:ತೆಲುಗು ಯುವನಟನಿಗೆ ದುರಹಂಕಾರ ಎನ್ನುತ್ತಿರುವ ನಂದಮೂರಿ ಬಾಲಕೃಷ್ಣ ಅಭಿಮಾನಿಗಳು

1982 ರಲ್ಲಿ ಟಿಡಿಪಿ ಪಕ್ಷ ಸ್ಥಾಪನೆ ಆದಾಗಿನಿಂದಲೂ ನಂದಮೂರಿ ಬಾಲಕೃಷ್ಣ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಾ ಬಂದಿದ್ದಾರೆ. ತಂದೆ ಎನ್​ಟಿಆರ್ ಆ ಬಳಿಕ ಚಂದ್ರಬಾಬು ನಾಯ್ಡು ಪರವಾಗಿ ಪ್ರತಿ ಚುನಾವಣೆಯಲ್ಲಿಯೂ ಪ್ರಚಾರ ಮಾಡಿದ್ದಾರೆ. ಕೊನೆಗೆ 2014 ರಲ್ಲಿ ಮೊದಲ ಬಾರಿಗೆ ಹಿಂದುಪುರ ಕ್ಷೇತ್ರದಿಂದ ಚುನಾವಣೆ ಎದುರಿಸಿ ಗೆದ್ದರು. ಆ ಬಾರಿ ಚಂದ್ರಬಾಬು ನಾಯ್ಡು ಸಿಎಂ ಆದರು. ಆದರೆ ಮೊದಲ ಬಾರಿಗೆ ಗೆದ್ದಿದ್ದ ಬಾಲಕೃಷ್ಣಗೆ ಮಂತ್ರಿಗಿರಿ ಕೊಡಲಿಲ್ಲ. ಅದಾದ ಬಳಿಕ 2019ರಲ್ಲಿ ಮತ್ತೆ ಗೆದ್ದರು ಆದರೆ ಟಿಡಿಪಿ ಪಕ್ಷ ಹೀನಾಯ ಸೋಲು ಕಂಡಿತು. ಅದಾದ ಬಳಿಕ ಈಗ 2024 ರಲ್ಲಿ ಗೆದ್ದಿದ್ದಾರೆ, ತಮ್ಮ ಟಿಡಿಪಿ ಪಕ್ಷಕ್ಕೆ ಭಾರಿ ಗೆಲುವು ದೊರೆತಿದೆ. ಆದರೆ ಈ ಬಾರಿಯೂ ಸಹ ಬಾಲಕೃಷ್ಣ ಅವರ ಮಂತ್ರಿ ಆಗುವ ಕನಸು ಈಡೇರಿಲ್ಲ.

ಮೊದಲ ಬಾರಿ ಗೆದ್ದಿರುವ ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್​ಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಪವನ್ ಕಲ್ಯಾಣ್​ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಭರವಸೆ ಸಿಕ್ಕಿದೆ, ಆದರೆ ಮೂರು ಬಾರಿ ಗೆದ್ದಿರುವ ಹಾಗೂ ಪಕ್ಷದ ಸಂಕಷ್ಟದ ಸಮಯಗಳಲ್ಲಿ ಚಂದ್ರಬಾಬು ನಾಯ್ಡುಗೆ ಜೊತೆ ನೀಡಿ ಪಕ್ಷ ಕಟ್ಟಿದ ಬಾಲಕೃಷ್ಣಗೆ ಸಚಿವ ಸ್ಥಾನ ನೀಡಿಲ್ಲ. ಇದು ಹಿಂದುಪುರದ ಟಿಡಿಪಿ ಕಾರ್ಯಕರ್ತರಿಗೆ ಹಾಗೂ ಬಾಲಕೃಷ್ಣ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ಗಳು ಹರಿದಾಡುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Thu, 13 June 24

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ