ವರ್ಷಾಂತ್ಯಕ್ಕೆ ‘ಅಖಂಡ 2’ ಅಬ್ಬರ: ಡಿಸೆಂಬರ್ 5ಕ್ಕೆ ಬಾಲಯ್ಯ ಸಿನಿಮಾ ರಿಲೀಸ್
ಬಾಲಯ್ಯ ನಟನೆಯ ‘ಅಖಂಡ 2’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಬ್ಬರಿಸಲಿದೆ. ದಸರಾ ಹಬ್ಬದ ಪ್ರಯುಕ್ತ ಪೊಸ್ಟರ್ ಬಿಡುಗಡೆ ಮಾಡಿ ರಿಲೀಸ್ ದಿನಾಂಕ ಘೋಷಿಸಲಾಗಿದೆ. ಈಗಾಗಲೇ ಟೀಸರ್ ಮೂಲಕ ಈ ಚಿತ್ರ ಸದ್ದು ಮಾಡಿದೆ. ಡಿಸೆಂಬರ್ 5ಕ್ಕೆ ‘ಅಖಂಡ 2’ ಸಿನಿಮಾ ತೆರೆಕಾಣಲಿದೆ.

ತೆಲುಗು ಚಿತ್ರರಂಗದ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅಭಿನಯದ ‘ಅಖಂಡ 2’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಬಹುನಿರೀಕ್ಷಿತ ಸಿನಿಮಾದ ಬಗ್ಗೆ ಅಭಿಮಾನಿಗಳ ವಯಲದಲ್ಲಿ ಹೈಪ್ ಸೃಷ್ಟಿ ಆಗಿದೆ. ಈ ಸಿನಿಮಾದಲ್ಲಿನ ಬಾಲಯ್ಯ (Balayya) ಅವರ ಲುಕ್ ಗಮನ ಸೆಳೆಯುತ್ತಿದೆ. ಕೆಲವು ತಿಂಗಳ ಹಿಂದೆ ‘ಅಖಂಡ 2’ ಸಿನಿಮಾದ ಟೀಸರ್ ಬಿಡುಗಡೆಯಾಗಿ ಸದ್ದು ಮಾಡಿತ್ತು. ಈಗ ಈ ಚಿತ್ರದ ರಿಲೀಸ್ ದಿನಾಂಕ ನಿಗದಿಯಾಗಿದೆ. ‘ಅಖಂಡ’ ಸಿನಿಮಾದ ಮುಂದುವರಿದ ಭಾಗವಾಗಿರುವ ‘ಅಖಂಡ 2’ (Akhanda 2) ಚಿತ್ರ ಇದೇ ವರ್ಷ ಡಿಸೆಂಬರ್ 5ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ.
ಇದು ಪ್ಯಾನ್ ಇಂಡಿಯಾ ಸಿನಿಮಾಗಳ ಕಾಲ. ‘ಅಖಂಡ 2’ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಬ್ಬರಿಸಲಿದೆ. ದಸರಾ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಶುಭ ಕೋರಲು ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಪೋಸ್ಟರ್ನಲ್ಲಿ ರಿಲೀಸ್ ದಿನಾಂಕದ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಡಿಸೆಂಬರ್ 5ರಂದು ಚಿತ್ರಮಂದಿರಗಳಲ್ಲಿ ‘ಅಖಂಡ 2’ ಅಬ್ಬರ ಶುರುವಾಗಲಿದೆ.
ಅಂದಹಾಗೆ, ನಿರ್ದೇಶಕ ಬೊಯಪಾಟಿ ಶ್ರೀನು ಮತ್ತು ನಟ ಬಾಲಕೃಷ್ಣ ಅವರ ಕಾಂಬಿನೇಷನ್‌ನ 4ನೇ ಸಿನಿಮಾ ಇದು. ಈ ಮೊದಲು ಬಿಡುಗಡೆ ಆಗಿದ್ದ ‘ಸಿಂಹ’, ‘ಲೆಜೆಂಡ್’ ಮತ್ತು 2021ರ ‘ಅಖಂಡ’ ಸಿನಿಮಾಗಳು ಭಾರಿ ಯಶಸ್ಸು ಗಳಿಸಿದ್ದವು. ಇದೀಗ ‘ಅಖಂಡ 2’ ಕೂಡ ಅದಕ್ಕಿಂತ ಹೆಚ್ಚು ಅಬ್ಬರಿಸಲಿದೆ ಎಂಬ ನಂಬಿಕೆ ಚಿತ್ರತಂಡಕ್ಕೆ ಇದೆ.
ಬೊಯಪಾಟಿ ಶ್ರೀನು ಅವರು ನಿರ್ದೇಶನ ಮಾಡುತ್ತಿರುವ ‘ಅಖಂಡ 2’ ಸಿನಿಮಾ ಪ್ರತಿಷ್ಠಿತ ‘14 ರೀಲ್ಸ್ ಪ್ಲಸ್’ ಬ್ಯಾನರ್ ಮೂಲಕ ನಿರ್ಮಾಣ ಆಗುತ್ತಿದೆದೆ. ರಾಮ್ ಅಚಂತ ಹಾಗೂ ಗೋಪಿಚಂದ್ ಅಚಂತ ಅವರು ನಿರ್ಮಾಣ ಮಾಡುತ್ತಿದ್ದಾರೆ. ಎಂ. ತೇಜಸ್ವಿನಿ ನಂದಮೂರಿ ಅವರು ಈ ಸಿನಿಮಾವನ್ನು ಪ್ರಸ್ತುತಪಡಿಸಿದ್ದಾರೆ. ಈ ಸಿನಿಮಾಗೆ ಎಸ್. ಥಮನ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ: ‘ಅಖಂಡ 2’ ಟೀಸರ್: ಊಹಿಸಿದ್ದಕ್ಕಿಂತಲೂ ಹೆಚ್ಚಾಯಿತು ಬಾಲಯ್ಯ ಮಾಸ್ ಅವತಾರ
ಪ್ರಸ್ತುತ ‘ಅಖಂಡ 2’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಸಿನಿಮಾದಲ್ಲಿ ಬಾಲಯ್ಯ ಅವರಿಗೆ ಜೋಡಿಯಾಗಿ ಸಂಯುಕ್ತಾ ಅವರು ನಟಿಸುತ್ತಿದ್ದಾರೆ. ಆದಿ ಪಿನಿಸೆಟ್ಟಿ ಅವರು ಈ ಸಿನಿಮಾಗೆ ಖಳನಾಯಕನಾಗಿದ್ದಾರೆ. ಸಿ. ರಾಮಪ್ರಸಾದ್ ಹಾಗೂ ಸಂತೋಷ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಎ.ಎಸ್. ಪ್ರಕಾಶ್ ಅವರ ಕಲಾ ನಿರ್ದೇಶನ, ತಮ್ಮಿರಾಜು ಅವರ ಸಂಕಲನ, ರಾಮ್-ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಈ ಸಿನಿಮಾಗಿದೆ. ದೊಡ್ಡ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




