Nandamuri Taraka Ratna: ನಟ ನಂದಮೂರಿ ತಾರಕ ರತ್ನ ತೀವ್ರ ಅಸ್ವಸ್ಥ; ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Nandamuri Taraka Ratna Health Update: ಆಸ್ಪತ್ರೆಗೆ ಕರೆತಂದಾಗ ನಂದಮೂರಿ ತಾರಕ ರತ್ನ​ ಅವರ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿತ್ತು. ಅವರಿಗೆ ಹಲವು ಬಗೆಯ ಪರೀಕ್ಷೆಗಳನ್ನು ಮಾಡಲಾಯಿತು.

Nandamuri Taraka Ratna: ನಟ ನಂದಮೂರಿ ತಾರಕ ರತ್ನ ತೀವ್ರ ಅಸ್ವಸ್ಥ; ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
ಜನವರಿ 27ರಂದು ಆಂಧ್ರಪ್ರದೇಶ ಕುಪ್ಪಂನಲ್ಲಿ ಟಿಡಿಪಿ ನಾಯಕ ನರಾ ಲೋಕೇಶ್ ನೇತೃತ್ವದಲ್ಲಿ ನಡೆಯುತ್ತಿದ್ದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ತೆಲುಗು ಚಿತ್ರ ನಟ ತಾರಕರತ್ನ ಇದ್ದಕ್ಕಿದ್ದಂತೆ ಕುಸಿದು ಬಿದ್ದಿ ಆಸ್ಪತ್ರೆಗೆ ಸೇರಿದ್ದರು. ಕಳೆದ 23 ದಿನಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ತಾರಕರತ್ನ ಬದುಕಿ ಬರಲಿಲ್ಲ
Follow us
ಮದನ್​ ಕುಮಾರ್​
|

Updated on:Jan 27, 2023 | 3:17 PM

ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕ ರತ್ನ (Nandamuri Taraka Ratna) ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಇಂದು (ಜ.27) ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಅವರಿಗೆ ಏಕಾಏಕಿ ಅನಾರೋಗ್ಯ ಉಂಟಾಗಿದೆ. ಪಾದಯಾತ್ರೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಕುಪ್ಪಂ ಬಳಿ ಇರುವ ಆಸ್ಪತ್ರೆಗೆ ದಾಖಲು (Nandamuri Taraka Ratna Hospitalized) ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ನಂದಮೂರಿ ತಾರಕ ರತ್ನ ಅವರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ನರಾ ಲೋಕೇಶ್​ (Nara Lokesh) ಅವರು ಕುಪ್ಪಂನಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಭಾಗಿಯಾದಾಗ ತಾರಕ ರತ್ನ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಆಸ್ಪತ್ರೆಗೆ ಕರೆತಂದಾಗ ತಾರಕ ರತ್ನ​ ಅವರ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿತ್ತು. ಅವರಿಗೆ ಹಲವು ಬಗೆಯ ಪರೀಕ್ಷೆಗಳನ್ನು ಮಾಡಲಾಯಿತು. ಬಳಿಕ ಕೊಂಚ ಸುಧಾರಣೆ ಕಂಡಿದೆ ಎಂದು ಹೇಳಲಾಗುತ್ತಿದೆ. ಆದರೆ ಅಧಿಕೃತವಾಗಿ ಹೆಲ್ತ್​ ಅಪ್​ಡೇಟ್​ ಇನ್ನಷ್ಟೇ ಸಿಗಬೇಕಿದೆ. ವಿಷಯ ತಿಳಿಯುತ್ತಿದ್ದಂತೆಯೇ ನಂದಮೂರಿ ಬಾಲಕೃಷ್ಣ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತಾರಕ ರತ್ನ ಆರೋಗ್ಯದ ಕುರಿತು ಅವರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

ಪಾದಯಾತ್ರೆಗೆ ಅಪಾರ ಸಂಖ್ಯೆಯ ಜನರು ಸೇರಿದ್ದರು. ಮೊದಲು ಲಕ್ಷ್ಮಿಪುರಂ ವರದರಾಜು ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ಅದರಲ್ಲಿ ತಾರಕ ರತ್ನ ಪಾಲ್ಗೊಂಡರು. ನಂತರ ಅವರು ಸಮೀಪದ ಮಸೀದಿಯೊಂದರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮಸೀದಿಯಿಂದ ಹೊರಬರುವಾಗ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಯಿತು ಎಂದು ವರದಿ ಆಗಿದೆ.

ತೆಲುಗಿನ ಅನೇಕ ಸಿನಿಮಾಗಳಲ್ಲಿ ನಂದಮೂರಿ ತಾರಕ ರತ್ನ ನಟಿಸಿದ್ದಾರೆ. ‘ಒಕಟೋ ನಂಬರ್​ ಕುರ್ರಾಡು’, ‘ಯುವ ರತ್ನ’, ‘ತಾರಕ್​’, ‘ಭದ್ರಾದಿ ರಾಮುಡು’, ‘ನಂದೀಶ್ವರಡು’ ಮುಂತಾದ ಸಿನಿಮಾಗಳಲ್ಲಿ ಬಣ್ಣ ಹಚ್ಚಿರುವ ಅವರು ಟಾಲಿವುಡ್​ನಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ವೈರಲ್​ ಆದ ವಿಡಿಯೋ ಕಂಡು ಅನೇಕರು ಆತಂಕ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:56 pm, Fri, 27 January 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್