ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕ ರತ್ನ (Nandamuri Taraka Ratna) ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಇಂದು (ಜ.27) ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಅವರಿಗೆ ಏಕಾಏಕಿ ಅನಾರೋಗ್ಯ ಉಂಟಾಗಿದೆ. ಪಾದಯಾತ್ರೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಕುಪ್ಪಂ ಬಳಿ ಇರುವ ಆಸ್ಪತ್ರೆಗೆ ದಾಖಲು (Nandamuri Taraka Ratna Hospitalized) ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ನಂದಮೂರಿ ತಾರಕ ರತ್ನ ಅವರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ನರಾ ಲೋಕೇಶ್ (Nara Lokesh) ಅವರು ಕುಪ್ಪಂನಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಭಾಗಿಯಾದಾಗ ತಾರಕ ರತ್ನ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆಸ್ಪತ್ರೆಗೆ ಕರೆತಂದಾಗ ತಾರಕ ರತ್ನ ಅವರ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿತ್ತು. ಅವರಿಗೆ ಹಲವು ಬಗೆಯ ಪರೀಕ್ಷೆಗಳನ್ನು ಮಾಡಲಾಯಿತು. ಬಳಿಕ ಕೊಂಚ ಸುಧಾರಣೆ ಕಂಡಿದೆ ಎಂದು ಹೇಳಲಾಗುತ್ತಿದೆ. ಆದರೆ ಅಧಿಕೃತವಾಗಿ ಹೆಲ್ತ್ ಅಪ್ಡೇಟ್ ಇನ್ನಷ್ಟೇ ಸಿಗಬೇಕಿದೆ. ವಿಷಯ ತಿಳಿಯುತ್ತಿದ್ದಂತೆಯೇ ನಂದಮೂರಿ ಬಾಲಕೃಷ್ಣ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತಾರಕ ರತ್ನ ಆರೋಗ್ಯದ ಕುರಿತು ಅವರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.
Reyy Enni Bad Newslu Raa Eeroju
తారక రత్నకు కార్డియాక్ అరెస్ట్… కుప్పంలోని ఓ ప్రైవేట్ ఆస్పత్రిలో కొనసాగుతున్న అత్యవసర చికిత్స..
Get Well Soon #Tarakaratnapic.twitter.com/xP0Jrxnq4V
— Vishnu Bekaar (@TheVishnuBekaar) January 27, 2023
ಪಾದಯಾತ್ರೆಗೆ ಅಪಾರ ಸಂಖ್ಯೆಯ ಜನರು ಸೇರಿದ್ದರು. ಮೊದಲು ಲಕ್ಷ್ಮಿಪುರಂ ವರದರಾಜು ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ಅದರಲ್ಲಿ ತಾರಕ ರತ್ನ ಪಾಲ್ಗೊಂಡರು. ನಂತರ ಅವರು ಸಮೀಪದ ಮಸೀದಿಯೊಂದರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮಸೀದಿಯಿಂದ ಹೊರಬರುವಾಗ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಯಿತು ಎಂದು ವರದಿ ಆಗಿದೆ.
ತೆಲುಗಿನ ಅನೇಕ ಸಿನಿಮಾಗಳಲ್ಲಿ ನಂದಮೂರಿ ತಾರಕ ರತ್ನ ನಟಿಸಿದ್ದಾರೆ. ‘ಒಕಟೋ ನಂಬರ್ ಕುರ್ರಾಡು’, ‘ಯುವ ರತ್ನ’, ‘ತಾರಕ್’, ‘ಭದ್ರಾದಿ ರಾಮುಡು’, ‘ನಂದೀಶ್ವರಡು’ ಮುಂತಾದ ಸಿನಿಮಾಗಳಲ್ಲಿ ಬಣ್ಣ ಹಚ್ಚಿರುವ ಅವರು ಟಾಲಿವುಡ್ನಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ವೈರಲ್ ಆದ ವಿಡಿಯೋ ಕಂಡು ಅನೇಕರು ಆತಂಕ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:56 pm, Fri, 27 January 23