Dasara Movie: ‘ದಸರಾ’ ಟ್ರೇಲರ್​ನಲ್ಲಿ ರಕ್ತಸಿಕ್ತ ಕಹಾನಿಯ ಝಲಕ್​; ಮಾಸ್​ ಆಗಿ ಅಬ್ಬರಿಸಿದ ನಾನಿ

Nani | Dasara Movie Trailer: ‘ದಸರಾ’ ಟ್ರೇಲರ್​ಗೆ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ಮಾರ್ಚ್​ 30ರಂದು ಈ ಸಿನಿಮಾ ತೆರೆಕಾಣಲಿದೆ. ನಾನಿ ಅಭಿಮಾನಿಗಳು ಈ ಚಿತ್ರದ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Dasara Movie: ‘ದಸರಾ’ ಟ್ರೇಲರ್​ನಲ್ಲಿ ರಕ್ತಸಿಕ್ತ ಕಹಾನಿಯ ಝಲಕ್​; ಮಾಸ್​ ಆಗಿ ಅಬ್ಬರಿಸಿದ ನಾನಿ
ನಾನಿ

Updated on: Mar 14, 2023 | 7:54 PM

ಟಾಲಿವುಡ್​ ನಟ ನಾನಿ (Nani) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಸರಾ’ ಬಿಡುಗಡೆಗೆ ಸಿದ್ಧವಾಗಿದೆ. ಇಂದು (ಮಾರ್ಚ್​ 14) ಈ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದೆ. ಈಗಾಗಲೇ ಟೀಸರ್​ ಮೂಲಕ ಗಮನ ಸೆಳೆದಿದ್ದ ಈ ಚಿತ್ರವು ಟ್ರೇಲರ್​ ಮೂಲಕ ಸಖತ್​ ಹೈಪ್​ ಸೃಷ್ಟಿ ಮಾಡಿದೆ. ‘ದಸರಾ’ (Dasara Movie) ಚಿತ್ರವನ್ನು ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ಮೂಲಕ ಸುಧಾಕರ್ ಚೆರುಕುರಿ ನಿರ್ಮಾಣ ಮಾಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬಂದಿದೆ. ಶ್ರೀಕಾಂತ್ ಒಡೆಲಾ ನಿರ್ದೇಶನ ಮಾಡಿದ್ದು, ಖ್ಯಾತ ನಟಿ ಕೀರ್ತಿ ಸುರೇಶ್ (Keerthy Suresh) ಅವರು ನಾನಿಗೆ ಜೋಡಿಯಾಗಿ ತೆರೆ ಹಂಚಿಕೊಂಡಿದ್ದಾರೆ. ‘ದಸರಾ’ ಸಿನಿಮಾದ ಮಾಸ್​ ಟ್ರೇಲರ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಚಿತ್ರದಲ್ಲಿ ರಕ್ತಸಿಕ್ತವಾದ ಕಹಾನಿ ಇದೆ. ಟ್ರೇಲರ್​ನಲ್ಲಿ ಅದರ ಝಲಕ್​ ಕಾಣಿಸಿದೆ.

‘ದಸರಾ’ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಕನ್ನಡದ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಸತ್ಯನ್ ಸೂರ್ಯನ್ ಛಾಯಾಗ್ರಹಣ, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ ಮಾಡಿದ್ದಾರೆ. ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ: ರಾಜಮೌಳಿ ಮೆಚ್ಚಿದ ‘ದಸರಾ’ ಟೀಸರ್​; ನಾನಿ ರಗಡ್​ ಅವತಾರಕ್ಕೆ ಅಭಿಮಾನಿಗಳ ಚಪ್ಪಾಳೆ

ಇದನ್ನೂ ಓದಿ
Dasara Movie Teaser: ರಾಜಮೌಳಿ ಮೆಚ್ಚಿದ ‘ದಸರಾ’ ಟೀಸರ್​; ನಾನಿ ರಗಡ್​ ಅವತಾರಕ್ಕೆ ಅಭಿಮಾನಿಗಳ ಚಪ್ಪಾಳೆ
Dasara Movie Teaser: ‘ದಸರಾ’ ಟೀಸರ್​ ಝಲಕ್​ ತೋರಿಸ್ತಾರೆ ರಕ್ಷಿತ್​ ಶೆಟ್ಟಿ; ನಾನಿ ಚಿತ್ರಕ್ಕೆ ಸ್ಟಾರ್​ ನಟರ ಸಾಥ್​
‘ಕನ್ನಡಕ್ಕೆ ಡಬ್​ ಮಾಡಲ್ಲ, ಕನ್ನಡಿಗರು ತೆಲುಗಿನಲ್ಲೇ ನೋಡ್ತಾರೆ’; ಟಾಲಿವುಡ್​​ ನಟ ನಾನಿ ಹೇಳಿಕೆಗೆ ಕರುನಾಡು ಗರಂ
ಯಾವ ಚಿತ್ರವೂ ಗೆಲ್ಲುತ್ತಿಲ್ಲ, ಆದ್ರೂ ಈ ನಟಿಗೆ ಸಿಕ್ತಿದೆ ಒಳ್ಳೆಯ ಆಫರ್​; ಇಲ್ಲಿದೆ ಕೀರ್ತಿ ಸುರೇಶ್​ ಸೀಕ್ರೇಟ್​

ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗು, ತಮಿಳು, ಕನ್ನಡ ಮುಂತಾದ ಭಾಷೆಯಲ್ಲಿ ‘ದಸರಾ’ ರಿಲೀಸ್​ ಆಗಲಿದೆ. ಎಲ್ಲ ಭಾಷೆಯಲ್ಲಿಯೂ ಟ್ರೇಲರ್​ಗೆ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ಮಾರ್ಚ್​ 30ರಂದು ಅದ್ದೂರಿಯಾಗಿ ಈ ಸಿನಿಮಾ ತೆರೆಕಾಣಲಿದೆ. ನಾನಿ ಅಭಿಮಾನಿಗಳು ಈ ಚಿತ್ರದ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ‘ದಸರಾ’ ಟೀಸರ್​ ಝಲಕ್​ ತೋರಿಸ್ತಾರೆ ರಕ್ಷಿತ್​ ಶೆಟ್ಟಿ; ನಾನಿ ಚಿತ್ರಕ್ಕೆ ಸ್ಟಾರ್​ ನಟರ ಸಾಥ್​

‘ದಸರಾ’ ಚಿತ್ರದಲ್ಲಿ ನಾನಿ ಅವರ ಗೆಟಪ್​ ಗಮನ ಸೆಳೆಯುತ್ತಿದೆ. ರಫ್​ ಆ್ಯಂಡ್​ ಟಫ್​ ಪಾತ್ರದಲ್ಲಿ ಕಮಾಲ್​ ಮಾಡಲು ಅವರು ಬರುತ್ತಿದ್ದಾರೆ. ಧರಣಿ ಎಂಬ ಆ ಪಾತ್ರ ಹೇಗಿರಲಿದೆ ಎಂಬುದು ಟ್ರೇಲರ್​ನಲ್ಲಿ ಈಗಾಗಲೇ ಗೊತ್ತಾಗಿದೆ. ಮೈ ನವಿರೇಳಿಸುವಂತಹ ಫೈಟಿಂಗ್​ ದೃಶ್ಯಗಳು ಈ ಸಿನಿಮಾದಲ್ಲಿವೆ. ಮಚ್ಚು, ಕೊಡಲಿ ಮುಂತಾದ ಆಯುಧಗಳು ಸದ್ದು ಮಾಡಲಿವೆ.

ತೆಲಂಗಾಣದಲ್ಲಿನ ಕಲ್ಲಿದ್ದಲು ಗಣಿಗೆ ಸಂಬಂಧಿಸಿದ ಕಥೆ ‘ದಸರಾ’ ಸಿನಿಮಾದಲ್ಲಿ ಇದೆ. ಕಲಿದ್ದಲು ಸಾಗಿಸುತ್ತಿರುವ ರೈಲಿನ ಮೇಲೆ ನಾನಿ ಹೊಡೆದಾಡುತ್ತಿರುವ ದೃಶ್ಯ ಈ ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಆ್ಯಕ್ಷನ್ ದೃಶ್ಯಗಳ ಝಲಕ್​ ನೋಡಿ ನಾನಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಇನ್ನು, ನಟಿ ಕೀರ್ತಿ ಸುರೇಶ್​ ಪಾತ್ರದ ಲುಕ್​ ಕೂಡ ಸಾಕಷ್ಟು ಕೌತುಕ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:54 pm, Tue, 14 March 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us