AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾಯ್ತು ‘ದಸರಾ’ ಜೋಡಿ; ನಾನಿ 33ನೇ ಚಿತ್ರದಲ್ಲಿ ಇರಲಿದೆ ಭರ್ಜರಿ ಆ್ಯಕ್ಷನ್

ನಾನಿ ನಟನೆಯ ‘ದಸರಾ’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇತ್ತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 117 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. 100 ಕೋಟಿ ರೂಪಾಯಿ ಕ್ಲಬ್ ಸೇರಿದ ನಾನಿ ನಟನೆಯ ಮೊದಲ ಸಿನಿಮಾ ಇದಾಗಿದೆ. ಈಗ ಈ ಕಾಂಬಿನೇಷನ್ ಮತ್ತೆ ಒಂದಾಗುತ್ತಿರುವುದರಿಂದ ಕುತೂಹಲ ಹೆಚ್ಚಿದೆ.

ಮತ್ತೆ ಒಂದಾಯ್ತು ‘ದಸರಾ’ ಜೋಡಿ; ನಾನಿ 33ನೇ ಚಿತ್ರದಲ್ಲಿ ಇರಲಿದೆ ಭರ್ಜರಿ ಆ್ಯಕ್ಷನ್
ನಾನಿ
ರಾಜೇಶ್ ದುಗ್ಗುಮನೆ
|

Updated on: Apr 02, 2024 | 8:32 AM

Share

ನಾನಿ (Nani) ನಟನೆಯ ‘ದಸರಾ’ ಸಿನಿಮಾ ರಿಲೀಸ್ ಆಗಿ ಒಂದು ವರ್ಷ ಕಳೆದಿದೆ. ಈ ಚಿತ್ರಕ್ಕೆ ಶ್ರೀಕಾಂತ್ ಒಡೆಲಾ ನಿರ್ದೇಶನ ಮಾಡಿದ್ದರು. ಸುಧಾಕರ್ ಚೆರುಕುರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಈ ತಂಡ ಹೊಸ ಸಿನಿಮಾಗಾಗಿ ಮತ್ತೆ ಒಂದಾಗಿದೆ. ಇದು ನಾನಿ ಅಭಿನಯದ 33ನೇ ಸಿನಿಮಾ ಇದಾಗಿದೆ. ಈ ಹೊಸ ಪ್ರಾಜೆಕ್ಟ್ ಫಸ್ಟ್ ಲುಕ್ ರಿವೀಲ್ ಆಗಿದೆ. ಸಖತ್ ರಗಡ್ ಲುಕ್​ನಲ್ಲಿ ನಾನಿ ಆಗಮಿಸಿದ್ದಾರೆ.

ನಾನಿ ನಟನೆಯ ‘ದಸರಾ’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇತ್ತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 117 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. 100 ಕೋಟಿ ರೂಪಾಯಿ ಕ್ಲಬ್ ಸೇರಿದ ನಾನಿ ನಟನೆಯ ಮೊದಲ ಸಿನಿಮಾ ಇದಾಗಿದೆ. ಈಗ ಈ ಕಾಂಬಿನೇಷನ್ ಮತ್ತೆ ಒಂದಾಗುತ್ತಿರುವುದರಿಂದ ಕುತೂಹಲ ಹೆಚ್ಚಿದೆ.

ಬಾಯಲ್ಲಿ ಸಿಗರೇಟ್ ಹಿಡಿದು ನಾನಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಸಖತ್ ರಗಡ್ ಆಗಿದೆ. ಕೆಂಪು ಬಣ್ಣದ ಪೋಸ್ಟರ್​ನಲ್ಲಿ ಸಾಕಷ್ಟು ಸಂಖ್ಯೆಯ ಜನರನ್ನು ಕೂಡ ತೋರಿಸಲಾಗಿದೆ. ಪೋಸ್ಟರ್​ ಮೇಲೆ ಹಲವು ವಿಚಾರಗಳನ್ನು ಬರೆಯಲಾಗಿದೆ. ಮತ್ತೊಂದು ಪವರ್ ಪ್ಯಾಕ್ಡ್ ಆಕ್ಷನ್ ಚಿತ್ರದೊಂದಿಗೆ ನಾನಿ ಪರಿಚಯ ಎಂದು ಶ್ರೀಕಾಂತ್ ತಮ್ಮ ಹೊಸ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ.

ಸುಧಾಕರ್ ಚೆರುಕುರಿ ನಾನಿ 33ನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದಲ್ಲಿ ನಾನಿ ಹಿಂದೆಂದೂ ಕಾಣದ ಅವತಾರದಲ್ಲಿ ಎಂಟ್ರಿ ಕೊಡಲಿದ್ದಾರೆ. ಶೀಘ್ರವೇ ಸಿನಿಮಾ ಶೂಟಿಂಗ್ ಆರಂಭ ಆಗಲಿದ್ದು, 2025ಕ್ಕೆ ಸಿನಿಮಾ ತೆರೆಗೆ ಬರಲಿದೆ.

ಇದನ್ನೂ ಓದಿ: ನಿರ್ಮಾಪಕ ಜಾಕಿ ಬಗ್ನಾನಿ ಜೊತೆ ರಕುಲ್ ಪ್ರೀತ್ ಸಿಂಗ್ ವಿವಾಹ: ಇಲ್ಲಿವೆ ಚಿತ್ರಗಳು

ನಾನಿ ನಟನೆಯ ‘ಹಾಯ್ ನಾನ್ನ’ ಸಿನಿಮಾ ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರವನ್ನು ಜನರು ಮೆಚ್ಚಿಕೊಂಡಿದ್ದಾರೆ. ಮೃಣಾಲ್ ಠಾಕೂರ್ ಅವರು ಈ ಸಿನಿಮಾದಲ್ಲಿ ನಾಯಕಿ ಆಗಿ ಮಿಂಚಿದ್ದರು. ತಂದೆ-ಮಗಳ ಭಾವನಾತ್ಮಕ ಕಥೆಯನ್ನು ಈ ಸಿನಿಮಾ ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ