AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pavitra Lokesh Marriage: ಪವಿತ್ರಾ ಲೋಕೇಶ್​ ತುಟಿಗೆ ಮುತ್ತಿಟ್ಟು ಮದುವೆ ನ್ಯೂಸ್​ ತಿಳಿಸಿದ ನರೇಶ್​; ವಿಡಿಯೋ ವೈರಲ್​

Naresh Pavitra Lokesh Viral Video: ‘ಹೊಸ ವರ್ಷ, ಹೊಸ ಆರಂಭ. ನಿಮ್ಮೆಲ್ಲರ ಹಾರೈಕೆ ಬೇಕು’ ಎಂದು ನರೇಶ್​ ಮತ್ತು ಪವಿತ್ರಾ ಲೋಕೇಶ್​ ಪೋಸ್ಟ್​ ಮಾಡಿದ್ದಾರೆ. ಅವರಿಬ್ಬರಿಗೆ ಸ್ನೇಹಿತರು ಮತ್ತು ಹಿತೈಷಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

Pavitra Lokesh Marriage: ಪವಿತ್ರಾ ಲೋಕೇಶ್​ ತುಟಿಗೆ ಮುತ್ತಿಟ್ಟು ಮದುವೆ ನ್ಯೂಸ್​ ತಿಳಿಸಿದ ನರೇಶ್​; ವಿಡಿಯೋ ವೈರಲ್​
ನರೇಶ್, ಪವಿತ್ರಾ ಲೋಕೇಶ್
TV9 Web
| Edited By: |

Updated on: Dec 31, 2022 | 2:43 PM

Share

ನಟಿ ಪವಿತ್ರಾ ಲೋಕೇಶ್​ ಮತ್ತು ಟಾಲಿವುಡ್​ ನಟ ನರೇಶ್​ (Naresh) ಅವರ ನಡುವಿನ ಪ್ರೇಮ್​ ಕಹಾನಿಯಿಂದಾಗಿ ಭಾರಿ ವಿವಾದ ಸೃಷ್ಟಿ ಆಗಿತ್ತು. ನರೇಶ್​ ಅವರ ಪತ್ನಿ ರಮ್ಯಾ ಸಾಕಷ್ಟು ಆರೋಪ ಮಾಡಿದ್ದರು. ಅವರ ಸಂಸಾರದ ಗಲಾಟೆ ಬೀದಿಗೆ ಬಂದಿತ್ತು. ಅದಕ್ಕೆಲ್ಲ ಈಗ ಫುಲ್​ ಸ್ಟಾಪ್​ ಹಾಕಲು ನರೇಶ್​ ಮತ್ತು ಪವಿತ್ರಾ ಲೋಕೇಶ್​ (Pavitra Lokesh) ನಿರ್ಧರಿಸಿದ್ದಾರೆ. ಇಬ್ಬರೂ ಶೀಘ್ರದಲ್ಲೇ ಮದುವೆ (Naresh Pavitra Lokesh Marriage) ಆಗಲಿದ್ದಾರೆ. ಈ ಸುದ್ದಿಯನ್ನು ಅಧಿಕೃತವಾಗಿ ತಿಳಿಸುವ ಸಲುವಾಗಿ ನರೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಪವಿತ್ರಾ ಲೋಕೇಶ್​ ತುಟಿಗೆ ಮುತ್ತಿಟ್ಟಿದ್ದಾರೆ. ಅವರಿಬ್ಬರಿಗೆ ಸ್ನೇಹಿತರು ಮತ್ತು ಹಿತೈಷಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

‘ಹೊಸ ವರ್ಷ, ಹೊಸ ಆರಂಭ. ನಿಮ್ಮೆಲ್ಲರ ಹಾರೈಕೆ ಬೇಕು’ ಎಂದು ಕ್ಯಾಪ್ಷನ್​ ನೀಡುವ ಮೂಲಕ ನರೇಶ್​ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. 2023ರ ಹೊಸ ವರ್ಷವನ್ನು ನರೇಶ್​ ಮತ್ತು ಪವಿತ್ರಾ ಲೋಕೇಶ್​ ತುಂಬ ರೊಮ್ಯಾಂಟಿಕ್ ಆಗಿ ಸ್ವಾಗತಿಸುತ್ತಿದ್ದಾರೆ. ಕ್ಯಾಂಡಲ್​ ಹಚ್ಚಿ, ಕೇಕ್​ ಕತ್ತರಿಸಿ, ಪರಸ್ಪರ ಸಿಹಿ ತಿನಿಸಿ ನಂತರ ತುಟಿಗೆ ಚುಂಬಿಸುತ್ತಿರುವ ವಿಡಿಯೋವನ್ನು ಈ ಜೋಡಿ ಹಂಚಿಕೊಂಡಿದೆ. ಇದು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.

ಇದನ್ನೂ ಓದಿ: ಒಂದೇ ರೂಮ್​ನಲ್ಲಿ ನಟಿ ಪವಿತ್ರಾ ಲೋಕೇಶ್, ನಟ ನರೇಶ್: ರೂಂ ಮುಂದೆ ರಮ್ಯ ರಘುಪತಿ ಹೈಡ್ರಾಮಾ

ಯಾವುದೋ ಸಿನಿಮಾದ ಟೀಸರ್​ ಇರಬಹುದೇನೋ ಎಂಬ ರೀತಿಯಲ್ಲಿ ಈ ವಿಡಿಯೋ ಮೂಡಿಬಂದಿದೆ. ಆದ್ರೆ ಇದು ಸಿನಿಮಾ ಅಲ್ಲ, ರಿಯಲ್​. ‘ನಮ್ಮ ಪ್ರಪಂಚಕ್ಕೆ ಸ್ವಾಗತ. ಹೊಸ ವರ್ಷದ ಶುಭಾಶಯಗಳು. ಶೀಘ್ರದಲ್ಲೇ ಮದುವೆ ಆಗುತ್ತಿದ್ದೇವೆ’ ಎಂಬ ಸಾಲುಗಳು ಈ ವಿಡಿಯೋದಲ್ಲಿ ಇದೆ. ಇದನ್ನು ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: Pavitra Lokesh: ಮುಖಾಮುಖಿ ಬೈಯ್ದುಕೊಂಡ ರಮ್ಯಾ-ಪವಿತ್ರಾ ಲೋಕೇಶ್​; ಖುಷಿಯಿಂದ ಕೇಕೆ ಹಾಕಿದ ನರೇಶ್​

ಹಲವು ತಿಂಗಳುಗಳಿಂದ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಅವರು ಜೊತೆಯಾಗಿ ವಾಸಿಸುತ್ತಿದ್ದಾರೆ. ಅವರ ಸಂಬಂಧದ ವಿರುದ್ಧ ನರೇಶ್​ ಪತ್ನಿ ರಮ್ಯಾ ಆಕ್ಷೇಪ ವ್ಯಕ್ತಪಡಿಸಿದ್ದರೂ ಕೂಡ ಈ ಜೋಡಿ ತಲೆ ಕೆಡಿಸಿಕೊಂಡಿಲ್ಲ. ಆದರೆ ಮದುವೆ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿರಲಿಲ್ಲ. ಈ ವಿಡಿಯೋ ಹಂಚಿಕೊಳ್ಳುವ ಮೂಲಕ ನರೇಶ್​ ಅವರು ಎಲ್ಲ ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದಂತಾಗಿದೆ.

ಸಿನಿಮಾ ಕೆಲಸಗಳಲ್ಲೂ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಬ್ಯುಸಿ ಆಗಿದ್ದಾರೆ. ಪೋಷಕ ಪಾತ್ರಗಳ ಮೂಲಕ ಪವಿತ್ರಾ ಗಮನ ಸೆಳೆದಿದ್ದಾರೆ. ಬಹುಭಾಷೆಯಲ್ಲಿ ಅವರು ಜನಪ್ರಿಯತೆ ಪಡೆದಿದ್ದಾರೆ. ಈಗ ಅವರ ಬಾಳಿನಲ್ಲಿ ಹೊಸ ಅಧ್ಯಾಯದ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮದುವೆ ಡೇಟ್​ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ