AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಅಲ್ಲ, ಸಿನಿಮಾ ಪ್ರಮೋಷನ್ ಗಿಮಿಕ್​? ಪವಿತ್ರಾ​-ನರೇಶ್ ಕಿಸ್ಸಿಂಗ್ ವಿಡಿಯೋ ಬಗ್ಗೆ ಅನುಮಾನ

Pavitra Lokesh: ಪವಿತ್ರಾಗೆ ಕಿಸ್ ಮಾಡುತ್ತಿರುವ ವಿಡಿಯೋನ ಹೊಸ ವರ್ಷದ ಸಂದರ್ಭದಲ್ಲಿ ನರೇಶ್ ಶೇರ್ ಮಾಡಿಕೊಂಡಿದ್ದರು. ‘ಹೊಸ ವರ್ಷ, ಹೊಸ ಆರಂಭ. ನಿಮ್ಮೆಲ್ಲರ ಹಾರೈಕೆ ಬೇಕು’ ಎಂದು ಕ್ಯಾಪ್ಷನ್​ ನೀಡಿದ್ದರು ನರೇಶ್.

ಮದುವೆ ಅಲ್ಲ, ಸಿನಿಮಾ ಪ್ರಮೋಷನ್ ಗಿಮಿಕ್​? ಪವಿತ್ರಾ​-ನರೇಶ್ ಕಿಸ್ಸಿಂಗ್ ವಿಡಿಯೋ ಬಗ್ಗೆ ಅನುಮಾನ
ನರೇಶ್​-ಪವಿತ್ರಾ
TV9 Web
| Edited By: |

Updated on:Jan 04, 2023 | 7:00 AM

Share

ನಟಿ ಪವಿತ್ರಾ ಲೋಕೇಶ್ (Pavitra Lokesh) ಹಾಗೂ ತೆಲುಗು ನಟ ನರೇಶ್ ಬಾಬು (Naresh Babu) ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸಾಕಷ್ಟು ವೈರಲ್ ಆಗಿತ್ತು. ಆದರೆ, ಇದನ್ನು ಈ ಜೋಡಿ ಅಲ್ಲ ಗಳೆದಿತ್ತು. ಇದು ಕೇವಲ ವದಂತಿ ಎಂದು ಸ್ಪಷ್ಟನೆ ನೀಡುವ ಕೆಲಸವನ್ನು ಅವರು ಮಾಡಿದ್ದರು. ಆದರೆ, ಇತ್ತೀಚೆಗೆ ವೈರಲ್ ಆಗಿದ್ದ ವಿಡಿಯೋ ಸಾಕಷ್ಟು ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಇಬ್ಬರೂ ಪರಸ್ಪರ ತುಟಿಗೆ ಮುತ್ತಿಟ್ಟುಕೊಳ್ಳುತ್ತಿರುವ ವಿಡಿಯೋ ಇದಾಗಿತ್ತು. ಈ ವಿಡಿಯೋ ನೋಡಿ ಈ ಜೋಡಿ ಮದುವೆ ಆಗುತ್ತಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇದು ಸಿನಿಮಾ ಪ್ರಚಾರದ ಗಿಮಿಕ್ ಎಂದು ಹೇಳಲಾಗುತ್ತಿದೆ.

ಪವಿತ್ರಾ ಲೋಕೇಶ್ ಹಾಗೂ ನರೇಶ್ ಮಧ್ಯೆ ಪ್ರೀತಿ ಚಿಗುರಿದೆ ಎನ್ನಲಾಗಿತ್ತು. ಈ ವಿಚಾರ ಸಾಕಷ್ಟು ಸುದ್ದಿ ಆಗಿತ್ತು. ಈ ವಿಚಾರದಲ್ಲಿ ನರೇಶ್ ಹಾಗೂ ಅವರ ಪತ್ನಿ ರಮ್ಯಾ ಕಿತ್ತಾಡಿಕೊಂಡಿದ್ದರು. ಈ ವಿವಾದ ತಣ್ಣಗಾಯಿತು ಎನ್ನುವಾಗ ನರೇಶ್ ಕಡೆಯಿಂದ ದೊಡ್ಡ ಅಪ್​ಡೇಟ್​ ಸಿಕ್ಕಿತ್ತು. ಪವಿತ್ರಾಗೆ ಕಿಸ್ ಮಾಡುತ್ತಿರುವ ವಿಡಿಯೋನ ಹೊಸ ವರ್ಷದ ಸಂದರ್ಭದಲ್ಲಿ ನರೇಶ್ ಶೇರ್ ಮಾಡಿಕೊಂಡಿದ್ದರು. ‘ಹೊಸ ವರ್ಷ, ಹೊಸ ಆರಂಭ. ನಿಮ್ಮೆಲ್ಲರ ಹಾರೈಕೆ ಬೇಕು’ ಎಂದು ಕ್ಯಾಪ್ಷನ್​ ನೀಡಿದ್ದರು ನರೇಶ್. ಇವರು ಮದುವೆ ಆಗುತ್ತಿದ್ದಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಇದರ ಹಿಂದೆ ಪ್ರಚಾರದ ಗಿಮಿಕ್ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
Pavitra Lokesh Marriage: ಪವಿತ್ರಾ ಲೋಕೇಶ್​ ತುಟಿಗೆ ಮುತ್ತಿಟ್ಟು ಮದುವೆ ನ್ಯೂಸ್​ ತಿಳಿಸಿದ ನರೇಶ್​; ವಿಡಿಯೋ ವೈರಲ್​
Image
Pavitra Lokesh: ಮುಖಾಮುಖಿ ಬೈಯ್ದುಕೊಂಡ ರಮ್ಯಾ-ಪವಿತ್ರಾ ಲೋಕೇಶ್​; ಖುಷಿಯಿಂದ ಕೇಕೆ ಹಾಕಿದ ನರೇಶ್​
Image
ಒಂದೇ ರೂಮ್​ನಲ್ಲಿ ನಟಿ ಪವಿತ್ರಾ ಲೋಕೇಶ್, ನಟ ನರೇಶ್: ರೂಂ ಮುಂದೆ ರಮ್ಯ ರಘುಪತಿ ಹೈಡ್ರಾಮಾ

ಪವಿತ್ರಾ ಹಾಗೂ ನರೇಶ್​ ‘ಮಲ್ಲಿ ಪೆಳ್ಳಿ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮತ್ತೆ ಮದುವೆ ಎನ್ನುವ ಅರ್ಥವನ್ನು ಈ ಟೈಟಲ್ ನೀಡುತ್ತದೆ. ಈಗ ವೈರಲ್ ಆಗಿರುವ ವಿಡಿಯೋ ಈ ಸಿನಿಮಾದ್ದೇ ಎಂದು ಹೇಳಲಾಗುತ್ತಿದೆ. ಶೀಘ್ರವೇ ಈ ಸಿನಿಮಾ ರಿಲೀಸ್ ಆಗಲಿದೆ. ಇದರ ಪ್ರಚಾರಕ್ಕಾಗಿ ಈ ಜೋಡಿ ಹೀಗೆ ಮಾಡಿದೆ ಎನ್ನಲಾಗುತ್ತಿದೆ. ಈ ಬಗ್ಗೆ ನರೇಶ್ ಹಾಗೂ ಪವಿತ್ರಾ ಕಡೆಯಿಂದ ಸ್ಪಷ್ಟನೆ ಸಿಗಬೇಕಿದೆ.

ಇದನ್ನೂ ಓದಿ:  ಪವಿತ್ರಾ ಲೋಕೇಶ್​ ತುಟಿಗೆ ಮುತ್ತಿಟ್ಟು ಮದುವೆ ನ್ಯೂಸ್​ ತಿಳಿಸಿದ ನರೇಶ್​; ವಿಡಿಯೋ ವೈರಲ್​

ಹಲವು ತಿಂಗಳುಗಳಿಂದ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಅವರು ಜೊತೆಯಾಗಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಅವರ ಸಂಬಂಧದ ವಿರುದ್ಧ ನರೇಶ್​ ಪತ್ನಿ ರಮ್ಯಾ ಆಕ್ಷೇಪ ವ್ಯಕ್ತಪಡಿಸಿದ್ದರೂ ಕೂಡ ಈ ಜೋಡಿ ತಲೆ ಕೆಡಿಸಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:59 am, Wed, 4 January 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ