ಹಾರ್ದಿಕ್ ಪಾಂಡ್ಯ ಜೊತೆಗಿನ ವಿಚ್ಛೇದನದ ಬಗ್ಗೆ ಪರೋಕ್ಷವಾಗಿ ಮಾತನಾಡಿದ ನತಾಶಾ

ನತಾಶಾ ಅವರು ಆಗಾಗ ಏಸು ಹೇಳಿದ ಮಾತುಗಳನ್ನು ಹಂಚಿಕೊಳ್ಳುತ್ತಾರೆ. ಬೈಬಲ್​ನಲ್ಲಿ ಏನು ಬರೆಯಲಾಗಿದೆ ಎಂಬುದನ್ನು ಆಗಾಗ ವಿವರಿಸುತ್ತಾರೆ. ಈಗ ಅವರು ಇನ್​ಸ್ಟಾಗ್ರಾಮ್​ ಸ್ಟೇಟಸ್​ನಲ್ಲಿ ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಬೈಬಲ್​ನಲ್ಲಿ ಬರೆಯಲಾದ ಕೆಲವು ಸಾಲುಗಳನ್ನು ಓದಿದ್ದಾರೆ.

ಹಾರ್ದಿಕ್ ಪಾಂಡ್ಯ ಜೊತೆಗಿನ ವಿಚ್ಛೇದನದ ಬಗ್ಗೆ ಪರೋಕ್ಷವಾಗಿ ಮಾತನಾಡಿದ ನತಾಶಾ
ನತಾಶಾ
Follow us
|

Updated on: Jul 04, 2024 | 7:29 AM

ನಟಿ, ಮಾಡೆಲ್​ ನತಾಶಾ ಅವರು ಸುದ್ದಿಯಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ ಜೊತೆಗಿನ ವಿಚ್ಛೇದನ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಇಬ್ಬರೂ ಬೇರೆ ಆಗಿದ್ದಾರೆ ಎನ್ನುವುದನ್ನು ಸೂಚಿಸುವಂಥ ಘಟನೆಗಳು ನಡೆಯುತ್ತಿವೆ. ವಿಶ್ವಕಪ್ ಗೆಲ್ಲಲು ಹಾರ್ದಿಕ್ ಪಾಂಡ್ಯ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ, ಈ ಬಗ್ಗೆ ಅವರು ಯಾವುದೇ ಪೋಸ್ಟ್ ಹಾಕಿಲ್ಲ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈಗ ಅವರು ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಪರೋಕ್ಷವಾಗಿ ವಿಚ್ಛೇದನದ ಬಗ್ಗೆ ಮಾತನಾಡಿದ್ದಾರೆ.

ನತಾಶಾ ಕ್ರೈಸ್ತ ಧರ್ಮದವರು. ಹೀಗಾಗಿ ಅವರು ಆಗಾಗ ಏಸು ಹೇಳಿದ ಮಾತುಗಳನ್ನು ಹಂಚಿಕೊಳ್ಳುತ್ತಾರೆ. ಬೈಬಲ್​ನಲ್ಲಿ ಏನು ಬರೆಯಲಾಗಿದೆ ಎಂಬುದನ್ನು ವಿವರಿಸುತ್ತಾರೆ. ಈಗ ಅವರು ಇನ್​ಸ್ಟಾಗ್ರಾಮ್​ ಸ್ಟೇಟಸ್​ನಲ್ಲಿ ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಬೈಬಲ್​ನಲ್ಲಿ ಬರೆಯಲಾದ ಕೆಲವು ಸಾಲುಗಳನ್ನು ಓದಿದ್ದಾರೆ.

‘ಇಂದು ನಾನು ಕೆಲವು ಸಾಲುಗಳನ್ನು ಓದಲು ಉತ್ಸುಕನಾಗಿದ್ದೇನೆ. ಅದಕ್ಕಾಗಿಯೇ ನಾನು ಬೈಬಲ್ ಅನ್ನು ನನ್ನೊಂದಿಗೆ ಕಾರಿನಲ್ಲಿ ತಂದಿದ್ದೇನೆ. ಅಲ್ಲಿ ಹೀಗೆ ಬರೆದಿದೆ.. ಭಗವಂತ ನಿಮ್ಮೊಂದಿಗೆ ಸದಾ ಇರುತ್ತಾನೆ. ಆತನು ನಿಮ್ಮನ್ನು ಎಂದಿಗೂ ಬಿಡುವುದಿಲ್ಲ ಅಥವಾ ತೊರೆಯುವುದಿಲ್ಲ. ನೀವು ಭಯಪಡಬೇಡಿ ಅಥವಾ ನಿರಾಶೆಗೊಳ್ಳಬೇಡಿ. ನಾವು ಯಾವುದಾದರೂ ತೊಂದರೆ ಅನುಭವಿಸುತ್ತಿದ್ದರೆ ನಾವು ನಿರುತ್ಸಾಹಗೊಳ್ಳುತ್ತೇವೆ, ನಿರಾಶೆಗೊಳ್ಳುತ್ತೇವೆ, ದುಃಖಿತರಾಗುತ್ತೇವೆ, ಆಗಾಗ ಕಳೆದುಹೋಗುತ್ತೇವೆ. ಆದರೆ, ದೇವರು ನಿಮ್ಮೊಂದಿಗಿದ್ದಾನೆ. ನೀವು ಏನು ಮಾಡುತ್ತಿದ್ದೀರಿ ಎನ್ನುವ ಬಗ್ಗೆ ಆತ ಯೋಚಿಸುವುದಿಲ್ಲ. ಏಕೆಂದರೆ ಈಗಾಗಲೇ ಆತ ಕೆಲವು ಪ್ಲ್ಯಾನ್​ಗಳನ್ನು ಹಾಕಿದ್ದಾನೆ’ ಎಂದಿದ್ದಾರೆ ಅವರು. ಅವರು ಹೇಳಿರುವ ಸಾಲುಗಳು ವಿಚ್ಛೇದನಕ್ಕೆ ಸಂಬಂಧಿಸಿವೆ ಎಂದು ಕೆಲವರು ಊಹಿಸಿದ್ದಾರೆ.

ನತಾಶಾ ಅವರ ನಡೆ ಸಾಕಷ್ಟು ಅಚ್ಚರಿ ಮೂಡಿಸುತ್ತಿದೆ. ಅವರು ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ವಿಶ್ವಕಪ್ ಬಳಿಕ ಅವರು ಹಾರ್ದಿಕ್ ಬಗ್ಗೆ ಒಂದೇ ಒಂದು ಪೋಸ್ಟ್ ಮಾಡದ ಕಾರಣ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಈ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ತಮ್ಮ ಕೆಲಸವನ್ನು ಮುಂದುವರಿಸುತ್ತಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಮುಗಿದ ಬಳಿಕ ಮೊದಲ ಬಾರಿ ಪೋಸ್ಟ್ ಮಾಡಿದ ನತಾಶಾ

ಇತ್ತೀಚೆಗೆ ನತಾಶಾ ಅವರು ಜಿಮ್​ ಫೋಟೋಗಳು, ಡ್ರೆಸ್​ನ ಫೋಟೋಗಳನ್ನು ಹೆಚ್ಚೆಚ್ಚು ಹಂಚಿಕೊಳ್ಳುತ್ತಿದ್ದಾರೆ. ಹಾರ್ದಿಕ್ ಜೊತೆಗಿನ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಾಗೆಯೇ ಇಟ್ಟಿದ್ದಾರೆ. ಹಾರ್ದಿಕ್ ಪಾಂಡ್ಯ ಅವರನ್ನು ನತಾಶಾ ಫಾಲೋ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ