AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲು; ಏಕತಾ ಪ್ರತಿಮೆಯ ಎದುರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಈ ಬಾರಿ ದೆಹಲಿಯ ಬದಲಿಗೆ ಗುಜರಾತ್‌ನ ಏಕತಾ ಪ್ರತಿಮೆಯ ಆವರಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಸೆಪ್ಟೆಂಬರ್ 22 ರಂದು ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತೀಯ ಚಿತ್ರರಂಗದ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದು, ಈ ಮೂಲಕ ಗುಜರಾತ್‌ ಪ್ರವಾಸೋದ್ಯಮಕ್ಕೆ ಹೊಸ ಮೆರುಗು ಸಿಗಲಿದೆ.

ಇದೇ ಮೊದಲು; ಏಕತಾ ಪ್ರತಿಮೆಯ ಎದುರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ
ದ್ರೌಪದಿ ಮುರ್ಮು
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 08, 2026 | 7:57 AM

Share

ಮುಖ್ಯಾಂಶಗಳು

  • ದೆಹಲಿಯಿಂದ ಹೊರಬಂದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
  • ಏಕತಾ ಪ್ರತಿಮೆಯ ಅಡಿಯಲ್ಲಿ ಪ್ರಶಸ್ತಿ ಪ್ರದಾನ ವೈಭವ
  • ಸಿನಿ ದಿಗ್ಗಜರ ಸ್ವಾಗತಕ್ಕೆ ಸಜ್ಜಾದ ಏಕತಾ ನಗರ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗುಜರಾತ್‌ನ ಏಕತಾ ನಗರ ಸಜ್ಜಾಗಿದೆ. ಈ ಬಾರಿ ದೆಹಲಿಯಿಂದ ಹೊರಗೆ, ವಿಶ್ವದ ಅತಿ ಎತ್ತರದ ಏಕತಾ ಪ್ರತಿಮೆಯ (ಸ್ಟ್ಯಾಚ್ಯೂ ಆಫ್ ಯೂನಿಟಿ) ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸೆಪ್ಟೆಂಬರ್ 22 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ಪ್ರಶಸ್ತಿ ನೀಡಲಿದ್ದಾರೆ. ಚಿತ್ರರಂಗದ ಪ್ರಮುಖ ಗಣ್ಯರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.

ಸಮಾರಂಭಕ್ಕಾಗಿ ನರ್ಮದಾ ಜಿಲ್ಲೆಯ ಏಕತಾ ನಗರದಲ್ಲಿ ಬೃಹತ್ ಜರ್ಮನ್ ಅಲ್ಯೂಮಿನಿಯಂ ಡೋಮ್ ನಿರ್ಮಿಸಲಾಗುತ್ತಿದೆ. ಬಸ್ ಬೇ ಪ್ರದೇಶದಲ್ಲಿ ಸುಸಜ್ಜಿತ ವೇದಿಕೆ ಸಿದ್ಧವಾಗುತ್ತಿದೆ. ಕಾರ್ಯಕ್ರಮದಲ್ಲಿ ಸುಮಾರು 1,000 ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು ಒಟ್ಟು 75 ನಿಮಿಷಗಳ ಕಾಲ ನಡೆಯಲಿದೆ.

ರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ನರ್ಮದಾ ಜಿಲ್ಲಾಧಿಕಾರಿ ಗಂಗಾ ಸಿಂಗ್ ನೇತೃತ್ವದಲ್ಲಿ ಭದ್ರತಾ ಪರಿಶೀಲನೆ ನಡೆದಿದೆ. ಗಣ್ಯರ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಈ ರಾಷ್ಟ್ರೀಯ ಕಾರ್ಯಕ್ರಮಕ್ಕಾಗಿ ಗುಜರಾತ್ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಒಟ್ಟಾಗಿ ಕೆಲಸ ಮಾಡುತ್ತಿವೆ.

2024ರಲ್ಲಿ ತೆರೆಕಂಡ ಸಿನಿಮಾಗಳಿಗೆ ಈ ಬಾರಿ ಪ್ರಶಸ್ತಿ ನೀಡಲಾಗುತ್ತಿದೆ. ಜುಲೈ ತಿಂಗಳಿನಲ್ಲಿ ಪ್ರಶಸ್ತಿ ಪಟ್ಟಿಯನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ‘ಆರ್ಟಿಕಲ್ 370’ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ಯಾಮಿ ಗೌತಮ್ ಅತ್ಯುತ್ತಮ ನಟಿ ಪ್ರಶಸ್ತಿ ಗೆದ್ದಿದ್ದಾರೆ. ಮಮ್ಮುಟ್ಟಿ ಮತ್ತು ಕಾರ್ತಿಕ್ ಆರ್ಯನ್ ಜಂಟಿಯಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಬಾಚಿಕೊಂಡ ‘ಆರ್ಟಿಕಲ್ 370’

ಪ್ರಶಸ್ತಿ ಸಮಾರಂಭವನ್ನು ಆಯೋಜಿಸುವ ಮೂಲಕ ಏಕತಾ ನಗರದ ಹಿರಿಮೆ ಹೆಚ್ಚಾಗಿದೆ. ಪ್ರವಾಸೋದ್ಯಮ ಮತ್ತು ಸಂಸ್ಕೃತಿಗೆ ಹೊಸ ಉತ್ತೇಜನ ಸಿಕ್ಕಿದೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಇಲ್ಲಿ ನಡೆಸಲು ಯೋಜನೆ ರೂಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಈ ತಾಣ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us