AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಾಲಿವುಡ್​​ಗೆ ನಯನತಾರಾ, ಈ ಬಾರಿ ಮತ್ತೊಬ್ಬ ಖಾನ್​​ಗೆ ಜೋಡಿ

Nayantara movie: ಕನ್ನಡ ಸೇರಿದಂತೆ ದಕ್ಷಿಣದ ಎಲ್ಲ ಭಾಷೆಗಳಲ್ಲಿಯೂ ನಾಯಕಿಯಾಗಿ ನಟಿಸಿದ್ದಾರೆ ನಯನತಾರಾ. ಆದರೆ ಇತ್ತೀಚೆಗಷ್ಟೆ ಅಂದರೆ 2023 ರಲ್ಲಿ ಅವರು ಬಾಲಿವುಡ್​​ಗೆ ಮೊದಲ ಬಾರಿಗೆ ಕಾಲಿಟ್ಟಿದ್ದರು. ಅದೂ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಮೂಲಕ. ಇದೀಗ ಮತ್ತೆ ಹಿಂದಿ ಸಿನಿಮಾನಲ್ಲಿ ನಟಿಸಲಿದ್ದಾರೆ ನಯನತಾರಾ. ಈ ಬಾರಿ ಮತ್ತೊಬ್ಬ ಸ್ಟಾರ್ ಖಾನ್ ಜೊತೆಗೆ.

ಮತ್ತೆ ಬಾಲಿವುಡ್​​ಗೆ ನಯನತಾರಾ, ಈ ಬಾರಿ ಮತ್ತೊಬ್ಬ ಖಾನ್​​ಗೆ ಜೋಡಿ
Nayanthara
ಮಂಜುನಾಥ ಸಿ.
|

Updated on: Mar 29, 2026 | 6:17 PM

Share

ನಯನತಾರಾ (Nayantara) ಅನ್ನು ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯುವುದು. ಎರಡು ದಶಕಕ್ಕೂ ಹೆಚ್ಚು ಸಮಯದಿಂದಲೂ ಸಹ ನಯನತಾರಾ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕಳೆದ ಎರಡು ದಶಕದಿಂದಲೂ ಸ್ಟಾರ್ ಪಟ್ಟವನ್ನು ಉಳಿಸಿಕೊಂಡು ಬರುತ್ತಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣದ ಎಲ್ಲ ಭಾಷೆಗಳಲ್ಲಿಯೂ ನಾಯಕಿಯಾಗಿ ನಟಿಸಿದ್ದಾರೆ ನಯನತಾರಾ. ಆದರೆ ಇತ್ತೀಚೆಗಷ್ಟೆ ಅಂದರೆ 2023 ರಲ್ಲಿ ಅವರು ಬಾಲಿವುಡ್​​ಗೆ ಮೊದಲ ಬಾರಿಗೆ ಕಾಲಿಟ್ಟಿದ್ದರು. ಅದೂ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಮೂಲಕ. ಇದೀಗ ಮತ್ತೆ ಹಿಂದಿ ಸಿನಿಮಾನಲ್ಲಿ ನಟಿಸಲಿದ್ದಾರೆ ನಯನತಾರಾ. ಈ ಬಾರಿ ಮತ್ತೊಬ್ಬ ಸ್ಟಾರ್ ಖಾನ್ ಜೊತೆಗೆ.

ನಯನತಾರಾ ಅವರು ಸಲ್ಮಾನ್ ಖಾನ್ ಜೊತೆಗೆ ನಟಿಸಲು ರೆಡಿಯಾಗಿದ್ದಾರೆ. ಸಲ್ಮಾನ್ ಖಾನ್ ನಟಿಸಲಿರುವ ಹೊಸ ಸಿನಿಮಾನಲ್ಲಿ ನಯನತಾರಾ ನಾಯಕಿಯಾಗಿ ನಟಿಸಲಿದ್ದಾರೆ. ವಿಶೇಷವೆಂದರೆ ಈ ಸಿನಿಮಾದ ನಿರ್ದೇಶಕ ಮತ್ತು ನಿರ್ಮಾಪಕ ಇಬ್ಬರೂ ಸಹ ದಕ್ಷಿಣದವರೇ ಆಗಿದ್ದಾರೆ. ಇದೇ ಕಾರಣಕ್ಕೆ ದಕ್ಷಿಣ ಭಾರತದ ಸ್ಟಾರ್ ನಟಿಯನ್ನು ಬಾಲಿವುಡ್​​ ಸ್ಟಾರ್​ ನಟನ ಎದುರು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ.

ದಕ್ಷಿಣದ ಖ್ಯಾತ ಸಿನಿಮಾ ನಿರ್ಮಾಪಕ ಮತ್ತು ವಿತರಕ ದಿಲ್ ರಾಜು ಅವರು ಸಲ್ಮಾನ್ ಖಾನ್ ನಟಿಸಲಿರುವ ಹೊಸ ಸಿನಿಮಾದ ನಿರ್ಮಾಣ ಮಾಡಲಿದ್ದಾರೆ. ಈ ಸಿನಿಮಾವನ್ನು ತೆಲುಗಿನ ಖ್ಯಾತ ನಿರ್ದೇಶಕ ವಂಶಿ ಪೈಡಪಲ್ಲಿ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದ ನಾಯಕಿಯಾಗಿ ನಯನತಾರಾ ನಟಿಸಲಿದ್ದಾರೆ. ಪ್ರಸ್ತುತ ಸಲ್ಮಾನ್ ಖಾನ್ ‘ಮಾತೃಭೂಮಿ’ (ಈ ಮುಂಚೆ ಬ್ಯಾಟಲ್ ಆಫ್ ಗಲ್ವಾನ್) ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದು, ಸಿನಿಮಾದ ಚಿತ್ರೀಕರಣ ಕ್ಲೈಮ್ಯಾಕ್ಸ್ ಹಂತದಲ್ಲಿದೆ.

ಇದನ್ನೂ ಓದಿ:‘ಟಾಕ್ಸಿಕ್’ ಬಿಡುಗಡೆಗೂ ಮುನ್ನ 31.5 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ನಯನತಾರಾ

ವಂಶಿ ಪೈಡಪಲ್ಲಿ ತುಸು ಭಿನ್ನ ರೀತಿಯ ಸಿನಿಮಾ ನಿರ್ದೇಶಕ. ಸಾಮಾಜಿಕ ಸಂದೇಶವುಳ್ಳ ಕಮರ್ಶಿಯಲ್ ಸಿನಿಮಾಗಳನ್ನು ಮಾಡುತ್ತಾ ಯಶಸ್ಸು ಕಾಣುತ್ತಾ ಬಂದಿದ್ದಾರೆ. ಪ್ರಭಾಸ್ ನಟನೆಯ ‘ಮುನ್ನಾ’ ವಂಶಿ ಅವರ ಮೊದಲ ಸಿನಿಮಾ. ಜೂ ಎನ್​​ಟಿಆರ್ ನಟನೆಯ ಕೌಟುಂಬಿಕ ಸಿನಿಮಾ ‘ಬೃಂದಾವನಂ’ ಭಾರಿ ದೊಡ್ಡ ಹಿಟ್. ರಾಮ್ ಚರಣ್ ನಟನೆಯ ‘ಯೆವಡು’ ಸಹ ಹಿಟ್ ಆಯ್ತು. ಫೀಲ್ ಗುಡ್ ಸಿನಿಮಾ ‘ಊಪಿರಿ’, ಸಾಮಾಜಿಕ ಸಂದೇಶ ಹೊಂದಿದ್ದ ಮತ್ತು ರಾಷ್ಟ್ರಪ್ರಶಸ್ತಿಗೂ ಭಾಜನವಾದ ‘ಮಹರ್ಷಿ’ ಸಿನಿಮಾ ಸಹ ವಂಶಿ ಅವರದ್ದೇ ನಿರ್ದೇಶನ. 2023 ರಲ್ಲಿ ಬಿಡುಗಡೆ ಆದ ದಳಪತಿ ವಿಜಯ್ ನಟನೆಯ ‘ವಾರಿಸು’ ನಿರ್ದೇಶಿಸಿದ್ದು ಸಹ ವಂಶಿ ಪೈಡಪಲ್ಲಿ. ಇದೀಗ ಅವರು ಸಲ್ಮಾನ್ ಖಾನ್​​ಗಾಗಿ ಸಿನಿಮಾ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ