AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಗುಟ್ಟಾಗಿ ಸಿಹಿ ಸುದ್ದಿ ನೀಡಿದ ನಯನತಾರಾ-ವಿಘ್ನೇಶ್​ ಶಿವನ್​!

ನಯನತಾರಾ ಕೈಯಲ್ಲಿ ಉಂಗುರ ಇದೆ. ಈ ಉಂಗರ ನೋಡಿದ ಅಭಿಮಾನಿಗಳು ವಿಘ್ನೇಶ್​-ನಯನಾ ಗುಟ್ಟಾಗಿ ಎಂಗೇಜ್​ ಆಗಿದ್ದಾರೆ ಎನ್ನುತ್ತಿದ್ದಾರೆ.

ಅಭಿಮಾನಿಗಳಿಗೆ ಗುಟ್ಟಾಗಿ ಸಿಹಿ ಸುದ್ದಿ ನೀಡಿದ ನಯನತಾರಾ-ವಿಘ್ನೇಶ್​ ಶಿವನ್​!
ವಿಘ್ನೇಶ್​ ಶಿವನ್​ -ನಯನತಾರಾ
ರಾಜೇಶ್ ದುಗ್ಗುಮನೆ
| Edited By: |

Updated on: Mar 25, 2021 | 3:55 PM

Share

ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಬ್ಬರೂ ಇದನ್ನು ಒಪ್ಪಿಕೊಂಡಿದ್ದು ಮಾತ್ರವಲ್ಲ ಬೇರೆ ಬೇರೆ ಕಡೆಗಳಿಗೆ ಸುತ್ತಾಡಲು ತೆರಳಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ, ಈವರೆಗೆ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿರಲಿಲ್ಲ. ಈಗ ಕೇಳಿ ಬರುತ್ತಿರುವ ಅಚ್ಚರಿ ವಿಚಾರ ಎಂದರೆ, ಇಬ್ಬರೂ ಗುಟ್ಟಾಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಂತೆ. ವಿಘ್ನೇಶ್​ ಶಿವನ್​ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಒಂದನ್ನು ಹಾಕಿದ್ದಾರೆ. ಈ ಫೋಟೊದಲ್ಲಿ ವಿಘ್ನೇಶ್​ ಅವರ ಎದೆಯ ಮೇಲೆ ನಯನತಾರಾ ಕೈ ಇಟ್ಟುಕೊಂಡಿದ್ದಾರೆ. ಇಷ್ಟೇ ಅಲ್ಲ, ನಯನತಾರಾ ಕೈಯಲ್ಲಿ ಉಂಗುರ ಕೂಡ ಇದೆ. ಈ ಉಂಗರ ನೋಡಿದ ಅಭಿಮಾನಿಗಳು ವಿಘ್ನೇಶ್​-ನಯನಾ ಗುಟ್ಟಾಗಿ ಎಂಗೇಜ್​ ಆಗಿದ್ದಾರೆ ಎನ್ನುತ್ತಿದ್ದಾರೆ.

ಅಂದಹಾಗೆ, ನಯನತಾರಾ ಧರಿಸಿರುವುದು ಎಂಗೇಜ್​​ಮೆಂಟ್ ರಿಂಗೋ ಅಥವಾ ನಿತ್ಯ ಧರಿಸುವ ಉಂಗುರವೋ ಎನ್ನುವ ವಿಚಾರ ಇನ್ನೂ ಬಹಿರಂಗವಾಗಿಲ್ಲ. ಈ ಬಗ್ಗೆ ಈ ಜೋಡಿ ಕಡೆಯಿಂದ ಉತ್ತರ ಬರಬೇಕಿದೆ.

ಇನ್ನು, ನಯನಾ ಮತ್ತು ವಿಘ್ನೇಶ್ ಅವರ ಅಭಿಮಾನಿಗಳು ಇವರನ್ನು ಅಭಿನಂದಿಸುತ್ತಿದ್ದಾರೆ. ಕಾಮೆಂಟ್​ ಬಾಕ್ಸ್​ನಲ್ಲಿ ಶುಭಾಶಯಗಳು ಸುರಿ ಮಳೆ ಹರಿದು ಬಂದಿದೆ. ಅನೇಕರು ಇವರ ವಿವಾಹದ ಡೇಟ್​ ತಿಳಿದುಕೊಳ್ಳಲು ಆಸಕ್ತಿ ತೋರಿದ್ದಾರೆ. 2015 ರಲ್ಲಿ ತೆರೆಗೆ ಬಂದ ವಿಘ್ನೇಶ್ ನಿರ್ದೇಶನದ ನಾನಮ್ ರೌಡಿಧಾನ್ ಚಿತ್ರದಲ್ಲಿ ನಯನತಾರಾ ಮುಖ್ಯ ಪಾತ್ರಧಾರಿಯಾಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಇವರಿಗೆ ಉಂಟಾದ ಪರಿಚಯ ಪ್ರೀತಿಗೆ ತಿರುಗಿತ್ತು.

ಇದನ್ನೂ ಓದಿ: BBK8: ಬಿಗ್​ ಬಾಸ್ ಮನೆಯಲ್ಲಿ ರಹಸ್ಯವಾಗಿ ಸಿಗುವ ಸೌಲಭ್ಯಗಳೇನು? ಮಾತಿನ ಮಧ್ಯೆ ಸತ್ಯ ಬಾಯಿಬಿಟ್ಟ ರಘು!

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ