Nayanthara Twin boys: ಅವಳಿ ಮಕ್ಕಳಿಗೆ ತಂದೆ-ತಾಯಿ ಆದ ವಿಘ್ನೇಶ್ ಶಿವನ್, ನಯನತಾರಾ; ಫೋಟೋ ಹಂಚಿಕೊಂಡ ದಂಪತಿ
Nayanthara Vignesh Shivan: ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರು ಜೂನ್ 9ರಂದು ಹಸೆಮಣೆ ಏರಿದ್ದರು. ಸರಿಯಾಗಿ ನಾಲ್ಕು ತಿಂಗಳು ಕಳೆಯುವಷ್ಟರಲ್ಲಿ ಗುಡ್ ನ್ಯೂಸ್ ನೀಡಿದ್ದಾರೆ.

ನಾಲ್ಕು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಖ್ಯಾತ ನಟಿ ನಯನತಾರಾ (Nayanthara) ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಅವರು ಈಗ ಅವಳಿ ಮಕ್ಕಳನ್ನು ಪಡೆದಿದ್ದಾರೆ. ಮಕ್ಕಳ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಖುಷಿಯ ಸಮಾಚಾರವನ್ನು ತಿಳಿಸಿದ್ದಾರೆ ವಿಘ್ನೇಶ್ ಶಿವನ್ (Vignesh Shivan). ಜೂನ್ 9ರಂದು ಈ ಜೋಡಿ ಹಸೆಮಣೆ ಏರಿತ್ತು. ಸರಿಯಾಗಿ ನಾಲ್ಕು ತಿಂಗಳು ಕಳೆಯುವಷ್ಟರಲ್ಲಿ ಗುಡ್ ನ್ಯೂಸ್ ನೀಡಿದ್ದಾರೆ. ಬಾಡಿಗೆ ತಾಯಿ (Surrogate Mother) ಮೂಲಕ ಮಕ್ಕಳನ್ನು ಪಡೆದ ಈ ದಂಪತಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಆಗಿದೆ.
ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್ ಶಿವನ್. ನಟಿಯಾಗಿ ನಯನತಾರಾ ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಅದೇ ರೀತಿ, ವಿಘ್ನೇಶ್ ಶಿವನ್ ಅವರು ನಿರ್ದೇಶಕನಾಗಿ ಬ್ಯುಸಿ ಆಗಿದ್ದಾರೆ. ಇವರಿಬ್ಬರು ಬಾಡಿಗೆ ತಾಯಿ ಮೂಲಕ ಮಗು ಪಡೆಯಬಹುದು ಎಂಬ ಅನುಮಾನ ಮೊದಲೇ ಮೂಡಿತ್ತು. ಆ ಬಗ್ಗೆ ಒಂದಷ್ಟು ಸುದ್ದಿಗಳು ಹರಿದಾಡಿದ್ದವು. ಆ ಅನುಮಾನ ಈಗ ನಿಜವಾಗಿದೆ.
Nayan & Me have become Amma & Appa❤️ We are blessed with twin baby Boys❤️❤️ All Our prayers,our ancestors’ blessings combined wit all the good manifestations made, have come 2gethr in the form Of 2 blessed babies for us❤️? Need all ur blessings for our Uyir?❤️& Ulagam?❤️ pic.twitter.com/G3NWvVTwo9
— Vignesh Shivan (@VigneshShivN) October 9, 2022
ಸದ್ಯ ವಿಘ್ನೇಶ್ ಶಿವನ್ ಅವರು ಹಂಚಿಕೊಂಡಿರುವ ಫೋಟೋದಲ್ಲಿ ಮಕ್ಕಳ ಮುಖ ತೋರಿಸಿಲ್ಲ. ತಮ್ಮ ಅವಳಿ ಮಕ್ಕಳ ಪಾದಕ್ಕೆ ಪತಿ-ಪತ್ನಿ ಮುತ್ತಿಡುತ್ತಿರುವ ಕ್ಷಣ ಈ ಫೋಟೋದಲ್ಲಿ ಸೆರೆ ಆಗಿದೆ. ಈ ಕ್ಯೂಟ್ ಫೋಟೋ ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವಳಿ ಮಕ್ಕಳ ಮುಖ ತೋರಿಸಿ ಎಂದು ಅನೇಕರು ಮನವಿ ಮಾಡುತ್ತಿದ್ದಾರೆ.
ಗಂಡು ಮಕ್ಕಳ ಹೆಸರು ತಿಳಿಸಿದ ದಂಪತಿ:
ಬಾಡಿಗೆ ತಾಯಿ ಮೂಲಕ ಜನಿಸಿರುವ ಈ ಅವಳಿ ಗಂಡು ಮಕ್ಕಳಿಗೆ ಉಯಿರ್ ಮತ್ತು ಉಳಗಂ ಎಂದು ಹೆಸರು ಇಡಲಾಗಿದೆ. ‘ನಯನ್ ಮತ್ತು ನಾನು ಅಪ್ಪ-ಅಮ್ಮ ಆಗಿದ್ದೇವೆ. ನಮಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಪ್ರಾರ್ಥನೆ, ಹಿರಿಯರ ಆಶೀರ್ವಾದವು ಈ ಮಕ್ಕಳ ರೂಪದಲ್ಲಿ ಸಿಕ್ಕಿದೆ. ನಮ್ಮ ಉಯಿರ್ ಮತ್ತು ಉಳಗಂ ಮೇಲೆ ನಿಮ್ಮ ಆಶೀರ್ವಾದ ಇರಲಿ’ ಎಂದು ವಿಘ್ನೇಶ್ ಶಿವನ್ ಪೋಸ್ಟ್ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:54 pm, Sun, 9 October 22