‘ಜವಾನ್’ ಚಿತ್ರಕ್ಕೆ ನಯನತಾರಾ ಪಡೆದ ಸಂಭಾವನೆ ಇಷ್ಟೊಂದಾ? ಕೇಳಿದ್ರೆ ಅಚ್ಚರಿಪಡ್ತೀರಿ

‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ. ಶಾರುಖ್ ಖಾನ್, ನಯನತಾರಾ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ವಿಜಯ್ ಸೇತುಪತಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ನಯನತಾರಾ ಸಂಭಾವನೆ ಬಗ್ಗೆ ಇಲ್ಲಿದೆ ಮಾಹಿತಿ..

‘ಜವಾನ್’ ಚಿತ್ರಕ್ಕೆ ನಯನತಾರಾ ಪಡೆದ ಸಂಭಾವನೆ ಇಷ್ಟೊಂದಾ? ಕೇಳಿದ್ರೆ ಅಚ್ಚರಿಪಡ್ತೀರಿ
ನಯನತಾರಾ
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Sep 01, 2023 | 6:54 PM

ನಟಿ ನಯನತಾರಾ (Nayanthara) ಅವರು ಕಳೆದ 20 ವರ್ಷಗಳಿಂದ ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಅವರು ಪಾತ್ರಗಳ ಆಯ್ಕೆಯಲ್ಲಿ ಸಖತ್ ಸ್ಟ್ರಿಕ್ಟ್ ಆಗಿದ್ದಾರೆ. ತಮಗೆ ಪಾತ್ರ ಹೊಂದುತ್ತದೆ ಎಂದಾದರೆ ಮಾತ್ರ ಸಿನಿಮಾ ಒಪ್ಪಿಕೊಳ್ಳುತ್ತಾರೆ. ಈಗ ‘ಜವಾನ್’ (Jawan) ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಳ್ಳಲಿದೆ ಎಂಬುದು ಪ್ರಿವ್ಯೂ ವಿಡಿಯೋ ಹಾಗೂ ಟ್ರೇಲರ್ ನೋಡಿದ ಅಭಿಮಾನಿಗಳ ಊಹೆ. ಈಗ ನಯನತಾರಾ ಸಂಭಾವನೆ ವಿಚಾರ ಚರ್ಚೆ ಆಗುತ್ತಿದೆ. ನಯನತಾರಾ ಅವರು ‘ಜವಾನ್’ ಚಿತ್ರಕ್ಕಾಗಿ ಬರೋಬ್ಬರಿ 11 ಕೋಟಿ ರೂಪಾಯಿ ಸಂಭಾವನೆ (Nayanthara Remuneration) ಪಡೆದಿದ್ದಾರಂತೆ. ಈ ಮೂಲಕ ಅನೇಕರಿಗೆ ಅಚ್ಚರಿ ಮೂಡಿಸಿದ್ದಾರೆ. ಈ ಚಿತ್ರದಲ್ಲಿ ಅವರು ಭರ್ಜರಿ ಆ್ಯಕ್ಷನ್ ಮೆರೆದಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ನೋಡಿದ ಬಳಿಕವೇ ಅವರ ಪಾತ್ರದ ಬಗ್ಗೆ ಸ್ಪಷ್ಟತೆ ಸಿಗಲಿದೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

2003ರಲ್ಲಿ ನಯನತಾರಾ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಮೊದಲು ನಟಿಸಿದ್ದು ಮಲಯಾಳಂ ಚಿತ್ರದಲ್ಲಿ. ನಂತರ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ಅಭಿನಯಿಸಿದರು. ದಕ್ಷಿಣ ಭಾರತದಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಯಿತು. 2010ರಲ್ಲಿ ರಿಲೀಸ್ ಆದ ‘ಸೂಪರ್’ ಚಿತ್ರದ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು. ಅವರು ನಟಿಸಿದ ಏಕೈಕ ಕನ್ನಡ ಚಿತ್ರ ಇದು. ಈಗ ಅವರು ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಮೊದಲ ಹಿಂದಿ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿದ ಶಾರುಖ್ ಖಾನ್; ನಟನ ನಂಬಿಕೆಗೆ ಕಾರಣವೇನು?

‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ. ಶಾರುಖ್ ಖಾನ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ವಿಜಯ್ ಸೇತುಪತಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಸಾನ್ಯಾ ಮಲ್ಹೋತ್ರಾ, ದೀಪಿಕಾ ಪಡುಕೋಣೆ ಮೊದಲಾದವರು ನಟಿಸಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಟ್ಲಿ ಅವರು ಸಿನಿಮಾ ನಿರ್ದೇಶನ ಮಾಡಿದ್ದಾರೆ. ಬೆಂಗಳೂರಿನಲ್ಲಿ ‘ಜವಾನ್’ ಸಿನಿಮಾದ ಟಿಕೆಟ್ ದರ 250 ರೂಪಾಯಿಯಿಂದ ಆರಂಭವಾಗಿ 2400 ರೂಪಾಯಿವರೆಗೂ ಮಾರಾಟ ಆಗುತ್ತಿದೆ.

ಇದನ್ನೂ ಓದಿ: ಜವಾನ್; ಆಡಿಯೋ ಲಾಂಚ್: ಅದ್ಧೂರಿ ವೇದಿಕೆಯಲ್ಲಿ ಮಿಂಚು ಹರಿಸಿದ ಶಾರುಖ್ ಖಾನ್

ಯಾವುದೇ ಸಿನಿಮಾ ಒಪ್ಪಿಕೊಂಡರೂ ನಯನತಾರಾ ಅವರು ಪ್ರಚಾರದಲ್ಲಿ ಭಾಗಿ ಆಗುವುದಿಲ್ಲ. ‘ಜವಾನ್’ ಚಿತ್ರದಲ್ಲೂ ಅದು ಮುಂದುವರಿದಿದೆ. ‘ಜವಾನ್’ ಸಿನಿಮಾದ ಆಡಿಯೋ ಲಾಂಚ್ ಇತ್ತೀಚೆಗೆ ನಡೆಯಿತು. ಆದರೆ, ನಯನತಾರಾ ಇದರಲ್ಲಿ ಭಾಗಿ ಆಗಿರಲಿಲ್ಲ. ಈ ಮೂಲಕ ಅವರು ಪ್ರಚಾರದಿಂದ ದೂರವೇ ಉಳಿದುಕೊಂಡರು. ಈಗ ಅವರು ಇನ್​ಸ್ಟಾಗ್ರಾಮ್​ಗೆ ಕಾಲಿಟ್ಟಿದ್ದು, ಅಲ್ಲಿ ಸಿನಿಮಾ ಪ್ರಮೋಷನ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಲಕ್ಷಾಂತರ ಹಿಂಬಾಲಕರು ಸಿಕ್ಕಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಅವರು ಅವಳಿ ಮಕ್ಕಳನ್ನು ಪಡೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ