ರೇವ್​ ಪಾರ್ಟಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ತೆಲುಗು ನಟಿ ಹೇಮಾಗೆ ಸಿಕ್ತು ಜಾಮೀನು

ಬೆಂಗಳೂರು ಗ್ರಾಮಾಂತರ ಎನ್​ಡಿಪಿಎಸ್​ ವಿಶೇಷ ಕೋರ್ಟ್‌ನಿಂದ ಟಾಲಿವುಡ್​ ನಟಿ ಹೇಮಾಗೆ ಜಾಮೀನು ಮಂಜೂರು ಮಾಡಲಾಗಿದೆ. ‘ಹೇಮಾ ಅವರಿಂದ ಯಾವುದೇ ಮಾದಕವಸ್ತುಗಳನ್ನು ವಶಕ್ಕೆ ಪಡೆದಿಲ್ಲ. ಅನೇಕ ದಿನಗಳ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ’ ಎಂದು ಹೇಮಾ ಪರ ವಕೀಲರಾದ ಮಹೇಶ್ ಕಿರಣ್ ಶೆಟ್ಟಿ ವಾದ ಮಾಡಿದ್ದಾರೆ. ಹೇಮಾಗೆ ಷರತ್ತುಬದ್ಧ ಜಾಮೀನು ನೀಡಿ ನ್ಯಾಯಾಲಯ ಆದೇಶಿಸಿದೆ.

ರೇವ್​ ಪಾರ್ಟಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ತೆಲುಗು ನಟಿ ಹೇಮಾಗೆ ಸಿಕ್ತು ಜಾಮೀನು
ಹೇಮಾ
Follow us
Ramesha M
| Updated By: ಮದನ್​ ಕುಮಾರ್​

Updated on:Jun 12, 2024 | 7:12 PM

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್​. ಫಾರ್ಮ್​ಹೌಸ್​ನಲ್ಲಿ ರೇವ್ ಪಾರ್ಟಿ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಹೇಮಾ (Hema) ಈಗ ಜಾಮೀನು ಪಡೆದಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಖ್ಯಾತಿ ಹೊಂದಿರುವ ನಟಿ ಹೇಮಾ ಅವರು ಹೈದರಾಬಾದ್​​ನಿಂದ ಬೆಂಗಳೂರಿಗೆ ಬಂದು ರೇವ್​ ಪಾರ್ಟಿ (Rave Party) ಮಾಡಿದ್ದರು ಎಂಬ ಆರೋಪ ಇದೆ. ಈ ಪ್ರಕರಣದಲ್ಲಿ ಅವರನ್ನು ಜೂನ್​ 14ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನಿಗಾಗಿ ಅವರು ಅರ್ಜಿ ಸಲ್ಲಿಸಿದ್ದರು. ಇಂದು (ಜೂನ್​ 12) ಹೇಮಾಗೆ ಜಾಮೀನು (Bail) ಮಂಜೂರು ಮಾಡಲಾಗಿದೆ

ಬೆಂಗಳೂರು ಗ್ರಾಮಾಂತರ ಎನ್​ಡಿಪಿಎಸ್​ ವಿಶೇಷ ಕೋರ್ಟ್‌ನಿಂದ ನಟಿ ಹೇಮಾಗೆ ಜಾಮೀನು ನೀಡಲಾಗಿದೆ. ಹೇಮಾಳಿಂದ ಯಾವುದೇ ಮಾದಕವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಾಡಿದ್ದಾರೆ. ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶಿಸಿದೆ.

ಕೆಲವು ದಿನಗಳ ಹಿಂದೆ ಸಿಸಿಬಿ ಪೊಲೀಸರು ಜೆ.ಆರ್​. ಫಾರ್ಮ್​ಹೌಸ್​ ಮೇಲೆ ದಾಳಿ ನಡೆಸಿದಾಗ ತೆಲುಗು ನಟಿ ಹೇಮಾ ಸಿಕ್ಕಿಬಿದ್ದಿದ್ದರು. ಆ ಸುದ್ದಿ ಹೊರಬಿದ್ದಾಗ ಅದೇ ಫಾರ್ಮ್​ಹೌಸ್​ನಿಂದಲೇ ವಿಡಿಯೋ ರೆಕಾರ್ಡ್​ ಮಾಡಿ ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹೇಮಾ ಹರಿಬಿಟ್ಟಿದ್ದರು. ತಾವು ಹೈದರಾಬಾದ್​ನಲ್ಲಿ ಇರುವುದಾಗಿ ಬಿಂಬಿಸಲು ಆ ವಿಡಿಯೋ ಮೂಲಕ ಹೇಮಾ ಪ್ರಯತ್ನಿಸಿದ್ದರು.

ಇದನ್ನೂ ಓದಿ: ಡ್ರಗ್ಸ್​ ಪಾರ್ಟಿ ಕೇಸ್​ನಲ್ಲಿ ಅರೆಸ್ಟ್​ ಆಗುವಾಗ ಮಾಧ್ಯಮಗಳ ಮೇಲೆ ನಟಿ ಹೇಮಾ ಗರಂ

ಅಲ್ಲದೇ ಬಂಧನ ಆಗುವಾಗಲೂ ಹೇಮಾ ಕೂಗಾಡಿದ್ದರು. ‘ನಾನೇನೂ ತಪ್ಪು ಮಾಡಿಲ್ಲ. ನಾನು ನಿಜವಾಗಿ ಹೈದರಾಬಾದ್​ನಿಂದ ವಿಡಿಯೋ ಮಾಡಿದ್ದು. ಸಿಸಿಬಿಯವರು ನೋಡಿ ಹೇಗೆ ಕರೆದುಕೊಂಡು ಹೋಗ್ತಿದ್ದಾರೆ. ನಾನು ಹುಟ್ಟುಹಬ್ಬದ ಕೇಕ್​ ಕತ್ತರಿಸಿ ಹೈದರಾಬಾದ್​ಗೆ ಬಂದುಬಿಟ್ಟೆ. ನಮ್ಮ ಮನೆಯಿಂದ ಬಿರಿಯಾನಿ ವಿಡಿಯೋ ಹಾಕಿದ್ದೆ. ನಾನು ಡ್ರಗ್ಸ್ ತಗೊಂಡಿಲ್ಲ’ ಎಂದು ಹೇಮಾ ಹೇಳಿದ್ದರು. ಈ ರೀತಿಯಾಗಿ ಹೇಮಾ ಅವರು ಈ ಕೇಸ್​ನಲ್ಲಿ ಶುರುವಿನಿಂದಲೂ ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ. ಆದರೆ ಪಾರ್ಟಿ ನಡೆದ ಜಾಗದಲ್ಲಿ ಹೇಮಾ ಇದ್ದರು ಎಂಬುದನ್ನು ಬೆಂಗಳೂರು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಖಚಿತ ಪಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:12 pm, Wed, 12 June 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್