AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’; ಜರ್ನಿ ನೆನೆದ ಕನ್ನಡದ ನಟ

ನೀನಾಸಂ ಸತೀಶ್ ಅವರ ಬದುಕಿನ ಯಶೋಗಾಥೆ ನಿಜಕ್ಕೂ ಸ್ಪೂರ್ತಿದಾಯಕ. ಮದ್ದೂರಿನ ಸಣ್ಣ ರೈತ ಕುಟುಂಬದಿಂದ ಬಂದ ಶಿವಕುಮಾರ್, ಗೋಪಾಲ್ ಥಿಯೇಟರ್‌ನಲ್ಲಿ ಕಸ ಗುಡಿಸಿ, ಟೀ ಮಾರಿ, ಟಾರ್ಚ್ ಬಿಟ್ಟು, ಬಳಿಕ ನೀನಾಸಂ ಸೇರಿ ಇಂದು ಕನ್ನಡ ಚಿತ್ರರಂಗದ ಬೇಡಿಕೆಯ ನಟನಾಗಿ ಹೊರಹೊಮ್ಮಿದ್ದಾರೆ. ಜಾತಿ ತಾರತಮ್ಯದ ವಿರುದ್ಧ ಹೋರಾಡುವ ಅವರ 'ದಿ ರೈಸ್ ಆಫ್ ಅಶೋಕ' ಚಿತ್ರದ ಯಶಸ್ಸಿಗೆ ಸತೀಶ್ ನೆರವು ಕೋರಿದ್ದಾರೆ.

‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’; ಜರ್ನಿ ನೆನೆದ ಕನ್ನಡದ ನಟ
ಸತೀಶ್
ರಾಜೇಶ್ ದುಗ್ಗುಮನೆ
|

Updated on: Feb 28, 2026 | 10:12 AM

Share

ನೀನಾಸಂ ಸತೀಶ್ (Ninasam Satish) ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನೀನಾಸಂ ಹಿನ್ನೆಲೆಯಿಂದ ಬಂದ ಅವರು ಇಂದು ಬೇಡಿಕೆಯ ನಟ ಎನಿಸಿಕೊಂಡಿದ್ದಾರೆ. ಅವರ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಗಮನ ಸೆಳೆದಿದೆ. ಜಾತಿ ತಾರತಮ್ಯ ವಿರುದ್ಧ ಹೋರಾಡುವ ಈ ಕಥೆ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಸತೀಶ್ ಅವರು ತಮ್ಮ ಜರ್ನಿ ನೆನಪಿಸಿಕೊಂಡಿದ್ದಾರೆ. ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ.

‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’ ಎಂದು ಮಾತು ಆರಂಭಿಸಿದ್ದಾರೆ ಸತೀಶ್. ‘ಇದು ವಿಧಿ ಬರೆದ ಕಥೆಯಲ್ಲ, ನಾನೇ ಬರೆದುಕೊಂಡ ಸಾಧಾರಣ ಕಥೆ. ನಮ್ಮೂರು ಮದ್ದೂರು ಬಳಿ ಇದೆ. ನಮಗೆ ಇರೋದು 30 ಗುಂಟೆ ಜಾಗ. ನಮ್ಮದು ಸಣ್ಣ ರೈತರ ಕುಟುಂಬ. ಛಲ ಎಲ್ಲಿಂದ ಬಂತು ಎಂದಾಗ ನಮ್ಮಮ್ಮ ನೆನಪಾಗುತ್ತಾಳೆ’ ಎಂದು ಹಳೆಯ ಕಥೆ ನೆನಪಿಸಿಕೊಂಡಿದ್ದಾರೆ ಸತೀಶ್.

‘ಬೆಂಗಳೂರಿಗೆ ಮೊದಲು ಬಂದಾಗ ಸಿಕ್ಕಿದ್ದು ಗೋಪಾಲ್ ಥಿಯೇಟರ್. ಇಲ್ಲಿ, ಕಸ ಗುಡಿಸಿದ್ದೆ, ಟೀ ಮಾರಿದ್ದೆ. ಟಾರ್ಚ್ ಬಿಟ್ಟಿದ್ದೆ. ಆಗ ಹೀರೋ ಆಗ್ತೀನಿ ಎಂದು ಎಂದಿಗೂ ಅಂದುಕೊಂಡಿರಲಿಲ್ಲ’ ಎಂದಿದ್ದಾರೆ ನೀನಾಸಂ ಸತೀಶ್. ಸಿಕ್ಕ ಸಿಕ್ಕ ಕೆಲಸ ಮಾಡಿದೆ. ಮತ್ತೆ ಊರು ಸೇರಿದೆ. ಆ ಬಳಿಕ ನಾಟಕ ಎಂಬ ಹೊಸ ಬಾಗಿಲು ತೆರೆಯಿತು’ ಎಂದು ಜರ್ನಿ ನೆನೆದರು ಸತೀಶ್.

ಇದನ್ನೂ ಓದಿ: ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಶೀರ್ಷಿಕೆ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್ ನೀನಾಸಂ

ಆ ಬಳಿಕ ಅವರು ನೀನಾಸಂ ಸೇರಿಕೊಂಡರು. ಇದಾದ ಬಳಿಕ ಅವರು ಮತ್ತೆ ಬೆಂಗಳೂರಿಗೆ ಬಂದರು. ‘ಹೀಗೆ ಶುರುವಾದ ಜರ್ನಿ ಇಲ್ಲಿವರೆಗೆ ಕರೆದುಕೊಂಡು ಬಂದು ನಿಲ್ಲಿಸಿದೆ. ಗೆಲುವು, ಸೋಲಿಗಿಂತ ಪ್ರಯತ್ನವನ್ನೇ ನಂಬಿದ್ದೇನೆ. ನಾನು ಪ್ರೀತಿಸಿ ಮಾಡಿರೋ ದಿ ರೈಸ್ ಆಫ್ ಅಶೋಕ ಚಿತ್ರ ಗೆಲ್ಲಿಸಿ’ ಎಂದು ಸತೀಶ್ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ