AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್​ಫ್ಲಿಕ್ಸ್​ ಅನ್ನೇ ಕಬ್ಜಾ ಮಾಡಿದ ಅಲ್ಲು ಅರ್ಜುನ್, ಭೇಷ್ ಎಂದ ಅಭಿಮಾನಿಗಳು

Pushpa 2: ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಕೆಲ ದಿನಗಳ ಹಿಂದಷ್ಟೆ ಒಟಿಟಿಗೆ ಬಿಡುಗಡೆ ಆಗಿದೆ. ನೆಟ್​ಫ್ಲಿಕ್ಸ್​ನಲ್ಲಿ ‘ಪುಷ್ಪ 2’ ಸ್ಟ್ರೀಂ ಆಗುತ್ತಿದ್ದು, ‘ಪುಷ್ಪ 2’ ಸಿನಿಮಾಕ್ಕೆ ವಿಶೇಷ ಗೌರವವನ್ನು ನೆಟ್​ಫ್ಲಿಕ್ಸ್ ನೀಡಿದೆ. ಇಡೀ ನೆಟ್​ಫ್ಲಿಕ್ಸ್​ ಈಗ ಪುಷ್ಪನ ಕಬ್ಜಾನಲ್ಲಿದೆ. ಅದು ಹೇಗೆ? ಏಕೆ? ಇಲ್ಲಿದೆ ಪೂರ್ಣ ವಿವರ...

ನೆಟ್​ಫ್ಲಿಕ್ಸ್​ ಅನ್ನೇ ಕಬ್ಜಾ ಮಾಡಿದ ಅಲ್ಲು ಅರ್ಜುನ್, ಭೇಷ್ ಎಂದ ಅಭಿಮಾನಿಗಳು
Netflx India
ಮಂಜುನಾಥ ಸಿ.
|

Updated on: Feb 02, 2025 | 7:55 AM

Share

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಬಿಡುಗಡೆ ಆಗಿ ಎರಡು ತಿಂಗಳಾಗುತ್ತಾ ಬಂದಿದೆ. ಡಿಸೆಂಬರ್ 5 ರಂದು ಈ ಸಿನಿಮಾ ತೆರೆಗೆ ಬಂದಿತ್ತು. ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆಗಳನ್ನೇ ಬರೆದಿದೆ ಈ ಸಿನಿಮಾ. ‘ಬಾಹುಬಲಿ 2’ ಹಾಗೂ ‘ದಂಗಲ್’ ಸಿನಿಮಾ ದಾಖಲೆಗಳನ್ನು ಮುರಿಯುವ ಭರವಸೆ ಮೂಡಿಸಿತ್ತು. ‘ಕೆಜಿಎಫ್ 2’ ಬಳಿಕ ಭಾರತದ ಯಾವುದೇ ಸಿನಿಮಾ ಗಳಿಸದಷ್ಟು ಹಣವನ್ನು ‘ಪುಷ್ಪ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಗುಡ್ಡೆ ಹಾಕಿದೆ. ಇದೀಗ ಈ ಸಿನಿಮಾ ಒಟಿಟಿಯಲ್ಲಿ ಬರುತ್ತಿತ್ತು, ಒಟಿಟಿಯಲ್ಲಿ ಪುಷ್ಪನಿಗೆ ವಿಶೇಷ ಗೌರವ ದೊರೆತಿದೆ.

ಪುಷ್ಪ, ‘ನೆಟ್​ಫ್ಲಿಕ್ಸ್​’ ಮೇಲೆ ಕಬ್ಜ ಮಾಡಿಕೊಂಡಿದ್ದಾರೆ! ಹೌದು, ಸ್ವತಃ ನೆಟ್​ಫ್ಲಿಕ್ಸ್​ ಹೀಗೆ ಹೇಳಿಕೊಂಡಿದೆ. ನೆಟ್​ಫ್ಲಿಕ್ಸ್​ ಇಂಡಿಯಾದ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ‘ಪುಷ್ಪ 2’ ಸಿನಿಮಾದ ಅಪ್​ಡೇಟ್​ಗಳು ಹರಿದಾಡುತ್ತಿದ್ದು, ಅಧಿಕೃತ ಸಾಮಾಜಿಕ ಜಾಲತಾಣ ಪೇಜ್​ನಲ್ಲಿ ‘ಈ ಪೇಜ್ ಈಗ ಪುಷ್ಪನ ಆಡಳಿತಕ್ಕೆ ಒಳಪಟ್ಟಿದೆ’ ಎಂದು ಬರೆಯಲಾಗಿದೆ. ಆ ಮೂಲಕ ‘ಪುಷ್ಪ 2’ ಸಿನಿಮಾಕ್ಕೆ ವಿಶೇಷ ಗೌರವ ನೀಡಲಾಗಿದೆ.

‘ಪುಷ್ಪ 2’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಈಗಾಗಲೇ ಬಿಡುಗಡೆ ಆಗಿದೆ. ಡಿಸೆಂಬರ್ 05 ರಂದು ಬಿಡುಗಡೆ ಆಗಿದ್ದಾಗ ಇರದೇ ಇದ್ದ ಆ ನಂತರ ಸೇರಿಸಲಾದ 25 ನಿಮಿಷಗಳ ಹೆಚ್ಚುವರಿ ದೃಶ್ಯಗಳನ್ನು ಸಹ ‘ಪುಷ್ಪ 2’ ಸಿನಿಮಾಕ್ಕೆ ಸೇರಿಸಿ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಪುಷ್ಪ 2’ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ನೆಟ್​ಫ್ಲಿಕ್ಸ್​ನಲ್ಲಿ ತೆರೆಗೆ ಬಂದಿದೆ. ಹಿಂದಿ ಭಾಷೆಯನ್ನು ಶೀಘ್ರವೇ ಸೇರಿಸಲಾಗುವುದು ಎಂದು ಚಿತ್ರತಂಡ ಹೇಳಿತ್ತು.

ಇದನ್ನೂ ಓದಿ:Pushpa 2: ನೆಟ್​ಫ್ಲಿಕ್ಸ್​ನಲ್ಲಿ ‘ಪುಷ್ಪ 2’; ಕನ್ನಡ ಪ್ರೇಕ್ಷಕರಿಗೆ ಇಲ್ಲಿಯೂ ನಿರಾಸೆ

‘ಪುಷ್ಪ 2’ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡಿದ್ದು, ಡಿಸೆಂಬರ್ 05 ರಂದು ಬಿಡುಗಡೆ ಆಗಿದ್ದ ಈ ಸಿನಿಮಾ ಭಾರಿ ದೊಡ್ಡ ಕಲೆಕ್ಷನ್ ಮಾಡಿದೆ. ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಸುನಿಲ್, ರಾವ್ ರಮೇಶ್, ಕನ್ನಡಿಗರಾದ ಡಾಲಿ ಧನಂಜಯ್, ತಾರಕ್ ಪೊನ್ನಣ್ಣ, ಶ್ರೀಲೀಲಾ, ಜಗಪತಿ ಬಾಬು ಇನ್ನೂ ಹಲವರು ನಟಿಸಿದ್ದರು. ಸಿನಿಮಾದ ಮೇಲೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದರು. ಸಂಗೀತ ನೀಡಿದ್ದು ದೇವಿಶ್ರೀ ಪ್ರಸಾದ್ ಮತ್ತು ಎಸ್ ತಮನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ