AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾಗುತ್ತಾ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್​ ದಿನಾಂಕ? ಗೊಂದಲ ಶುರು

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ ಆದಾಗಿನಿಂದ ಕೆಲವು ಚಿತ್ರತಂಡಗಳಿಗೆ ಹೊಸ ಚಿಂತೆ ಶುರುವಾಗಿದೆ. ರಾಜಕೀಯ ಚಟುವಟಿಕೆಗಳು ಜೋರಾಗಿರುವ ಸಂದರ್ಭದಲ್ಲಿ ಸಿನಿಮಾ ಬಿಡುಗಡೆ ಮಾಡಿದರೆ ಜನರು ಬರುತ್ತಾರೋ ಇಲ್ಲವೋ ಎಂಬ ಪ್ರಶ್ನೆ ಮೂಡಿದೆ. ‘ಕಲ್ಕಿ 2898 ಎಡಿ’ ಸಿನಿಮಾದ ರಿಲೀಸ್​ ದಿನಾಂಕದ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಹೊಸ ಪ್ರಶ್ನೆ ಹುಟ್ಟಿಕೊಂಡಿದೆ.

ಬದಲಾಗುತ್ತಾ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್​ ದಿನಾಂಕ? ಗೊಂದಲ ಶುರು
ಪ್ರಭಾಸ್​
ಮದನ್​ ಕುಮಾರ್​
|

Updated on: Mar 17, 2024 | 7:35 PM

Share

ನಟ ಪ್ರಭಾಸ್​ ಅವರ ಅಭಿಮಾನಿಗಳು ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಈ ಚಿತ್ರದಲ್ಲಿ ಅನೇಕ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಮೇ 9ರಂದು ‘ಕಲ್ಕಿ 2898 ಎಡಿ’ ಸಿನಿಮಾ ಬಿಡುಗಡೆ ಆಗಲಿದೆ ಎಂದು ಈಗಾಗಲೇ ಚಿತ್ರತಂಡ ಘೋಷಿಸಿದೆ. ಆದರೆ ಈಗ ಒಂದು ಗೊಂದಲ ಶುರುವಾಗಿದೆ. ಈ ಚಿತ್ರದ ರಿಲೀಸ್​ ದಿನಾಂಕದಲ್ಲಿ (Kalki 2898 AD Release Date) ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಕೆಲವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಲೋಕಸಭಾ ಚುನಾವಣೆ! ಹೌದು, ಲೋಕಸಭಾ ಚುನಾವಣೆ (Lok Sabha Election) ನಡೆಯುವ ಸಂದರ್ಭದಲ್ಲೇ ‘ಕಲ್ಕಿ 2898 ಎಡಿ’ ಸಿನಿಮಾ ತೆರೆಕಾಣುತ್ತಿರುವುದರಿಂದ ಈ ಗೊಂದಲ ಮೂಡಿದೆ.

ತೆಲಂಗಾಣದಲ್ಲಿ ಮೇ 13ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಕೆಲವು ಸೆಲೆಬ್ರಿಟಿಗಳು ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ. ಎಲ್ಲರ ಗಮನ ರಾಜಕೀಯ ಚುಟುವಟಿಕೆಗಳ ಮೇಲೆ ಇರುತ್ತದೆ. ಎಲ್ಲೆಲ್ಲೂ ಎಲೆಕ್ಷನ್​ ಕುರಿತಾದ ಸುದ್ದಿಯೇ ಹರಿದಾಡುತ್ತಾ ಇರುತ್ತದೆ. ರಾಜಕೀಯ ಪಕ್ಷಗಳ ಜಟಾಪಟಿ ಜೋರಾಗಿರುತ್ತದೆ. ಇಂಥ ಸಂದರ್ಭದಲ್ಲಿ ಸಿನಿಮಾ ರಿಲೀಸ್​ ಮಾಡುವುದು ಸೂಕ್ತವೋ ಅಥವಾ ಅಲ್ಲವೋ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

‘ಕಲ್ಕಿ 2898 ಎಡಿ’ ಚಿತ್ರತಂಡದ ಕೆಲವರು ಮೇ 9ರಂದು ರಿಲೀಸ್​ ಮಾಡುವುದೇ ಉತ್ತಮ ಎನ್ನುತ್ತಿದ್ದಾರಂತೆ. ಆದರೆ ಚಿತ್ರದ ಮಾರ್ಕೆಟಿಂಗ್​ ತಂಡದವರು ಬೇರೆ ದಿನಾಂಕ ಆಯ್ಕೆ ಮಾಡಿಕೊಳ್ಳುವುದು ಸೂಕ್ತ ಅಂತ ಸಲಹೆ ನೀಡಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತವಾಗಿ ಯಾವುದೇ ಪ್ರಕಟಣೆ ಹೊರಬಿದ್ದಿಲ್ಲ. ಹಾಗಾಗಿ ಮೇ 9ರಂದು ‘ಕಲ್ಕಿ 2898 ಎಡಿ’ ಸಿನಿಮಾ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ಸದ್ಯಕ್ಕೆ ನಂಬಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಪವನ್​ ಕಲ್ಯಾಣ್​ ಎದುರು ರಾಮ್​ ಗೋಪಾಲ್​ ವರ್ಮಾ ಸ್ಪರ್ಧೆ

ಈ ಸಿನಿಮಾದಲ್ಲಿ ಪ್ರಭಾಸ್​ ಜೊತೆ ಅಮಿತಾಭ್​ ಬಚ್ಚನ್​, ಕಮಲ್​ ಹಾಸನ್​, ದೀಪಿಕಾ ಪಡುಕೋಣೆ, ದಿಶಾ ಪಟಾಣಿ ಮುಂತಾದ ಸ್ಟಾರ್​ ಕಲಾವಿದರು ಅಭಿನಯಿಸುತ್ತಿದ್ದಾರೆ. ನಾಗ್​ ಅಶ್ವಿನ್​​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ‘ಸಲಾರ್​’ ಗೆಲುವಿನ ಬಳಿಕ ಬರುತ್ತಿರುವ ಸಿನಿಮಾ ಆದ್ದರಿಂದ ಪ್ರಭಾಸ್​ ಅಭಿಮಾನಿಗಳಿಗೆ ‘ಕಲ್ಕಿ 2898 ಎಡಿ’ ಚಿತ್ರದ ಮೇಲೆ ಹೆಚ್ಚು ನಿರೀಕ್ಷೆ ಇದೆ. ರಿಲೀಸ್​ ಡೇಟ್​ ಬಗ್ಗೆ ಮೂಡಿರುವ ಗೊಂದಲಕ್ಕೆ ಚಿತ್ರತಂಡದವರೇ ಸ್ಪಷ್ಟನೆ ನೀಡಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.