AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ, ಸುಂದರ ಪ್ರೇಮಕಥೆ ಹೇಳುವ ‘ಕನಸಲು’ ಆಲ್ಬಂ ಹಾಡು ಬಿಡುಗಡೆ

ಶ್ರೀರಾಮ್ ಗಂಧರ್ವ ಅವರು ‘ಕನಸಲು’ ಎಂಬ ಆಲ್ಬಂ ಗೀತೆಯನ್ನು ಹೊರತಂದಿದ್ದಾರೆ. ಇದರಲ್ಲಿ ದರ್ಶನ್ ಮತ್ತು ಗಗನಾ ನಟಿಸಿದ್ದಾರೆ. ರಿಚರ್ಡ್ ಅವರು ಈ ಹಾಡನ್ನು ನಿರ್ಮಿಸಿದ್ದಾರೆ. ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಂಡದವರು ಒಂದಷ್ಟು ಮಾಹಿತಿ ಹಂಚಿಕೊಂಡರು. ‘ಆನಂದ್ ಆಡಿಯೋ’ ಮೂಲಕ ‘ಕನಸಲು’ ಗೀತೆ ರಿಲೀಸ್ ಆಗಿದೆ.

ಸರಳ, ಸುಂದರ ಪ್ರೇಮಕಥೆ ಹೇಳುವ ‘ಕನಸಲು’ ಆಲ್ಬಂ ಹಾಡು ಬಿಡುಗಡೆ
Kanasalu TeamImage Credit source: Tv9 Kannada
ಮದನ್​ ಕುಮಾರ್​
|

Updated on: Sep 18, 2026 | 4:42 PM

Share

ಯುವ ಪ್ರತಿಭೆ ಶ್ರೀರಾಮ್ ಗಂಧರ್ವ ಸಾರಥ್ಯದಲ್ಲಿ ಮೂಡಿಬಂದಿರುವ ನವಿರಾದ ಪ್ರೇಮಕಥೆಯ ‘ಕನಸಲು…’ ಆಲ್ಬಂ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರೋದ್ಯಮದ ಹಲವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಡನ್ನು ಪ್ರದರ್ಶಿಸಿ ಶುಭಕೋರಲಾಯಿತು. ಸಾಧಾರಣ ಹಳ್ಳಿಯ ಹಿನ್ನೆಲೆಯಲ್ಲಿ ನಡೆಯುವ ಸುಂದರ ಪ್ರೇಮಕಥೆ ಈ ಹಾಡಿನಲ್ಲಿದೆ. ಟೈಲರಿಂಗ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕ, ಅಲ್ಲಿಗೆ ಬರುವ ಮೀರಾ ಎಂಬ ಯುವತಿಯ ಪ್ರೀತಿಯಲ್ಲಿ ಬೀಳುತ್ತಾನೆ. ಆತನ ಪ್ರಾಮಾಣಿಕತೆಗೆ ಒಲಿಯುವ ಯುವತಿಯ ಪ್ರತಿಕ್ರಿಯೆ ಏನು ಎಂಬುದನ್ನು ಹಾಡಿನ ಕೊನೆಯಲ್ಲಿ ಕುತೂಹಲಕಾರಿಯಾಗಿ ತೋರಿಸಲಾಗಿದೆ.

ಶ್ರೀರಾಮ್ ಗಂಧರ್ವ ಅವರು ಈ ಹಾಡಿಗೆ ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿ, ಸ್ವತಃ ಹಾಡಿ ನಿರ್ದೇಶನವನ್ನೂ ಮಾಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿರ್ದೇಶಕನಾಗಿ ತಮ್ಮ ಮೂರು ಸಿನಿಮಾಗಳು ಸಿದ್ಧವಾಗುತ್ತಿವೆ ಎಂದು ತಿಳಿಸಿದರು. ಕಿಶೋರ್, ರವಿಶಂಕರ್ ಗೌಡ ನಟನೆಯ ಚಿತ್ರಗಳು ಹಾಗೂ ಒಂದು ಬಾಲಿವುಡ್ ಸಿನಿಮಾ ಕೂಡ ಅದರಲ್ಲಿ ಸೇರಿದೆ ಎಂದು ಅವರು ಹೇಳಿದರು.

ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ‘ಕಂಗ್ರಾಜುಲೇಶನ್ಸ್ ಬ್ರದರ್ಸ್’ ಚಿತ್ರದ ನಾಯಕ ರಕ್ಷಿತ್ ನಾಗ್ ಮಾತನಾಡಿ, ‘ಜನರು ಬೇಗ ಮರೆಯುವುದರಿಂದ ಶ್ರೀರಾಮ್ ಅವರು ನಿರಂತರವಾಗಿ ಇಂತಹ ಉತ್ತಮ ಹಾಡುಗಳನ್ನು ನೀಡುತ್ತಿರಬೇಕು’ ಎಂದು ಸಲಹೆ ನೀಡಿದರು. ಖ್ಯಾತ ಜಾನಪದ ಗಾಯಕ ಜೋಗಿಲಾ ಸಿದ್ಧರಾಜು ಮಾತನಾಡಿ, ‘ಕನ್ನಡದಲ್ಲಿ ಹೆಚ್ಚಾಗಿ ಹೊರಗಿನ ಗಾಯಕರನ್ನೇ ಬಳಸಿಕೊಳ್ಳಲಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಶ್ರೀರಾಮ್ ಅವರಂತಹ ಸ್ಥಳೀಯ ಬಹುಮುಖ ಪ್ರತಿಭೆಗಳು ಹೊರಬರಲು ಇಂತಹ ಆಲ್ಬಮ್‌ಗಳು ಅಗತ್ಯ’ ಎಂದರು.

‘ಕನಸಲು..’ ಆಲ್ಬಂ ಗೀತೆ:

ಶ್ರೀರಾಮ್ ಅವರ ತಂದೆ ಗಂಧರ್ವ ಅವರು ಮಾತನಾಡಿ, ‘ಎರಡೂವರೆ ಗಂಟೆಯ ಸಿನಿಮಾದಲ್ಲಿ ಹೇಳಲಾಗದ ಭಾವನೆಯನ್ನು ಕೆಲವೇ ನಿಮಿಷಗಳ ಆಲ್ಬಮ್‌ನಲ್ಲಿ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ’ ಎಂದು ಮಗನ ತಂಡವನ್ನು ಹಾರೈಸಿದರು. ಪ್ರಿಯಕರನಾಗಿ ಅಭಿನಯಿಸಿರುವ ದರ್ಶನ್ ಅವರಿಗೆ ಇದು ಮೊದಲ ಕ್ಯಾಮೆರಾ ಅನುಭವವಾದರೆ, ಪ್ರೇಯಸಿ ಮೀರಾ ಪಾತ್ರದಲ್ಲಿ ನಟಿಸಿರುವ ಗಗನಾ ಅವರಿಗೆ ಇದು ಮೊದಲ ಆಲ್ಬಮ್ ಹಾಡಾಗಿದೆ.

ಇದನ್ನೂ ಓದಿ: ಡ್ರೋನ್​ನಲ್ಲಿ ಚಿತ್ರಿತವಾಯ್ತು ‘ಗಗನ ಮಿಲನ’ ರೊಮ್ಯಾಂಟಿಕ್ ಆಲ್ಬಂ ಗೀತೆ

‘ಡಾಲಿ ಪಿಕ್ಚರ್ಸ್’ ಬ್ಯಾನರ್‌ನಲ್ಲಿ ರಿಚರ್ಡ್ ಅವರು ‘ಕನಸಲು..’ ಆಲ್ಬಂ ಗೀತೆಯನ್ನು ನಿರ್ಮಿಸಿದ್ದಾರೆ. ರವಿಕುಮಾರ್ ಬಿ.ಎಮ್. ಅವರು ಛಾಯಾಗ್ರಹಣ ಹಾಗೂ ಸಂಕಲನದ ಜವಾಬ್ದಾರಿ ನಿರ್ವಹಿಸಿದ್ದಾರೆ. ಕೇವಲ ಎರಡೇ ದಿನಗಳಲ್ಲಿ ಈ ಹಾಡಿನ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ‘ಆನಂದ್ ಆಡಿಯೋ’ ಮೂಲಕ ಈ ಹಾಡು ಬಿಡುಗಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?