AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತ-ಸಿಕ್ತ ರಾಯ: ‘ಟಾಕ್ಸಿಕ್’ ಹೊಸ ಪೋಸ್ಟರ್ ರಿಲೀಸ್

Toxic movie: ‘ಟಾಕ್ಸಿಕ್’ ಸಿನಿಮಾದ ಕೆಲ ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು ಸಖತ್ ಸದ್ದು ಮಾಡುತ್ತಿವೆ. ಸಿನಿಮಾದ ಟೀಸರ್​​ಗೆ ಸಹ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಯಶ್ ಅವರು ಎರಡು ಭಿನ್ನ ಪಾತ್ರಗಳಲ್ಲಿ ಈ ಸಿನಿಮಾಗಳಲ್ಲಿ ನಟಿಸಿದ್ದು, ಎರಡೂ ಪಾತ್ರಗಳ ಟೀಸರ್ ಈಗಾಗಲೇ ಬಿಡುಗಡೆ ಆಗಿದೆ. ಇದೀಗ ‘ಟಾಕ್ಸಿಕ್’ ಸಿನಿಮಾದ ಹೊಸ ಪೋಸ್ಟರ್ ಒಂದನ್ನು ಚಿತ್ರತಂಡ ಹಂಚಿಕೊಂಡಿದೆ.

ರಕ್ತ-ಸಿಕ್ತ ರಾಯ: ‘ಟಾಕ್ಸಿಕ್’ ಹೊಸ ಪೋಸ್ಟರ್ ರಿಲೀಸ್
Toxic Movie
ಮಂಜುನಾಥ ಸಿ.
|

Updated on: Jul 26, 2026 | 4:47 PM

Share

‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಬಿಡುಗಡೆಗೆ ಸರಿಯಾಗಿ ಒಂದು ತಿಂಗಳು ಬಾಕಿ ಉಳಿದಿದೆ. ಇಂದಿಗೆ ಸರಿಯಾಗಿ ಒಂದು ತಿಂಗಳ ಬಳಿಕ ಅಂದರೆ ಆಗಸ್ಟ್ 26ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಸಿನಿಮಾದ ಕೆಲ ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು ಸಖತ್ ಸದ್ದು ಮಾಡುತ್ತಿವೆ. ಸಿನಿಮಾದ ಟೀಸರ್​​ಗೆ ಸಹ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಯಶ್ ಅವರು ಎರಡು ಭಿನ್ನ ಪಾತ್ರಗಳಲ್ಲಿ ಈ ಸಿನಿಮಾಗಳಲ್ಲಿ ನಟಿಸಿದ್ದು, ಎರಡೂ ಪಾತ್ರಗಳ ಟೀಸರ್ ಈಗಾಗಲೇ ಬಿಡುಗಡೆ ಆಗಿದೆ. ಇದೀಗ ‘ಟಾಕ್ಸಿಕ್’ ಸಿನಿಮಾದ ಹೊಸ ಪೋಸ್ಟರ್ ಒಂದನ್ನು ಚಿತ್ರತಂಡ ಹಂಚಿಕೊಂಡಿದೆ.

ಈ ಹಿಂದೆ ಬಿಡುಗಡೆಯಾದ ಟೀಸರ್‌ನಲ್ಲಿ ಯಶ್ ಅವರ ಮಾಸ್ ಎಂಟ್ರಿ ಮತ್ತು ಅತಿಯಾದ ರಕ್ತಪಾತ ಹಾಗೂ ವೈಲೆನ್ಸ್ ಸಿನಿಪ್ರೇಮಿಗಳ ಗಮನ ಸೆಳೆದಿತ್ತು. ಆಕ್ಷನ್ ಸಿನಿಮಾಗಳನ್ನು ಇಷ್ಟಪಡುವವರಿಗೆ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ರೌದ್ರಾವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಸ್ಪಷ್ಟವಾಗಿತ್ತು. ಈಗ ಬಂದಿರುವ ಹೊಸ ಪೋಸ್ಟರ್ ಕೂಡ ಅದೇ ಮಟ್ಟದ ಹೈಪ್ ಸೃಷ್ಟಿಸಿದೆ. ಮತ್ತೊಮ್ಮೆ ರಕ್ತ-ಸಿಕ್ತವಾಗಿ ನಟ ಯಶ್ ಕಾಣಿಸಿಕೊಂಡಿದ್ದಾರೆ.

ಯಶ್ ಅವರು ರಾಯ ಮತ್ತು ಟಿಕೆಟ್ ಎಂಬ ಎರಡು ಪಾತ್ರಗಳಲ್ಲಿ ‘ಟಾಕ್ಸಿಕ್’ ಸಿನಿಮಾನಲ್ಲಿ ನಟಿಸಿದ್ದಾರೆ. ಇದೀಗ ಯಶ್ ಅವರ ರಾಯ ಪಾತ್ರದ ಪೋಸ್ಟರ್ ಅನ್ನು ಬಿಡುಗಡೆ ಮಾಡಾಗಿದೆ. ಈ ಬಾರಿ ಸಂಪೂರ್ಣವಾಗಿ ಭಿನ್ನವಾದ ಮತ್ತು ಸ್ಟೈಲಿಶ್ ಆದ ಲುಕ್‌ನಲ್ಲಿ ಮಿಂಚಿದ್ದಾರೆ. ಮೆರೂನ್ ಬಣ್ಣದ ಜಾಕೆಟ್ ಧರಿಸಿ, ಕೈಯಲ್ಲಿ ರಕ್ತಸಿಕ್ತ ಬೆರಳುಗಳೊಂದಿಗೆ, ತುಂಟ ಹಾಗೂ ಗೆಲುವಿನ ನಗೆ ಬೀರುತ್ತಾ ಸಿಗರೇಟಿಗೆ ಬೆಂಕಿ ಹಚ್ಚುತ್ತಿರುವ ಯಶ್ ಅವರ ಈ ಹೊಸ ಲುಕ್ ಅಭಿಮಾನಿಗಳಿಗೆ ಇಷ್ಟವಾಗುವಂತಿದೆ.

ಇದನ್ನೂ ಓದಿ:‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರ್ಮಾಪಕ ಕೆವಿಎನ್ ಹೇಳಿದ್ದೇನು?

‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಗೀತು ಮೋಹನ್​​ದಾಸ್. ಸಿನಿಮಾಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಕೆಲ ಹಾಡುಗಳನ್ನು ಹಿಂದಿ ಸಂಗೀತ ನಿರ್ದೇಶಕರು ಸಂಗೀತ ನೀಡಿದ್ದಾರೆ. ಸಿನಿಮಾ ಆಗಸ್ಟ್ 26ಕ್ಕೆ ವಿಶ್ವದಾದ್ಯಂತ ಬಲು ಅದ್ಧೂರಿಯಾಗಿ ರಿಲೀಸ್ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More